Thursday, December 1, 2022

ಮಂಗಳೂರು: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಾಂತರ ರೂ. ಪಂಗನಾಮ-ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್‌ನಲ್ಲಿ ಭಾರ್ಗವಿ ಫೈನಾನ್ಸ್‌ ಮತ್ತು ಚಿಟ್ ಫಂಡ್ ನಡೆಸಿ ಅಮಾಯಕರಿಗೆ ವಂಚಿಸಿದ ಪ್ರಕರಕ್ಕೆ ಸಂಬಂಧಿಸಿ ಭಾರ್ಗವಿ ಫೈನಾನ್ಸ್‌ ಮಾಲಕ ಅಶೋಕ್ ಭಟ್ ಮತ್ತು ಆತನ‌ ಪತ್ನಿ ವಿದ್ಯಾಭಟ್ ರನ್ನು ಸೆನ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.


ಭಾರ್ಗವಿ ಫೈನಾನ್ಸ್‌ ಮತ್ತು ಚಿಟ್ ಫಂಡ್ ಮಾಡಿ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ಮತ್ತು ಪುತ್ರಿ ಪ್ರಿಯಾಂಕ ಭಟ್‌ ಎಂಬವರು ಕೋಟ್ಯಂತರ ರೂ. ವಂಚಿಸಿದ್ದಾರೆ ಎಂದು ಸುರತ್ಕಲ್‌ ಮೂಲದ ದೀಪಕ್ ಕುಮಾರ್ ಶೆಟ್ಟಿ ಎಂಬವರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.


ಅಲ್ಲದೆ ಈತನಿಂದ ಮೋಸ ಹೋಗಿದ್ದ ಸಂತ್ರಸ್ತರು ಕೂಡಾ ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದರು.

ಈ ಸಂಬಂಧ ಸೆನ್ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಭಾರ್ಗವಿ ಫೈನಾನ್ಸ್‌ ಮಾಲಕ ಅಶೋಕ್ ಭಟ್ ಮತ್ತು ಆತನ ಪತ್ನಿ ವಿದ್ಯಾಭಟ್ ರನ್ನು ಬಂಧಿಸಿದ್ದಾರೆ.


ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 5 ದಿನಗಳ ಕಾಲ ಸೆನ್ ಪೊಲೀಸ್ ಅಧಿಕಾರಿಗಳ ಕಸ್ಟಡಿಗೆ ನೀಡಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

Hot Topics