Connect with us

DAKSHINA KANNADA

Mangaluru : ಬಸ್ ಢಿಕ್ಕಿಗೆ ಬೈಕ್ ಸವಾರ ಸಾವು ಪ್ರಕರಣ -ಗುರುಪುರ ಕೈಕಂಬದಲ್ಲಿ ರಸ್ತೆ ತಡೆ..!

Published

on

ಮಂಗಳೂರು ನಗರದ ಹೊರವಲಯದ ಗುರುಪುರ ಜಂಕ್ಷನ್ ಬಳಿ ಖಾಸಗಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಸ್ಥಳೀಯರು ಕೈಕಂಬ ಜಂಕ್ಷನ್ ನಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರು : ಮಂಗಳೂರು ನಗರದ ಹೊರವಲಯದ ಗುರುಪುರ ಜಂಕ್ಷನ್ ಬಳಿ ಖಾಸಗಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಸ್ಥಳೀಯರು ಕೈಕಂಬ ಜಂಕ್ಷನ್ ನಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರ ಬೈಕಿಗೆ ನಿನ್ನೆ ಖಾಸಾಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಮೃತಪಟ್ಟಿದ್ದರು.

ಮಂಗಳೂರು ಮೂಡುಬಿದಿರೆಯಲ್ಲಿ ಎಕ್ಸ್‌ ಪ್ರೆಸ್ ಬಸ್‌ ಗಳ ಮೇಲಾಟ ಹೆಚ್ಚಾಗುತ್ತಿದ್ದು ಆನೇಕರು ಜೀವ ಕಳಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಈ ಭಾಗದಲ್ಲಿ ಬಸ್ಸುಗಳ ವೇಗವನ್ನು ನಿಯಂತ್ರಿಸುವುದರ ಜೊತೆಗೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದ್ದರು.

ಈ ಕಾರಣದಿಂದ ಕೈಕಂಬ ಜಂಕ್ಷನ್ನಲ್ಲಿ ಸಂಚಾರಕ್ಕೆ ತಡೆ ಉಂಟಾಗಿದ್ದರಿಂದ ಕೆಲ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಜನರು ಅಧಿಕ ಸಂಖ್ಯೆಯಲ್ಲಿ ಸೇರಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ಸ್ಥಳಕ್ಕೆ ಬಜಪೆ ಠಾಣಾಧಿಕಾರಿಗಳು ಭೇಟಿ ನೀಡಿ ಸ್ಥಳೀಯರ ಜತೆ ಮಾತುಕತೆ ನಡೆಸಿದರು.

ಬಸ್ ಗಳನ್ನು ಸ್ಥಳದಿಂದ ತೆರಳಲು ಬಿಡದ ಹಿನ್ನೆಲೆಯಲ್ಲಿ ಮೂಡುಬಿದಿರೆ- ಮಂಗಳೂರು, ಬಜಪೆ, ಪೊಳಲಿ ಬಿಸಿರೋಡ್ ಮೊದಲಾದೆಡೆಗೆ ತೆರಳುವ ಪ್ರಯಾಣಿಕರು ಬಹಳಷ್ಟು ಹೊತ್ತು ಬಸ್ ಗಳಲ್ಲಿಯೇ ಬಾಕಿಯಾಗುವಂತಾಯಿತು.

ಘಟನಾ ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಮತ್ತು ಮಂಗಳೂರು ಉತ್ತರ ಶಾಸಕ ಭರತ್‌ ಶೆಟ್ಟಿ ಅವರು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ತಪ್ಪಿತಸ್ತರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿ  ಪ್ರತಿಭಟನೆಯನ್ನು ವಾಪಾಸ್ ಪಡೆದುಕೊಳ್ಳುವಂತೆ ಸೂಚಿಸಿದರು.

ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಲ್ಲಿ ಬಸ್ಸುಗಳ ಧಾವಂತದ ಓಡಾಟಕ್ಕೆ ಬ್ರೇಕ್ ಹಾಕುವಂತೆ ಸೂಚಿಸಿದರು.

DAKSHINA KANNADA

ತಡೆಬೇಲಿಗೆ ಡಿಕ್ಕಿ ಹೊಡೆದು ಅಂಡರ್‌ಪಾಸ್‌ ಗೆ ಉರುಳಿದ ವಾಹನ; ಹಲವರಿಗೆ ಗಾಯ

Published

on

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಅಂಡರ್ ಪಾಸ್ ಬಳಿ ಬೈಕ್ ಗೆ ಬೋಲೇರೋ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೊಲೆರೋ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಹಾಗೂ ಪಿಕಪ್ ಹೆದ್ದಾರಿ ಬದಿಯ ಅಪಘಾತ ತಡೆಗೆ ಹಾಕಿದ್ದ ತಡೆ ಬೇಲಿಗೆ ಡಿಕ್ಕಿ ಹೊಡೆದು ಸುಮಾರು 12 ಅಡಿ ಆಳದ ಅಂಡರ್ ಪಾಸ್ ಕೆಳಗಡೆ ಬಿದ್ದಿದೆ.

ಇದನ್ನೂ ಓದಿ: ಕೊಣಾಜೆ : ಸ್ಕೂಟರ್ – ಟೆಂಪೋ ನಡುವೆ ಅಪ*ಘಾತ; ಸವಾರ ಸಾವು

ಅಪಘಾತದಿಂದ ಬೈಕ್ ಸವಾರ ಸಹಿತ ಬೊಲೆರೋ ಪಿಕಪ್ ನಲ್ಲಿದ್ದ ವಾಹನದ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕ್ರೇನ್ ಮೂಲಕ ಎರಡು ವಾಹನಗಳನ್ನು ತೆರವುಗೊಳಿಸಲಾಯಿತು. ಅಪಘಾತದ ಗಾಯಾಳುಗಳ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು : ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಶಿಲಾನ್ಯಾಸ

Published

on

ಮಂಗಳೂರು : ಸುಮಾರು 50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಲಾನ್ಯಾಸ ನೆರವೇರಿಸಿದ್ದಾರೆ. ಮೇರಿ ಹಿಲ್‌ನಲ್ಲಿ ನಿರ್ಮಾಣವಾಗಲಿರುವ ಈ ಪ್ರಾದೇಶಿಕ ಕೇಂದ್ರ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರಗಳಿಗೆ ಪೂರಕವಾಗಲಿರುವ ವ್ಯವಸ್ಥೆಗಳು ಈ ಕೇಂದ್ರದಲ್ಲಿ ಇರಲಿದೆ. ಇದು ವಿದ್ಯಾರ್ಥಿಗಳಿಂದ ಹಿಡಿದು ಸಂಶೋಧನೆ ನಡೆಸುವ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.

ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಏಷ್ಯಾದಲ್ಲೇ ಅತೀ ದೊಡ್ಡ ಸಂಸ್ಥೆಯಾಗಿದ್ದು, ಮಂಗಳೂರಿನಲ್ಲಿ ನಿರ್ಮಾಣವಾಗುವ ಪ್ರಾದೇಶಿಕ ಕೇಂದ್ರ ದೇಶದಲ್ಲೇ ದೊಡ್ಡ ಕೇಂದ್ರವಾಗಲಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಕೇಂದ್ರ ಸ್ಥಾಪನೆಗೆ 2024-25ರ ಬಜೆಟ್‌ನಲ್ಲಿ ಅನುದಾನ ನೀಡಲಾಗಿದ್ದು, ಈಗ ಚಾಲನೆ ನೀಡಲಾಗುತ್ತಿದೆ. ಈ ಕೇಂದ್ರ ಸ್ಥಾಪನೆ ಬಳಿಕ ಕರಾವಳಿ ಭಾಗದ ಜನರಿಗೆ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರವಾಗಿ ಬೆಂಗಳೂರಿಗೆ ಹೋಗುವುದು ತಪ್ಪಲಿದೆ ಎಂದು ಹೇಳಿದ್ದಾರೆ.

ಬಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಬೇಕು ಎಂಬ ಚಿಂತನೆ ಸರ್ಕಾರಕ್ಕೆ ಇದೆ. ಇದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ

ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್‌, ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಿದ್ದರು.

Continue Reading

DAKSHINA KANNADA

ಉಳ್ಳಾಲ : ಬಂದೂಕು ತೋರಿಸಿ ಬ್ಯಾಂಕ್ ದರೋಡೆ; ನಗ, ನಗದು ದೋಚಿ ಪರಾರಿಯಾದ ಖದೀಮರು

Published

on

ಉಳ್ಳಾಲ : ಕೋಟೆಕಾರ್ ಬ್ಯಾಂಕ್‌ನ ಕೆ.ಸಿ.ರೋಡ್ ಶಾಖೆಯಿಂದ ಭಾರೀ ದರೋಡೆ ನಡೆದಿದೆ. ಹಾಡಹಗಲೇ ಐದು ಮಂದಿ ಆಗಂತುಕರು ಬಂದೂಕು ತೋರಿಸಿ ಕೃತ್ಯ ಎಸಗಿದ್ದಾರೆ.  ಫಿಯೇಟ್ ಕಾರಿನಲ್ಲಿ ಬಂದ ತಂಡ ಚಿನ್ನ, ನಗದುಗಳನ್ನು ದೋಚಿ ಪರಾರಿಯಾಗಿದೆ.

ಬ್ಯಾಂಕಿನಿಂದ 15 ಕೋಟಿ ರೂ.ಗೂ ಮಿಕ್ಕಿದ ಚಿನ್ನ ಹಾಗೂ ಐದು ಲಕ್ಷದಷ್ಟು ನಗದನ್ನು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ದರೋಡೆ ನಡೆಸಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಬ್ಯಾಂಕಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಓರ್ವ ಪುರುಷ ಸಿಬ್ಬಂದಿ, ಮತ್ತೋರ್ವ ಸಿಸಿಟಿವಿ ಟೆಕ್ನೀಷಿಯನ್‌ಗೆ ಬಂದೂಕು ಹಾಗೂ ತಲವಾರು ತೋರಿಸಿದ ಮಾಸ್ಕ್ ಧರಿಸಿದ್ದ ತಂಡ ಸುಮ್ಮನಿರುವಂತೆ ಬೆದರಿಸಿ, ಇಲ್ಲವಾದಲ್ಲಿ ಕೊಲ್ಲುವ ಬೆದರಿಕೆಯನ್ನು ಒಡ್ಡಿ  ಲಾಕರ್ ನಲ್ಲಿದ್ದ 15  ಕೋಟಿ ರೂ. ಚಿನ್ನ ಹಾಗೂ 5 ಲಕ್ಷ ರೂ ನಷ್ಟು ನಗದು ದೋಚಿ ಗ್ರೇ ಬಣ್ಣದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದಾರೆ. ಸದಾ ಜನಜಂಗುಳಿಯಿಂದ ಕೂಡಿರುವ ಕೆ.ಸಿ ರೋಡ್ ಜಂಕ್ಷನ್ ಶುಕ್ರವಾರವಾದ ಹಿನ್ನೆಲೆಯಲ್ಲಿ ಹೆಚ್ಚು ಜನರಿರಲಿಲ್ಲ.

ಇನ್ನು ಸ್ಪೀಕರ್ ಯುಟಿ ಖಾದರ್ ಕೂಡ ತಮ್ಮ ಕ್ಷೇತ್ರದ ಬ್ಯಾಂಕ್‌ನಲ್ಲಿ ನಡೆದ ಘಟನೆ ಗಮನಕ್ಕೆ ಬರುತ್ತಿದ್ದಂತೆ, ಬ್ಯಾಂಕ್ ಗೆ ಭೇಟಿ ನೀಡಿ, ಪ್ರತ್ಯಕ್ಷದರ್ಶಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

Continue Reading

LATEST NEWS

Trending

Exit mobile version