Friday, July 1, 2022

ಮಂಗಳೂರು : 13 ದೈವ, ದೇವಸ್ಥಾನಗಳಿಗೆ ಕನ್ನ ಹಾಕಿದ್ದ ನಾಗ- ಮಾರುತಿ ಸಿಸಿಬಿ ವಶಕ್ಕೆ..!

ಮಂಗಳೂರು :  ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ 13 ದೈವ- ದೇವಸ್ಥಾನ ಲೂಟಿ ಮಾಡಿದ ಇಬ್ಬರು ಅಂತರ್‌ ಜಿಲ್ಲಾ ಖದೀಮರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ತರಿಕೆರೆಯ ಬೈರಪುರ ನಿವಾಸಿ 55 ವರ್ಷದ ನಾಗ ನಾಯ್ಕ ಹಾಗೂ ದಾವಣಗೆರೆ ಚೆನ್ನಗಿರಿ ಕಣದ ಸಾಲು ಬೀದಿಯ 33 ವರ್ಷದ ಮಾರುತಿ ಸಿ.ವಿ. ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಂದ ಒಟ್ಟು 28 ಲಕ್ಷ ರೂ. ಅಧಿಕ ಮೌಲ್ಯದ ಚಿನ್ನ, ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರ ಮಾಹಿತಿಯಂತೆ ಈವರೆಗೆ ನಡೆದ 13 ದೈವಸ್ಥಾನ, ದೇವಸ್ಥಾನಗಳಲ್ಲಿ ಕಳವು ಹಾಗೂ 3 ಮನೆಗಳ ಕಳ್ಳತನ ಪ್ರಕರಣಗಳಲ್ಲಿ ಈ ಇಬ್ಬರು ಆರೋಪಿಗಳು ಭಾಗಿಯಾಗಿದ್ದರು.

ಆರೋಪಿ ನಾಗ ನಾಯ್ಕ ಎಂಬಾತನ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಅಜಂಪುರ, ಕಡೂರು ಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯ ತುಂಗಾನಗರ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.

ಈತನು ತನ್ನ ಊರಾದ ತರೀಕೆರೆಯಿಂದ ಬಸ್ಸಿನಲ್ಲಿ ಮಂಗಳೂರಿಗೆ ಬಂದು ಮಂಗಳೂರು ನಗರದ ಬಸ್ ಸ್ಟಾಂಡ್, ಮೈದಾನಗಳಲ್ಲಿ ವಾಸವಿದ್ದು, ಹಗಲು ವೇಳೆಯಲ್ಲಿ ಒಂಟಿ ಮನೆಗಳನ್ನು, ದೇವಸ್ಥಾನ, ದೈವಸ್ಥಾನಗಳನ್ನು ಗುರುತಿಸಿಕೊಂಡು ರಾತ್ರಿ ವೇಳೆಯಲ್ಲಿ ಕಳ್ಳತನ ಮಾಡಿ ನಂತರ ತನ್ನ ಊರಿಗೆ ಹೋಗಿ ಇನ್ನೋರ್ವ ಆರೋಪಿಯಾದ ಮಾರುತಿಯ ಚೆನ್ನಗಿರಿಯ ಜ್ಯುವೆಲ್ಲರಿಗೆ ಕಳ್ಳತನ ಮಾಡಿದ ಚಿನ್ನ ಹಾಗೂ ಬೆಳ್ಳಿಯನ್ನು ಮಾರಾಟ ಮಾಡುತ್ತಿದ್ದ.

ಆರೋಪಿ ಮಾರುತಿಯು ಈ ಹಿಂದೆ ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದವನು ಆರೋಪಿ ನಾಗನಾಯ್ಕ ಜೊತೆ ಸೇರಿಕೊಂಡು ಸ್ವಂತ ಜ್ಯುವೆಲ್ಲರಿ ಅಂಗಡಿಯನ್ನು ತೊಡಗಿಸಿ ಆರೋಪಿ ಜೊತೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ.

ಮಾರುತಿಯು ತನ್ನ ಜ್ಯುವೆಲ್ಲರಿಯಲ್ಲಿ ಕಳ್ಳತನದ ಸಾಮಾಗ್ರಿಗಳನ್ನು ಇರಿಸಿಕೊಂಡು ದಾವಣಗೆರೆಯ ಜ್ಯುವೆಲ್ಲರಿಗೆ ಮಾರಾಟ ಮಾಡುತ್ತಿದ್ದ ಎಂದು ಮಂಗಳೂರು ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ನೀರಿನಿಂದ ಮುಳುಗಡೆಯಾದ ಕೃಷಿಭೂಮಿ-ಅಪಾರ ಬೆಳೆ ನಷ್ಟ

ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಗ್ರಾಮ ಜಲಾವೃತಗೊಂಡು ಕೃಷಿ ಭೂಮಿಗೆ ನೀರು ನುಗ್ಗಿ ನೂರಾರು ಎಕರೆ ಕೃಷಿಭೂಮಿ ನೀರಿನಲ್ಲಿ ಮುಳುಗಡೆಯಾದ ಘಟನೆ ಉಡುಪಿಯ ಬೈಂದೂರಿನ ನಾವುಂದದಲ್ಲಿ ನಡೆದಿದೆ.ರೈಲ್ವೆ ಮಾರ್ಗದ...

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ಮೂಡುಬಿದಿರೆ ತಾಲ್ಲೂಕು ಪತ್ರಕರ್ತರ ಸಂಘದ ನೂತನ ಕಚೇರಿ ನಿರ್ಮಾಣಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಪತ್ರಕರ್ತರ ಸಂಘದ ನೂತನ ಕಚೇರಿ ಹಾಗೂ ಸಭಾಭವನ ನಿರ್ಮಾಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಶಿಲಾನ್ಯಾಸ ನೆರವೇರಿಸಿದರು.ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಶಾಸಕ ಅಭಯಚಂದ್ರ ಜೈನ್, ಪತ್ರಕರ್ತರ ಸಂಘದ ಶ್ರೀನಿವಾಸ್ ನಾಯಕ್,...