DAKSHINA KANNADA
ಅಡ್ಡಾದಿಡ್ಡಿಯಾಗಿ ಚಲಿಸಿದ ಬಸ್ ಬೈಕ್ ಗೆ ಢಿಕ್ಕಿ- ಇಬ್ಬರು ಯುವಕರು ಗಂಭೀರ..!
ಅತೀ ವೇಗದಿಂದ ಧಾವಿಸಿ ಬಂದ ನಗರ ಖಾಸಗಿ ಸಾರಿಗೆ ಬಸ್ಸೊಂದು ಅಡ್ಡಾದಿಡ್ಡಿಯಾಗಿ ಚಲಿಸಿ ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊಸಬೆಟ್ಟು ಎಂಬಲ್ಲಿ ನಡೆದಿದೆ.
ಮಂಗಳೂರು: ಅತೀ ವೇಗದಿಂದ ಧಾವಿಸಿ ಬಂದ ನಗರ ಖಾಸಗಿ ಸಾರಿಗೆ ಬಸ್ಸೊಂದು ಅಡ್ಡಾದಿಡ್ಡಿಯಾಗಿ ಚಲಿಸಿ ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊಸಬೆಟ್ಟು ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿ ಮೊಹಮ್ಮದ್ ಶಾಹೀಲ್(20) ಮತ್ತು ಪಕ್ಷಿಕೆರೆಯ ಅರಾಫತ್(19) ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್, ಡಿವೈಡರ್ ಬಳಿ ರಸ್ತೆ ದಾಟಲು ಕಾಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರಲ್ಲಿ ಬಸ್ಸು ಅಡ್ಡಾದಿಡ್ಡಿಯಾಗಿ ಚಲಿಸುತ್ತಿರುವುದು ಕಂಡು ಬರುತ್ತಿದೆ.
ನಿರ್ಲಕ್ಷ್ಯ ತೋರಿದ ಬಸ್ಸು ಚಾಲಕನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮನೆಯ ಯಜಮಾನನ್ನು ಕಟ್ಟಿ ಹಾಕಿ ನಗ, ನಗದು ದರೋಡೆ- 6 ಜನ ಬಂಧನ..!
ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ನಡೆದಿದ್ದು, ಇದೀಗ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.
ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ.
ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.
ನಸುಕಿನ ಜಾವ ಸುಮಾರು 2 ಗಂಟೆಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನರಿದ್ದ ಮುಸುಕುಧಾರಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ನಷ್ಟು ಚಿನ್ನವನ್ನು ದರೋಡೆ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು.
DAKSHINA KANNADA
ಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲ್ ಮಾಡಿದ ಭಟ್- ಪ್ರಕರಣ ದಾಖಲು..!
ಪುತ್ತೂರು: ಬಣ್ಣದ ಮಾತುಗಳಿಂದ ವಿಶ್ವಾಸಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಪ್ರಕರಣದ ಆರೋಪಿ.
ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್ ನಲ್ಲಿ ಹಾಡುತ್ತಿದ್ದಳು.
2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ.
2023 ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.
ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ.
ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ.
ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ.
ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.
ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ.
ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾನೆ.
ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಾರವಾರದ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
DAKSHINA KANNADA
ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್- ಮೀನುಗಾರರನ್ನು ರಕ್ಷಿಸಿದ ಕೋಸ್ಟ್‌ಗಾರ್ಡ್
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.
ಈ ಬಗ್ಗೆ ಬೋಟ್‌ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.
ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್‌ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್‌ಗಾರ್ಡ್‌ಗೆ ಮಾಹಿತಿ ನೀಡಿದ್ದರು.
ಅದರಂತೆ ಕೋಸ್ಟ್‌ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್‌ನ ಎರಡು ಇಂಟರ್‌ಸೆಪ್ಟರ್ ಬೋಟ್‌ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್‌ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್‌ಗಾರ್ಡ್ ತಿಳಿಸಿದೆ.
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ