Connect with us

BANTWAL

ಅಫಘಾನಿಸ್ತಾನದಲ್ಲಿ ಸಿಲುಕಿಕೊಂಡ ಬಂಟ್ವಾಳ ಮೂಲದ ಪಾದ್ರಿ: ‘ನಾನು ಸುರಕ್ಷಿತ’ ಎಂದು ಕುಟುಂಬಸ್ಥರಿಗೆ ಮಾಹಿತಿ

Published

on

ಮಂಗಳೂರು: ಅಫಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರು ದೇಶವನ್ನು ವಶಪಡಿಸಿಕೊಂಡಿದ್ದು, ಭಾರತೀಯ ರಾಯಭಾರ ಕಛೇರಿ ಸೇರಿ ಹಲವು ಭಾರತೀಯರನ್ನು ಭಾರತೀಯ ವಾಯುಸೇನೆ ತಾಯ್ನಾಡಿಗೆ ಕರೆತಂದಿದ್ದಾರೆ.

ಇದರ ಮಧ್ಯೆ ಬಂಟ್ವಾಳ ಮೂಲದ ಸಿದ್ದಕಟ್ಟೆಯ ಕ್ರೈಸ್ತ ಪಾದ್ರಿಯೊಬ್ಬರು ಸಿಲುಕಿಕೊಂಡಿದ್ದಾರೆ. ಸದ್ಯ ತಾನು ಸುರಕ್ಷಿತವಾಗಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.


ಬಂಟ್ವಾಳ ಮೂಲದ ಸಿದ್ದಕಟ್ಟೆಯ ಜೆಜ್ವಿತ್‌ (ಜೆಸ್ಯೂಟ್) ಮೇಳದ ಫಾದರ್ ಜೆರೊಮೆ ಸಿಕ್ವೆರಾ ಅವರು ಅಲ್ಲಿ ಸಿಲುಕಿಕೊಂಡಿದ್ದು, ಇವರು ಕಳೆದ ಜನವರಿಯಿಂದ ಕಾಬೂಲ್‌ನಲ್ಲಿರುವ ಅಂತಾರಾಷ್ಟ್ರೀಯ ಎನ್ಜಿಒ ಜೆಸ್ಯೂಟ್ ರೆಫ್ಯೂಜಿ ಸರ್ವಿಸಸ್ (ಜೆಆರ್‌ಎಸ್) ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೊನ್ನೆ ಮಂಗಳವಾರ ಬೆಳಿಗ್ಗೆ ತಮ್ಮ ಸಹೋದರ ವಿನ್ಸೆಂಟ್ ಸಿಕ್ವೇರಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಕಾಬೂಲ್ ಬಳಿಯ ಸ್ಥಳದಲ್ಲಿ ಉಳಿದುಕೊಂಡಿದ್ದೇನೆ.

ಸದ್ಯ ಸುರಕ್ಷಿತವಾಗಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅವರ ಕುಟುಂಬಸ್ಥರು ಅಲ್ಲಿನ ಪರಿಸ್ಥಿತಿ ಕಂಡು ಗಾಬರಿಯಾಗಿದ್ದಾರೆ.

ಇದರ ಜೊತೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಫಾದರ್ ಪಿ ರಾಬರ್ಟ್ ರೋಡ್ರಿಗಸ್ ಸಿಲುಕಿಕೊಂಡಿದ್ದಾರೆ. ಫಾ.ರಾಬರ್ಟ್ ಮಧ್ಯ ಅಫ್ಘಾನಿಸ್ತಾನದ ಬಾಮಿಯಾನ್ ಪ್ರಾಂತ್ಯದ ರಾಜಧಾನಿಯಾದ ಬಾಮಿಯಾನ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಈ ಮೊದಲು, ಕಾಬೂಲ್ ಮತ್ತು ಅಫ್ಘಾನಿಸ್ತಾನದ ಇತರ ಭಾಗಗಳಿಂದ ಹೊರಹೊಮ್ಮುವ ಭಯಾನಕ ದೃಶ್ಯಗಳನ್ನು ಮತ್ತು ದೇಶದ ಪರಿಸ್ಥಿತಿ ಹೇಗೆ ವೇಗವಾಗಿ ಬದಲಾಗುತ್ತಿದೆ ಎಂಬುದನ್ನು ಫ್ರಾನ್ ಜೆರೋಮ್ ವಿವರಿಸಿದ್ದಾರೆ.

“ನಾವು ಮತ್ತು ನಮ್ಮ ಸಿಬ್ಬಂದಿ ಸುರಕ್ಷಿತವಾಗಿದ್ದೇವೆ. ಇಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ವಿವರಿಸಿದ್ದಾರೆ ಎಂದರು.

ಕಳೆದ ಭಾನುವಾರ ಬೆಳಿಗ್ಗೆ ಕಾಬೂಲ್ ವಿಮಾನ ನಿಲ್ದಾಣವನ್ನು ತಲುಪಲು ಅವರಿಗೆ ಸಾಧ್ಯವಾಯಿತಾದರೂ ಆ ಹೊತ್ತಿಗೆ ತಾಲಿಬಾನಿಯರು ವಿಮಾನ ನಿಲ್ದಾಣವನ್ನು ವಶಪಡಿಸಿಕೊಂಡರು. “ನಾನು ನನ್ನ ಸಾಮಾನುಗಳನ್ನು ದೊಡ್ಡ ಜನಸಂದಣಿ ಮತ್ತು ರಸ್ತೆಯ ವಾಹನಗಳ ಮೂಲಕ ಎಳೆಯಬೇಕಾಯಿತು.

ಸಾವಿರಾರು ಜನರು ಪಲಾಯನ ಮಾಡಲು ಪ್ರಯತ್ನಿಸಿದರು. ತಾಲಿಬಾನಿಯರು ಗಾಳಿಯಲ್ಲಿ ಗುಂಡು ಹಾರಿಸುತ್ತಾ ಗುಂಪನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದರು.

ಯಾವುದೇ ಭದ್ರತಾ ತಪಾಸಣೆ ಅಥವಾ ಬೋರ್ಡಿಂಗ್ ಪಾಸ್ ಇಲ್ಲದೆ ಜನರು ವಿಮಾನಗಳನ್ನು ಹತ್ತುತ್ತಿದ್ದರು. ಇದು ಭಯಾನಕ ಅನುಭವವಾಗಿತ್ತು ಎಂದು ಅವರು ವಿವರಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

LATEST NEWS

Trending