DAKSHINA KANNADA
Mangaluru: ಕಾರು ಕಳವು ಪ್ರಕರಣ- 27 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
Published
1 year agoon
By
Adminಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 27 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಉರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 27 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಉರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕಲ್ಲಿಕೋಟೆಯ ನಿವಾಸಿ 52 ವಷರ್ದ ಮನೋಜ್ (52) ಬಂಧಿತ ಆರೋಪಿಯಾಗಿದ್ದಾನೆ.
ಅಶೋಕ ನಗರದ ವಿನ್ಸೆಂಟ್ ಪಿರೇರಾ ಎಂಬವರಿಗೆ ಸೇರಿದ ಕಾರನ್ನು ಅದರ ಚಾಲಕ ದಾಮೋದರ ಎಂಬವರು ಕೊಟ್ಟಾರದ ರಸ್ತೆ ಬದಿ 1996ರ ಡಿಸೆಂಬರ್ 24ರಂದು ಪಾರ್ಕ್ ಮಾಡಿದ್ದು, ಮರುದಿನ ನೋಡಿದಾಗ ಅದು ಕಾಣೆಯಾಗಿತ್ತು.
ಈ ಬಗ್ಗೆ ಮರುದಿನ ವಿನ್ಸೆಂಟ್ ಪಿರೇರಾ ದೂರು ನೀಡಿದ್ದರು.
ಈ ಕಾರನ್ನು ಕಳವುಗೈದಿದ್ದ ಆರೋಪಿ ಮನೋಜ್ ಎಂಬಾತ ಕಲ್ಲಿಕೋಟೆಯಲ್ಲಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಉರ್ವ ಪೊಲೀಸರು ಆಗಸ್ಟ್ 23ರಂದು ಕಲ್ಲಿಕೋಟೆಯಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಕಳೆದ 27 ವರ್ಷದಿಂದ ತಲೆಮರೆಸಿಕೊಂಡಿದ್ದ ಈತನನ್ನು ಆಗಸ್ಟ್ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
BIG BOSS
ಕೊಣಾಜೆ: 3 ವರ್ಷದ ಬಾಲೆಗೆ ಕಿ*ರುಕುಳ ನೀಡಿದ 70ರ ಅಜ್ಜ ಅರೆಸ್ಟ್
Published
17 minutes agoon
23/11/2024ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.
ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
BIG BOSS
ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ
Published
33 minutes agoon
23/11/2024ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.
ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.
ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?