DAKSHINA KANNADA
ಮಂಗಳೂರು ಡ್ರಗ್ ಲೇಪಿತ ಚಾಕೋಲೇಟ್ ಮಾರಾಟ ಪ್ರಕರಣ – ದೇವಸ್ಥಾನದ ಕ್ಷಮೆ ಯಾಚಿಸಿದ ಮನೋಹರ್ ಶೇಟ್..!
ದೇವಸ್ಥಾನ, ಜಾತ್ರೆ ಸಂದರ್ಭದಲ್ಲಿ ಅಮಲು ಮಿಶ್ರಿತ ಬಾಂಗ್ ತೆಗೆದುಕೊಳ್ಳುವ ಕ್ರಮ ಇದೆ ಎಂಬ ಹೇಳಿಕೆ ನೀಡಿದ್ದ ಮಂಗಳೂರು ರಥಬೀದಿ ವ್ಯಾಪಾರಿ ಮನೋಹರ ಶೇಟ್ ಇದೀಗ ತಪ್ಪೊಪ್ಪಿಗೆಯ ಹೇಳಿಕೆ ನೀಡಿದ್ದು ವಿಷಾದ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ದೇವಸ್ಥಾನ, ಜಾತ್ರೆ ಸಂದರ್ಭದಲ್ಲಿ ಅಮಲು ಮಿಶ್ರಿತ ಬಾಂಗ್ ತೆಗೆದುಕೊಳ್ಳುವ ಕ್ರಮ ಇದೆ ಎಂಬ ಹೇಳಿಕೆ ನೀಡಿದ್ದ ಮಂಗಳೂರು ರಥಬೀದಿ ವ್ಯಾಪಾರಿ ಮನೋಹರ ಶೇಟ್ ಇದೀಗ ತಪ್ಪೊಪ್ಪಿಗೆಯ ಹೇಳಿಕೆ ನೀಡಿದ್ದು ವಿಷಾದ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಮನೋಹರ್ ಶೇಟ್ , ಜುಲೈ 18ರಂದು ಮಂಗಳೂರಿನ ರಥಬೀದಿಯಲ್ಲಿ ಕಳೆದ ಹಲವು ವರ್ಷಗಳಿಂದ ಬಾಂಗ್ ಎನ್ನುವ ಮಾದಕ ದ್ರವ್ಯ ಮಾರಾಟ ಮಾಡಿದ್ದಾರೆ ಎನ್ನುವ ಆರೋಪದಲ್ಲಿ ಅಮಲುಮಿಶ್ರಿತ ಚಾಕೋಲೇಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
ಈ ಸಂದರ್ಭದಲ್ಲಿ ಬಾಂಗ್ ಎನ್ನುವುದು ಜಾತ್ರೆಯ ಸಂದರ್ಭದಲ್ಲಿ ತೆಗೆದುಕೊಳ್ಳುತ್ತಾರೆ ಎಂದು ಅಸಂಬಧ್ಧ ಹೇಳಿಕೆ ನೀಡಿದ್ದೆ.
ದೇವಸ್ಥಾನದ ರಥೋತ್ಸವ, ಓಕುಳಿ ಸಮಯದಲ್ಲಿ ಸೇವಿಸುತ್ತಾರೆ ಎಂದು ಹೇಳಿದ್ದರು.
ಹಿಂದು ಸನಾತನದಲ್ಲಿ ಅಂತಹ ಸಂಪ್ರದಾಯ ಇಲ್ಲ. ಅಲ್ಲದೆ ಯೋಗ ಗುರು ಬಾಬಾ ರಾಮ್ ದೇವ್ ಅವರ ಬಗ್ಗೆಯೂ ಹಗುರವಾದ ಮಾತು ಹೇಳಿದ್ದೆ
ನನಗೆ ಮೆದುಳಿನ ಶಸ್ತ್ರ ಚಿಕಿತ್ಸೆ ಆಗಿದ್ದು, ಮಾನಸಿಕವಾಗಿ ಅವರು ಅನಾರೋಗ್ಯಕ್ಕೆ ಒಳಗಾಗಿದೆ ಆದ್ದರಿಂದ, ತಿಳಿಯದೇ ಏನೇನೋ ಹೇಳಿಕೆ ಕೊಟ್ಟಿದೆ.
ಹೀಗಾಗಿ ತಾನು ನೀಡಿದ ಹೇಳಿಕೆಯನ್ನು ಸಮಾಜದವರು, ದೇವಸ್ಥಾನದ ಆಡಳಿತ ಮಂಡಳಿ, ಭಕ್ತರು ಗಂಭೀರವಾಗಿ ಪರಿಗಣಿಸದೇ ಕ್ಷಮೆ ನೀಡಬೇಕೆಂದು ಮನೋಹರ್ ಶೇಟ್ ಹೇಳಿದರು.
ಈ ಸಂದರ್ಭ ಮನೋಹರ ಶೇಟ್ ಅವರ ಸಹೋದರ ಪ್ರಕಾಶ್ ಡಿ ಶೇಟ್, ಮನೋಜ್ ಶ್ರೀನಿವಾಸ ನಾಯಕ್ ಉಪಸ್ಥಿತರಿದ್ದರು.
DAKSHINA KANNADA
ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ
ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್ಗಳನ್ನು ತೆರೆದಿದೆ.
ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ.
ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್ಗಳು ನೇರವಾಗಿ ಪ್ಲಾಟ್ಫಾರ್ಮ್ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.
ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
DAKSHINA KANNADA
ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!
ಮಂಗಳೂರು ( ರಾಜಸ್ಥಾನ ) : ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.
ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :
ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.
ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.
- LATEST NEWS6 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು
- DAKSHINA KANNADA7 days ago
ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!
- LATEST NEWS5 days ago
ಖಾಲಿ ಬಿಯರ್ ಬಾಟಲಿಗಳಿಂದ ಲಕ್ಷಾಧಿಪತಿಯಾದ ವ್ಯಕ್ತಿ..!
- LATEST NEWS5 days ago
ಪ್ರೇಯಸಿಯ ಜೊತೆ ಗೋವಾ ಟೂರ್..! ಕ್ಷೌರಿಕನಿಗೆ ದುಬಾರಿಯಾದ ಟೂರ್..!