LATEST NEWS
ಮೈಸೂರಿನಲ್ಲಿ ಬಾಡಿಗೆ ರೂಂ ಮಾಡಿದ್ದ ಮಂಗಳೂರು ಬಾಂಬ್ ಸ್ಪೋಟದ ರೂವಾರಿ..!
ಮಂಗಳೂರು ಬಾಂಬ್ ಸ್ಪೋಟದ ರೂವಾರಿ ಮೈಸೂರಿನಲ್ಲಿ ಬಾಡಿಗೆ ರೂಂ ಮಾಡಿಕೊಂಡಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ತನಿಖಾ ತಂಡ ಪರಿಶೀಲಿಸಿದಾಗ, ಸ್ಫೋಟಕ ವಸ್ತುಗಳು, ಸರ್ಕ್ಯೂಟ್ ಬೋರ್ಡ್‌ಗಳು, ಸಲ್ಫ್ಯೂರಿಕ್ ಆಸಿಡ್, ಇತರ ಕೆಲವು ರಾಸಾಯನಿಕಗಳು, ಸಣ್ಣ ಬೋಲ್ಟ್‌ಗಳು, ಬ್ಯಾಟರಿಗಳು, ಮೊಬೈಲ್ ಡಿಸ್ಪ್ಲೇಗಳು, ಮರದ ಪುಡಿ, ಅಲ್ಯೂಮಿನಿಯಂ ಫಾಯಿಲ್, ಮಲ್ಟಿಮೀಟರ್, ವೈರ್‌ಗಳು, ಮಿಕ್ಸರ್ ಜಾರ್‌ಗಳು, ಪ್ರೆಶರ್ ಕುಕ್ಕರ್ ಸೀಟಿಗಳು ಇತ್ಯಾದಿಗಳು ಪತ್ತೆಯಾಗಿವೆ.
ಮೈಸೂರು : ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಮಾಡಿದ ವ್ಯಕ್ತಿಯ ಮೂಲವನ್ನು ಪತ್ತೆ ಹಚ್ಚಲು ಆರಂಭಿಸಿದ ಪೊಲೀಸರಿಗೆ ಆರಭದಲ್ಲೇ ಯಶಸ್ಸು ಸಿಕ್ಕಿದ್ದು ಮೈಸೂರಿನ ಲೋಕನಾಯಕ ನಗರ, ಮೇಟಗಳ್ಳಿಯಲ್ಲಿರುವ ಸಿಂಗಲ್ ರೂಮ್‌ನಲ್ಲಿ ಈತ ವಾಸವಿದ್ದ ಎಂದು ತಿಳಿದು ಬಂದಿದೆ.
ಪೊಲೀಸರು ಗಾಯಗೊಂಡ ವ್ಯಕ್ತಿಯ ಚಿತ್ರವನ್ನು ಬಾಡಿಗೆ ರೂಮಿನ ಮಾಲೀಕ ಮೋಹನ್ ಕುಮಾರ್ ಅವರಿಗೆ ತೋರಿಸಿದಾಗ ಅವರು ಖಚಿತ ಪಡಿಸಿದ್ದಾರೆ.
ತಿಂಗಳಿಗೆ 1,800 ಬಾಡಿಗೆ ಪಾವತಿಸುತ್ತಿದ್ದ ವ್ಯಕ್ತಿ, ಒಪ್ಪಂದ ಪ್ರತಿಯಲ್ಲಿ ಪ್ರೇಮ್‌ರಾಜ್ S/o ಮಾರುತಿ ಮತ್ತು ಹುಬ್ಬಳ್ಳಿಯ ವಿಳಾಸವನ್ನು ನೀಡಿದ್ದ. ಆದರೆ ಈತನಿಗೂ ವಿಳಾಸಕ್ಕೂ ಯಾವುದೇ ಸಂಬಂಧವಿಲ್ಲ. ಆತ ನಕಲಿ ದಾಖಲೆ ನೀಡಿದ್ದಾನೆ ಎಂದು ಬಂದಿದೆ.
ಈತನ ಕೊಠಡಿಯಲ್ಲಿ ತನಿಖಾ ತಂಡ ಪರಿಶೀಲಿಸಿದಾಗ, ಸ್ಫೋಟಕ ವಸ್ತುಗಳು, ಸರ್ಕ್ಯೂಟ್ ಬೋರ್ಡ್‌ಗಳು, ಸಲ್ಫ್ಯೂರಿಕ್ ಆಸಿಡ್, ಇತರ ಕೆಲವು ರಾಸಾಯನಿಕಗಳು, ಸಣ್ಣ ಬೋಲ್ಟ್‌ಗಳು, ಬ್ಯಾಟರಿಗಳು, ಮೊಬೈಲ್ ಡಿಸ್ಪ್ಲೇಗಳು, ಮರದ ಪುಡಿ, ಅಲ್ಯೂಮಿನಿಯಂ ಫಾಯಿಲ್, ಮಲ್ಟಿಮೀಟರ್, ವೈರ್‌ಗಳು, ಮಿಕ್ಸರ್ ಜಾರ್‌ಗಳು, ಪ್ರೆಶರ್ ಕುಕ್ಕರ್ ಸೀಟಿಗಳು ಇತ್ಯಾದಿಗಳು ಪತ್ತೆಯಾಗಿವೆ.
ಅಷ್ಟೇ ಅಲ್ಲದೇ ಒಂದು ಮೊಬೈಲ್, ಎರಡು ನಕಲಿ ಆಧಾರ್ ಕಾರ್ಡ್, ಒಂದು ನಕಲಿ ಪ್ಯಾನ್ ಕಾರ್ಡ್, ಒಂದು ಡೆಬಿಟ್ ಕಾರ್ಡ್, ಬಳಕೆಯಾಗದ ಸಿಮ್ ಮತ್ತು ನೋಟ್ ಬುಕ್, ಸರ್ಕ್ಯೂಟ್ ಡ್ರಾಯಿಂಗ್‌ಗಳು ಪತ್ತೆಯಾಗಿವೆ.
ಬೆಳಗ್ಗೆ ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿದ್ದು ಸಮಗ್ರ ಪರಿಶೀಲನೆ ಆರಂಭಿಸಿದ್ದಾರೆ. ಮನೆಯ ಮಾಲೀಕರು ಏಜೆನ್ಸಿಯ ಜೊತೆ ತನಿಖೆಗೆ ಸಹಕರಿಸುತ್ತಿದ್ದಾರೆ.
DAKSHINA KANNADA
Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!
ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.
ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.
ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.
ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.
ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
DAKSHINA KANNADA
ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ