Connect with us

DAKSHINA KANNADA

ಮಂಗಳೂರಿನಲ್ಲಿ ನಾಳೆಯಿಂದ ಖಾಸಗಿ ಬಸ್‌ ರಸ್ತೆಗೆ: ಪ್ರಯಾಣ ದರ ಏರಿಕೆ

Published

on

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಜುಲೈ 1ರಿಂದ ಶೇ.50ರಷ್ಟು ಸಿಟಿ ಮತ್ತು ಸರ್ವಿಸ್ ಬಸ್‌ಗಳು ಸಂಚಾರ ಆರಂಭಿಸಲಿದೆ. ಶೇಕಡಾ 20ರಷ್ಟು ಪ್ರಯಾಣ ದರ ಏರಿಕೆ ಮಾಡಿ ಸಂಚಾರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, ಮಿನಿಮಮ್ ಪ್ರಯಾಣ ದರ 12 ರೂಪಾಯಿ ಆಗಲಿದೆ.

ಸರಕಾರದ ಮಾರ್ಗಸೂಚಿಯನ್ನು ಯಥಾವತ್ತಾಗಿ ಪಾಲಿಸಲು ನಮಗೆ ಸಾಧ್ಯವಿಲ್ಲ. ಹಾಗಾಗಿ ಕೆಲವು ವಿನಾಯಿತಿಗಳನ್ನು ನೀಡಬೇಕು ಎಂಬ ಬೇಡಿಕೆಯನ್ನು ಜಿಲ್ಲಾಡಳಿತದ ಮುಂದಿಟ್ಟಿದ್ದೇವೆ. ಬೆಳಗ್ಗೆ 7ರಿಂದ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿ ಸಹಿತ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆದಿಡಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಆದರೆ ನಾವು ಇನ್ನೂ ಸ್ವಲ್ಪ ಸಮಯವನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ಹೇಳಿದ್ದಾರೆ.  ಜಿಲ್ಲಾಡಳಿತ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಎಂದು ಕಾದು ನೋಡಬೇಕಾಗಿದೆ. ಆದಾಗ್ಯೂ ಜು.1ರಿಂದ ಬಸ್‌ಗಳನ್ನು ರಸ್ತೆಗೆ ಇಳಿಸಲಿದ್ದೇವೆ ಎಂದು ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಬಸ್ಸಿನಲ್ಲಿರುವ ಸೀಟಿನ ಅರ್ಧದಷ್ಟು ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಸಾಧ್ಯವಿಲ್ಲ. ಡೀಸೆಲ್ ಬೆಲೆ ಏರಿಕೆಯಾದರೂ ಕೂಡ ಪ್ರಯಾಣ ದರ ಹೆಚ್ಚಿಸಿ ಎಂದು ಆಗ್ರಹಿಸುವ ಸ್ಥಿತಿಯಲ್ಲಿ ನಾವಿಲ್ಲ. ಜನಸಾಮಾನ್ಯರು ಕೂಡ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಅಲ್ಲದೆ ಏಕಾಎಕಿ ಜಿಲ್ಲೆಯ ಎಲ್ಲಾ ಸಿಟಿ ಮತ್ತು ಸರ್ವಿಸ್ ಬಸ್‌ಗಳನ್ನು ಓಡಿಸಲಾಗದು. ಕೆಲವು ದಿನದ ಮಟ್ಟಿಗೆ ಎಲ್ಲಾ ರೂಟಿನಲ್ಲೂ ಶೇಕಡಾ 50ರಷ್ಟು ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದ್ದೇವೆ. ಬಳಿಕ ಮುಂದಿನ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಬಸ್‌ ದರ ಏರಿಕೆ ಬಗ್ಗೆ ಡಿವೈಎಫ್ಐ ಖಂಡನೆ ವ್ಯಕ್ತಪಡಿಸಿದೆ.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending