DAKSHINA KANNADA
Mangaluru: ಕ್ಷುಲ್ಲಕ ಕಾರಣಕ್ಕೆ ಬಾರ್‌ನೊಳಗೆ ಯುವಕರ ನಡುವೆ ಮಾರಾಮಾರಿ..!
ಮಂಗಳೂರು: ಮದ್ಯಪಾನ ಮಾಡಿದ ಮತ್ತಿನಲ್ಲಿ ಮಂಗಳೂರಿನ ಕೊಟ್ಟಾರ ಬಳಿ ಇರುವ ಬಾರ್‌ವೊಂದರೊಳಗೆ ಯುವಕರ ನಡುವೆ ಮಾರಾಮಾರಿ ನಡೆದ ಘಟನೆ ವರದಿಯಾಗಿದ್ದು, ಹೊಡೆದಾಟದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಶೋಕ್ ಪೂಜಾರಿ ಎಂಬಾತನ ಮೇಲೆ ಬಿಯರ್ ಮತ್ತು ಸೋಡಾ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅನೂಪ್ ಮತ್ತು ರೀತು ಎಂಬವನ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಧ್ಯ ಪ್ರವೇಶಿಸಿದ ಅಶೋಕ್ ಮೇಲೆ ರೀತು ಮತ್ತು ವಿಶ್ವ ಎಂಬವರು ಕೌಂಟರ್ ನಲ್ಲಿ ಇದ್ದ ಬಿಯರ್ ಹಾಗೂ ಸೋಡಾ ಬಾಟಲಿಯಿಂದ ತಲೆ, ಮುಖ, ಬೆನ್ನಿನ ಭಾಗಗಳಿಗೆ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಚೌಕಿಯ ವಿಶ್ವ ಎಂಬಾತನೂ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಬಿಯರ್ ಬಾಟಲಿ ಮತ್ತು ಸೋಡಾ ಬಾಟಲಿ ಚೂರಿನಿಂದ ತಲೆ, ಮುಖದ ಭಾಗಗಳಿಗೆ ತಿವಿದು ಕೊಲೆ ಯತ್ನ ನಡೆಸಲಾಗಿದೆ ಎಂದು ದೂರು ನೀಡಲಾಗಿದ್ದು, ಗಾಯಾಳು ಅಶೋಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಯ ದೃಶ್ಯ ಬಾರ್ ನ ಸಿಸಿ ಟಿವಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Ancient Mangaluru
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.
ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
DAKSHINA KANNADA
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.
ಪ್ರೀತಮ್ ಅವರು ಬೈಕ್ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್ ಪಂಪ್ ಕಡೆಯಿಂದ ಸರ್ವಿಸ್ ರೋಡ್‌ನಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್ ಕೆಟರಿಂಗ್ ಉದ್ಯಮ ನಡೆಸುತ್ತಿದ್ದರು. ಪ್ರೀತಮ್ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
DAKSHINA KANNADA
ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ
ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.
ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
- bengaluru6 days ago
ಸಿಂಪಲ್ ಆಗಿ ಮದುವೆಯಾದ ಒಳ್ಳೆ ಹುಡುಗ ಪ್ರಥಮ್
- DAKSHINA KANNADA7 days ago
ದ.ಕ ಜಿಲ್ಲೆಯತ್ತ ಗಮನ ನೀಡ್ತೇನೆ, ಮತ್ತೆ ಆಶೀರ್ವಾದ ಮಾಡಿ ಎಂದ ಸಂಸದ ನಳಿನ್
- bangalore6 days ago
ವಿನಯ್ ತರ ದುಷ್ಮಾನ್ ಆದ್ರೂ ಓಕೆ, ಆದ್ರೆ ಸಂಗೀತಾ ತರ ಪ್ರೆಂಡ್ಸ್ ಬೇಡ..!
- bangalore3 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?