DAKSHINA KANNADA
Mangaluru: ಆತ್ಮಶಕ್ತಿ ಸ್ಥಾಪನಾ ದಿನ: ಸೌರ ವಿದ್ಯುತ್ ಘಟಕ ಉದ್ಘಾಟನೆ
Published
12 months agoon
By
Adminಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಾಪನಾ ದಿನಾಚರಣೆ ಮತ್ತು ಹವಾ ನಿಯಂತ್ರಿತ ಸಭಾಂಗಣ ಹಾಗೂ ನೂತನ ಸೌರ ವಿದ್ಯುತ್ ಘಟಕದ ಉದ್ಘಾಟನೆ ಭಾನುವಾರ ನೆರವೇರಿತು.
ಪಡೀಲ್ ಬೈರಾಡಿ ಕೆರೆ ಬಳಿ ಇರುವ ಆತ್ಮ ಶಕ್ತಿ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ನೂತನ ಸೌರ ವಿದ್ಯುತ್ ಘಟಕವನ್ನು ಮತ್ತು ಶಾಸಕ ವೇದವ್ಯಾಸ ಕಾಮತ್ ಅವರು ಹವಾ ನಿಯಂತ್ರಿತ ಸಭಾಂಗಣವನ್ನು ಉದ್ಘಾಟಿಸಿದರು. ಬೆಂಗಳೂರಿನ ನಸೀಮಾ ಇನಿಸ್ಟಿಟ್ಯೂಟಿನ ಅಧ್ಯಕ್ಷ ಜುಲ್ಫಿಕರ್ ಅಹಮದ್ ಯು.ಟಿ. ಅವರು ಪಿಗ್ಮಿ ಏಜಂಟರಿಗೆ ಆರೋಗ್ಯ ವಿಮೆ ಕಾರ್ಡ್ ವಿತರಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರಿ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಾಮನ ಕೆ. ಮುಖ್ಯ ಅತಿಥಿಯಾಗಿದ್ದರು. ರಮಾನಾಥ ರೈ ಅವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ 12 ವರ್ಷ ಅವಧಿಯಲ್ಲೇ ದೊಡ್ಡ ಸಂಸ್ಥೆಯಾಗಿ ಬೆಳೆದಿದೆ. 150 ಕೋಟಿ ರೂಪಾಯಿಗೂ ಮಿಕ್ಕಿ ವ್ಯವಹಾರ ನಡೆಸಿ ಮಹತ್ವದ ಸಾಧನೆ ಮಾಡಿದೆ. ಸಹಕಾರಿ ಸಂಸ್ಥೆಯಿಂದ ಎಲ್ಲ ವ್ಯವಹಾರವನ್ನೂ ನಡೆಸ ಬಹುದು. ಸಮಾಜದ ಏಳಿಗೆಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಮಹತ್ವದ್ದು ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ವ್ಯವಸ್ಥೆ ಬಲಿಷ್ಟವಾಗಿದ್ದು, ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುತ್ತದೆ. ಜನರ ಅಭಿವೃದ್ಧಿಗೂ ಸಹಕರಿಸುತ್ತದೆ ಎಂದರು. ಸಹಕಾರಿ ರತ್ನ ಚಿತ್ತರಂಜನ್ ಬೋಳಾರ್ ಅವರು ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಪಿಗ್ಮಿ ಏಜಂಟರಿಗೆ ವಿಮೆ ಮುಂದುವರಿಸಲಾಗುವುದು ಎಂದರು. ಜುಲ್ಫಿಕರ್ ಅಹಮದ್ ಯು,ಟಿ. ಅವರು ಮಾತನಾಡಿ ಜನರಿಗೆ ಕಷ್ಟದ ಸಂದರ್ಭದಲ್ಲಿ ನೆರವಾಗುವುದು ಸಹಕಾರಿ ಸಂಘಗಳು ಎಂದರು. ಹಿರಿಯ ನಾಗರಿಕರು ನಿವೃತ್ತಿಯ ಬಳಿಕ ಮನೆಯಲ್ಲಿ ಕುಳಿತುಕೊಳ್ಳದೆ ತಮ್ಮ ಅನುಭವವನ್ನು ಸಂಸ್ಥೆಗಳಿಗೆ ನೀಡ ಬೇಕೆಂದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ನೇಮಿರಾಜ್ ಪಿ. ಸ್ವಾಗತಿಸಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಸೌಮ್ಯಾ ವಿಜಯ್ ವಂದಿಸಿದರು. ನಿರ್ದೇಶಕರಾದ ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಸೀತಾರಾಮ ಎನ್., ರಮಾನಾಥ ಸನಿಲ್, ಚಂದ್ರಹಾಸ ಮರೋಳಿ, ಮುದ್ದು ಮೂಡುಬೆಳ್ಳೆ, ಗೋಪಾಲ ಎಂ., ದಿವಾಕರ ಬಿ.ಪಿ., ಚಂದ್ರಾವತಿ, ಉಮಾವತಿ ಮತ್ತು ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
DAKSHINA KANNADA
ತಪ್ಪಿಸಿಕೊಳ್ಳಲು ಯತ್ನಿಸಿದ ಬ್ಯಾಂಕ್ ದರೋಡೆ ಆರೋಪಿ ಕಾಲಿಗೆ ಗುಂಡು..!
Published
46 minutes agoon
21/01/2025By
NEWS DESKಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಓರ್ವನಿಗೆ ಪೊಲೀಸರು ಹಾರಿಸಿದ ಗುಂಡು ಕಾಲಿಗೆ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17ರಂದು ನಡೆದ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಸಮೀಪದ ಪದ್ಮನೇರಿ ಗ್ರಾಮದಲ್ಲಿ ಬಂಧಿಸಿ ಕರೆತರಲಾಗಿದ್ದು ಇಂದು ಸ್ಥಳ ಮಹಜರು ನಡೆಸಲಾಗಿದೆ. ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಣಿವಣ್ಣನ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸಿಸಿಬಿ ಇನ್‌ಸ್ಪೆಕ್ಟರ್ ರಫೀಕ್ ಅವರು ಆತನ ಕಾಲಿಗೆ ಗುಂಡು ಹಾರಿಸಿ ಮತ್ತೆ ವಶಕ್ಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ.
ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿಯನ್ನು ಪೊಲೀಸರು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
DAKSHINA KANNADA
ಗೋವುಗಳ ಮೇಲಿನ ಪೈಶಾಚಿಕ ಕೃ*ತ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Published
2 hours agoon
21/01/2025By
NEWS DESK4ಮಂಗಳೂರು : ಬೆಂಗಳೂರಿನ ಚಾಮರಾಜನಗರದಲ್ಲಿ ಹಿಂದುಗಳು ಆರಾಧಿಸುವ ಗೋಮಾತೆಯ ಕೆಚ್ಚಲನ್ನು ಕತ್ತರಿಸಿ ವಿ*ಕೃತಿ ಮೆರೆದಿರುವುದು ಹಾಗೂ ನಂಜನಗೂಡಿನಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ದಾನವಾಗಿ ನೀಡಿದ್ದ ಹಸುವಿನ ಮೇಲೆ ದುಷ್ಟರು ಮಾ*ರಕಾಸ್ತ್ರದಿಂದ ದಾ*ಳಿ ಮಾಡಿ ಹಸುವಿನ ಬಾಲವನ್ನು ಕತ್ತರಿಸಿ ಪೈಶಾಚಿಕ ಕೃ*ತ್ಯ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಗೆ ವಿಶ್ವ ಹಿಂದು ಪರಿಷತ್ ಸೇರಿದಂತೆ ಹಲವು ಹಿಂದು ಪರ ಸಂಘಟನೆಗಳು ಸಾಥ್ ನೀಡಿದ್ದವು. ಮೊದಲಿಗೆ ಗೋವಿಗೆ ವಿಶೇಷ ಪೂಜೆ ಮಾಡುವ ಮೂಲಕ ಗೋವನ್ನು ಪೂಜಿಸಲಾಯಿತು.
ಬಳಿಕ ನಡೆದ ಸಭೆಯಲ್ಲಿ ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದುಗಳು ಪವಿತ್ರ ಎಂದು ಪೂಜಿಸುವ ಗೋವಿನ ಮೇಲೆ ನಿರಂತರವಾಗಿ ದೌರ್ಜ*ನ್ಯ ದಬ್ಬಾಳಿಕೆ ನಡೆಯುತ್ತಿದೆ. ಯಾವುದೇ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಇಲ್ಲಿ ದೇವಸ್ಥಾನಕ್ಕೆ ಹೋಗಿ ಗಂಧಪ್ರಸಾದ ಸ್ವೀಕರಿಸುತ್ತಾರೆ. ಆದರೆ ಗೋವಿನ ಮೇಲೆ ದೌರ್ಜ*ನ್ಯ ನಡೆದಾಗ ತಮ್ಮ ಬಾಯಿ ಬಿಚ್ಚುತ್ತಿಲ್ಲ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಶರಣ್ ಪಂಪ್‌ವೆಲ್, ಶಿವಾನಂದ ಮೆಂಡನ್, ಗೋಪಾಲ್ ಕುತ್ತಾರ್ ಮೊದಲಾದವರು ಭಾಗಿಯಾಗಿದ್ದರು.
DAKSHINA KANNADA
ಕಾರ್ಕಳ : ಕಲಿಯಲು ಕಷ್ಟ ಎಂದು ಪ್ರಾ*ಣ ಕಳೆದುಕೊಂಡ ವಿದ್ಯಾರ್ಥಿ
Published
7 hours agoon
21/01/2025ಕಾರ್ಕಳ: ಕಾಲೇಜಿನಲ್ಲಿ ಕಲಿಯಲು ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಎಂಬಿಎ ವಿದ್ಯಾರ್ಥಿಯೋರ್ವ ಆ*ತ್ಮಹ*ತ್ಯೆ ಮಾಡಿಕೊಂಡ ಘಟನೆ ಜ.19ರಂದು ರಾತ್ರಿ ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳದ ಕೆ.ಸುಧಾಕರ ಎಂಬವರ ಪುತ್ರ ಕೆ.ವೆಂಕಟೇಶ (22) ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಮಂಗಳೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿರುವ ಬಗ್ಗೆ ತಂದೆಯನ್ನು ಹೇಳುತ್ತಿದ್ದನು.
ಸುಮಾರು 10 ದಿನಗಳಿಂದ ಮೌನವಾಗಿದ್ದು, ಇದೇ ಕಾರಣದಿಂದ ಅವರು ಮನೆಯ ಹಿಂದುಗಡೆ ಇರುವ ಬಾವಿಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
ಅಬ್ಬಬ್ಬಾ! 31 ಕೋಟಿಗೆ ಅಪಾರ್ಟ್ಮೆಂಟ್ ಖರೀದಿಸಿದ್ದ ಅಮಿತಾಬ್ ಬಚ್ಚನ್ ಮಾರಿದ್ದೆಷ್ಟು ರೇಟ್ಗೆ ಗೊತ್ತಾ!?
ಮಹಿಳಾ ನಾಗಸಾಧ್ವಿಗಳು ಮುಟ್ಟಿನ ಸಮಯದಲ್ಲಿ ಏನು ಮಾಡುತ್ತಾರೆ ಗೊತ್ತಾ ?
ಚೂರಿ ಇರಿತ ಪ್ರಕರಣ : ಆಸ್ಪತ್ರೆಯಿಂದ ಸೈಫ್ ಆಲಿ ಖಾನ್ ಬಿಡುಗಡೆ
ಛತ್ತೀಸ್ಗಢದಲ್ಲಿ ಎನ್*ಕೌಂಟರ್; 10ಕ್ಕೂ ಅಧಿಕ ನಕ್ಸಲರ ಹ*ತ್ಯೆ
ಹೊಸ ಲುಕ್ನಲ್ಲಿ ಮಹಾಕುಂಭಮೇಳದ ಸುಂದರಿ ‘ಮೊನಾಲಿಸಾ’
ಪಪ್ಪಾಯ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ ??
Trending
- BIG BOSS1 day ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- FILM1 day ago
ಕಾಂತಾರ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು
- BANTWAL6 days ago
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ
- DAKSHINA KANNADA5 days ago
ತುಳು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟ ‘ಗೋಲ್ಡನ್ ಮೂವೀಸ್’; ಕುದ್ರೋಳಿ ಕ್ಷೇತ್ರದಲ್ಲಿ ‘ಪ್ರೊಡಕ್ಷನ್ ನಂ 1’ಗೆ ಅದ್ದೂರಿ ಚಾಲನೆ