Connect with us

DAKSHINA KANNADA

Mangaluru : ಪ್ಲಾಸ್ಟಿಕ್ ಡಬ್ಬ ನುಂಗಿದ ನಾಗರಹಾವಿಗೆ ಆಪರೇಷನ್ ಮಾಡಿಸಿ ಮರು ಜನ್ಮ ನೀಡಿದ ಡಾ.ಯಶಸ್ವಿ..!

Published

on

ಸಣ್ಣ ಪ್ಲಾಸ್ಟಿಕ್ ಡಬ್ಬವೊಂದು ಹೊಟ್ಟೆ ಸೇರಿ ಸಂಕಷ್ಟದಲ್ಲಿದ್ದ ನಾಗರಹಾವಿಗೆ ಮಂಗಳೂರಿನ ಯುವ ವೈದ್ಯರೊಬ್ಬರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ.

ಮಂಗಳೂರು: ಸಣ್ಣ ಪ್ಲಾಸ್ಟಿಕ್ ಡಬ್ಬವೊಂದು ಹೊಟ್ಟೆ ಸೇರಿ ಸಂಕಷ್ಟದಲ್ಲಿದ್ದ ನಾಗರಹಾವಿಗೆ ಮಂಗಳೂರಿನ ಯುವ ವೈದ್ಯರೊಬ್ಬರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಗ್ಗದಲ್ಲಿರುವ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದ ಕಾವಳಪಡೂರು ಗ್ರಾಪಂ ಉಪಾಧ್ಯಕ್ಷೆ ವಸಂತಿಯವರ ಮನೆ ಬಳಿ ಇದ್ದ ಬಿಲವೊಂದರಲ್ಲಿ ಸಿಲುಕಿ ಈ ನಾಗರಹಾವು ಹೊರಬರಲು ಹೆಣಗಾಡುತ್ತಿತ್ತು.

ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ಮನೆಯವರು ಜೂನ್ 6ರಂದು ವಗ್ಗದ ಉರಗತಜ್ಞ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಶ್ಯಾಂ ಹಾವನ್ನು ಬಿಲದಿಂದ ಮೆಲ್ಲಗೆ ಹೊರ ತೆಗೆದು ರಕ್ಷಿಸಿದ್ದಾರೆ.

ಈ ವೇಳೆ ಅದರ ತಲೆಯ ಕೆಳಭಾಗದಲ್ಲಿ ಎರಡು ಗಾಯಗಳಾಗಿತ್ತು. ಆದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತಂದಿದ್ದರು.

ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದು ಗಮನಿಸಿ ಎಕ್ಸ್ ರೇ ಮಾಡಿದ್ದಾರೆ.

ಆಗ ಅದರ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ವಸ್ತುವಿರುವುದು ಗಮನಕ್ಕೆ ಬಂದಿದೆ.

ಆದ್ದರಿಂದ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯೊಳಗಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

ಡಾ.ಯಶಸ್ವಿಯವರ ಪ್ರಕಾರ ‘ಸುಮಾರು ಐದು ಅಡಿ ಉದ್ದದ ಸಾಕಷ್ಟು ದಪ್ಪವೂ ಇದ್ದ ಹೆಣ್ಣು ನಾಗರಹಾವು ಇದಾಗಿತ್ತು.

10ವರ್ಷ ಪ್ರಾಯವಾಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು’ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.

ಒಟ್ಟಿನಲ್ಲಿ ಕ್ಲಪ್ತ ಸಮಯದಲ್ಲಿ ಹಾವನ್ನು ರಕ್ಷಿಸಿ ಅದಕ್ಕೆ ಶಸ್ತ್ರಚಿಕಿತ್ಸೆ ನೀಡಿರುವುದರಿಂದ ಅದು ಬದುಕಿ ಉಳಿದಿದೆ.

 

Click to comment

Leave a Reply

Your email address will not be published. Required fields are marked *

DAKSHINA KANNADA

ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

Published

on

ಮಂಗಳೂರು : ಬಹುನಿರೀಕ್ಷಿತ ಚಿತ್ರ ‘ಗಬ್ಬರ್ ಸಿಂಗ್’ ಇಂದು (ಮೇ 3) ತೆರೆಗಪ್ಪಳಿಸಿದೆ. ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್” ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆಕಂಡಿದೆ.


ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ.ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನಚಿತ್ರಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ತುಳು ಸಿನಿಮಾ ತೆರೆಕಾಣದೆ ಕೆಲವು ಸಮಯ ಆಗಿದೆ. ಬೇಸಿಗೆ ಕಾಲದಲ್ಲಿ ತರೆಕಾಣುತ್ತಿರುವ ಗಬ್ಬರ್ ಸಿಂಗ್ ಸಿನಿಮಾ ಹಾಸ್ಯಭರಿತವಾಗಿದ್ದು, ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ಒದಗಿಸಿದೆ. ಭೋಜರಾಜ್ ವಾಮಂಜೂರು ಅವರ ಹಾಸ್ಯಕ್ಕೆ ಒತ್ತು ಕೊಟ್ಟ ಪಾತ್ರ ಜೊತೆಗೆ ಗಿರೀಶ್ ಶೆಟ್ಟಿಯವರ ಖಡಕ್ ವಿಲನ್ ಪಾತ್ರ, ನಾಯಕ ಶರಣ್ ಶೆಟ್ಟಿ, ನಾಯಕಿ ವೆನ್ಸಿಟಾ ಡಯಾಸ್ ಪಾತ್ರಗಳು ಗಮನ ಸೆಳೆಯುತ್ತದೆ ಎಂದರು.

ಸಮಾರಂಭದಲ್ಲಿ ಡಾ ಮೆಲ್ವಿನ್ ಡಿ ಸೋಜಾ, ರಂಜಿತಾ ಹೇಮನಾಥ ಶೆಟ್ಟಿ ಕಾವು, ಭೋಜರಾಜ ವಾಮಂಜೂರು, ತುಳು ಚಲನ ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಉದ್ಯಮಿ ಗಿರೀಶ್ ಎಂ ಶೆಟ್ಟಿಕಟೀಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮೋಹನ್ ಕೊಪ್ಪಲ, ತಮ್ಮಲಕ್ಷ್ಮಣ, ಮಧು ಸುರತ್ಕಲ್, ಚಂದ್ರಶೇಖರ ನಾನಿಲ್ ಹಳೆಯಂಗಡಿ, ಜಯಾನಂದ ಅಮೀನ್, ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಶರಣ್ ಶೆಟ್ಟಿ, ನಟಿ ವೆನ್ಸಿಟಾ ಡಯಾಸ್, ರಾಹುಲ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

ಎಲ್ಲೆಲ್ಲಿ ತೆರೆಗೆ?

ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ “ಗಬ್ಬರ್ ಸಿಂಗ್” ಸಿನಿಮಾ ತೆರೆ ಕಂಡಿದೆ.

ನೈಜಘಟನೆಯಾಧಾರಿತ ಚಿತ್ರ :


‘ಗಬ್ಬರ್ ಸಿಂಗ್’ ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಇದನ್ನೂ ಓದಿ : ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು

ತಾರಾಂಗಣ :

ನಾಯಕ ನಟನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. “ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ.

ಸಿನಿಮಾ ಕತೆ, ಚಿತ್ರಕತೆ, ಸತೀಶ್ ಪೂಜಾರಿ ಬಾರ್ಕೂರ್, ಮಧು ಸುರತ್ಕಲ್ ಸಂಭಾಷಣೆ, ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

Continue Reading

DAKSHINA KANNADA

ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್‌ಗಳ ಹಗಲು ದರೋಡೆ..! ಏನಿದು ಘಟನೆ?

Published

on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಸೇರಿದಂತೆ ಆಸುಪಾಸಿನ ಜನತೆಗೆ ಸರಕಾರಿ ಬಸ್ಸು ಸಿಬ್ಬಂದಿ ಹಗಲು ದರೋಡೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕುಕ್ಕೆ ಕೆಎಸ್‌ಆರ್‌ಟಿಸಿ ಡಿಪೋದಿಂದ ಹೊರಡುವ ಸರಕಾರಿ ಬಸ್ ಸಿಬ್ಬಂದಿ ಹಗಲು ದರೋಡೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಏಪ್ರಿಲ್ 28ರಂದು ಹುಬ್ಬಳ್ಳಿ ಕಡೆಯ ದಂಪತಿ ಕುಕ್ಕೆ ಸುಬ್ರಹ್ಮಣ್ಯದಿಂದ ಹುಬ್ಬಳ್ಳಿ‌ಗೆ ಹೋಗುವ ಸಲುವಾಗಿ ಬಿಎಂಟಿಸಿಯ KA 57 F 3463 ನಂಬರಿನ ಬಸ್ಸಿಗೆ ಹತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ರೋಡ್ ಅಥವಾ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಬಸ್ ಹೋಗುತ್ತದೆ ಎಂದು ಬಸ್ಸಿನ ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ. ಈ ಭಾಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಮತ್ತು ಬಸ್ಸಿನ ಸಿಬ್ಬಂದಿ ಹೇಳಿದ್ದನ್ನೇ ನಂಬಿದ ಹುಬ್ಬಳ್ಳಿ ಈ ದಂಪತಿ ಬೆಂಗಳೂರು ಮಹಾನಗರ ಪಾಲಿಕೆಯ ಡಿಪೋ ನಂಬರ್‌2ರ ಈ ಸರಕಾರಿ ಬಸ್ ಹತ್ತಿದ್ದಾರೆ. ಬಸ್ಸಿನ ನಿರ್ವಾಹಕ ಮಹಿಳೆಗೆ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯ ಎಂಬುದಾಗಿ ಉಚಿತ ಟಿಕೆಟ್ ನೀಡಿದ್ದೂ, ಜೊತೆಯಲ್ಲಿ ಇದ್ದ ಪತಿ ಮತ್ತು ಮಕ್ಕಳಿಂದ 150 ರೂಪಾಯಿ ಹಣ ಪಡೆದು ಟಿಕೆಟ್ ನೀಡಿಲ್ಲ ಎನ್ನಲಾಗಿದೆ. ಇಷ್ಟು ಹಣ ಪಡೆದು ಇವರನ್ನು ಕುಕ್ಕೆ ಸುಬ್ರಹ್ಮಣ್ಯದಿಂದ ಸುಮಾರು ಮೂರು ಕಿಲೋ ಮೀಟರ್ ದೂರದ ಕೈಕಂಬ ಎಂಬಲ್ಲಿ ಬಸ್ಸಿಂದ ಇಳಿಸಿ ಹೋಗಿದ್ದಾರೆ. ನಂತರದಲ್ಲಿ ಈ ದಂಪತಿಗಳು ತಮ್ಮ ಮಕ್ಕಳೊಂದಿಗೆ ಸುಮಾರು ಆರು ಕಿಲೋ ಮೀಟರ್ ದೂರ ನಡೆದು ಕುಕ್ಕೆ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣ ತಲುಪಿದ್ದಾರೆ. ನಂತರದಲ್ಲಿ ಸ್ಥಳೀಯರಲ್ಲಿ ತಮಗಾದ ಅನ್ಯಾಯದ ಬಗ್ಗೆ ಕಣ್ಣೀರಿಟ್ಟು ಇಂತಹ ಬಸ್ಸ್‌ಗಳ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

subrahmanya

ಇಂತಹ ಘಟನೆಗಳು ಈ ಭಾಗದಲ್ಲಿ ಪದೇಪದೇ ಮರುಕಳಿಸುತ್ತಿದ್ದೂ,ಈ ಬಗ್ಗೆ ಹಲವು ಬಾರಿ ಮೇಲಧಿಕಾರಿಗಳಿಗೆ ತಿಳಿಸಿದರೂ ಸಹಾ ಈ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಮುಂದೆ ಓದಿ..;ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಆದುದರಿಂದ ಈ ಭಾಗದಲ್ಲಿ ನಡೆಯುವ ಈ ಹಗಲು ದರೋಡೆಗೆ ಅಧಿಕಾರಿಗಳೂ ಸಾಥ್ ನೀಡುತ್ತಿದ್ದಾರೆ ಎನ್ನಲಾಗಿದೆ. ಆದುದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದು ರೈಲು ಬಳಕೆದಾರರ ವೇದಿಕೆ ನೆಟ್ಟಣ ಸಂಘವು ಆಗ್ರಹಿಸಿದೆ.

Continue Reading

DAKSHINA KANNADA

ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ‘ಬಿಗ್‌ ಬಾಸ್’ ರೂಪೇಶ್ ಶೆಟ್ಟಿ

Published

on

ಮಂಗಳೂರು : ಬಿಗ್‌ಬಾಸ್ ಮುಖೇನ ರಾಜ್ಯದಲ್ಲಿ ಹೆಸರು ಪಡೆದಿರುವ ಕರಾವಳಿಯಲ್ಲಿ ಸ್ಟಾರ್ ರೂಪೇಶ್ ಶೆಟ್ಟಿ. ತುಳುನಾಡಿನ ಹುಲಿವೇಷ ಕುಣಿತವನ್ನು ಬಿಗ್‌ಬಾಸ್ ನಲ್ಲಿ ಪರಿಚಯಿಸಿದ್ದು ಅಲ್ಲದೆ ವೇಷದಾರಿಗಳ ಜೊತೆ ಹೆಜ್ಜೆ ಕೂಡಾ ಹಾಕಿದ್ದಾರೆ.  ಅಲ್ಲದೇ ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಕೂಡ ಹೌದು. ತುಳು ಸಿನಿಮಾದಲ್ಲಿ ಮಿಂಚಿದ್ದ ರೂಪೇಶ್ ಶೆಟ್ಟಿಗೆ ಬಿಗ್ ಬಾಸ್ ಬಳಿಕ ಕನ್ನಡ ಚಿತ್ರರಂಗದಲ್ಲೂ ಅವಕಾಶ ಸಿಕ್ಕಿತ್ತು. ಇದೀಗ ತಮಿಳು ಚಿತ್ರರಂಗಕ್ಕೂ ರೂಪೇಶ್ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ.

ಅಮೃತ ಸಾರಥಿ ಎಂಬುವವರು ನಿರ್ದೇಶನ ಮಾಡುತ್ತಿರುವ ತಮಿಳು ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟಿಸುತ್ತಿದ್ದಾರೆ. ಯೋಗಿ ಬಾಬು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಪ್ರಮೋದ್ ಶೆಟ್ಟಿ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ‘ಸನ್ನಿಧಾನಂ PO’ ಎಂದು ಚಿತ್ರಕ್ಕೆ ಟೈಟಲ್ ಇಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ರೂಪೇಶ್ ಶೆಟ್ಟಿ, “ನನ್ನ ಮೊದಲ ತಮಿಳು ಚಿತ್ರ ಸನ್ನಿಧಾನಮ್ PO ಇದರ ಶೂಟಿಂಗ್ ನಿಮ್ಮೆಲ್ಲರ ಆಶೀರ್ವಾದದಿಂದ ಭರದಿಂದ ಸಾಗುತ್ತಿದೆ. ಯೋಗಿ ಬಾಬು ಅವರ ಜತೆ ನಟಿಸುವುದೇ ನನ್ನ ಪಾಲಿನ ಅದೃಷ್ಟ. ನನ್ನ ಸಿನಿ ಪಯಣ ಈ ರೀತಿಯಾಗಿ ಸಾಗಲು ನೀವೇ ಮೊದಲ ಕಾರಣ. ನಿಮ್ಮ ಪ್ರೀತಿ ಪ್ರೋತ್ಸಾಹ ಎಂದೂ ಹೀಗೆ ಇರಲಿ. ದೇವರಿಗೆ ಧನ್ಯವಾದಗಳು” ಎಂದು ಅವರು ಬರೆದುಕೊಂಡಿದ್ದಾರೆ.

2023ರ ನವೆಂಬರ್ ತಿಂಗಳಲ್ಲಿ ಸಿನಿಮಾ ಘೋಷಿಸಲಾಗಿದೆ. ಈ ಚಿತ್ರದ ಮೂರನೇ ಹಂತದ ಶೂಟಿಂಗ್ ಈಗ ನಡೆಯುತ್ತಿದೆ. ಈ ಸಿನಿಮಾ ರಿಲೀಸ್ ದಿನಾಂಕವನ್ನು ರೂಪೇಶ್ ಶೆಟ್ಟಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ರೂಪೇಶ್ ಶೆಟ್ಟಿ ಅವರು ತುಳು ಸಿನಿಮಾಗಳಿಂದ ಬಣ್ಣದ ಬದುಕು ಆರಂಭಿಸಿದರು. 2015ರಲ್ಲಿ ರಿಲೀಸ್ ಆದ ‘ಐಸ್​ ಕ್ರೀಮ್’ ಹೆಸರಿನ ತುಳು ಚಿತ್ರದ ಮೂಲಕ ಅವರು ಹೀರೋ ಆದರು. 2023ರಲ್ಲಿ ಅವರ ನಟನೆಯ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ರಿಲೀಸ್ ಆಯಿತು. ಅವರು ಸಿನಿಮಾ ನಿರ್ಮಾಣ ಕೂಡ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ ವಿನ್ನರ್ ಆಗಿದ್ದಾರೆ.

Continue Reading

LATEST NEWS

Trending