Wednesday, February 8, 2023

ಮಂಗಳೂರು: ಪ್ರವೀಣ್ ಹತ್ಯೆ NIA ತನಿಖೆಗೆ ಕೇಂದ್ರ ಗೃಹ ಇಲಾಖೆ ಆದೇಶ

ಮಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ.

ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಆಗಸ್ಟ್‌ 3 ರಂದು ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಾಗಿ ಪತ್ರ ಬರೆದು ಆದೇಶಿಸಿದ್ದಾರೆ. ಆದೇಶದ ಪ್ರತಿಯನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ಡಿಜಿಪಿ ಅವರಿಗೆ ಕಳುಹಿಸಿಕೊಡಲಾಗಿದೆ.


ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣವನ್ನು ಎನ್​ಐಎಗೆ ಹಸ್ತಾಂತರಿಸಿದ ಕೇಂದ್ರ ಗೃಹ ಇಲಾಖೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣವನ್ನು ಎನ್​ಐಎಗೆ ಹಸ್ತಾಂತರಿಸಿದ ಕೇಂದ್ರ ಗೃಹ ಇಲಾಖೆ ಪ್ರಕರಣವು ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ- 2008 ರ ಅಡಿಯಲ್ಲಿ ಬರುವ ಅಪರಾಧ ಎಂಬ ಅಭಿಪ್ರಾಯಕ್ಕೆ ಕೇಂದ್ರ ಸರ್ಕಾರ ಬಂದಿದೆ.

ಅಪರಾಧದ ಗಂಭೀರತೆ ಮತ್ತು ಅದರ ಅಂತಾರಾಜ್ಯ ಪರಿಣಾಮಗಳನ್ನು ಪರಿಗಣಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ, 2008 ರ ಪ್ರಕಾರ ತನಿಖೆಗೆ ಒಳಪಡಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

LEAVE A REPLY

Please enter your comment!
Please enter your name here

Hot Topics