DAKSHINA KANNADA
ಮಂಗಳೂರು : ವೇದಮಾಯು ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಅಮವಾಸ್ಯೆಯ ಹಾಲೆ ಕಷಾಯ, ಮೆಂತೆ ಗಂಜಿ ಉಚಿತ ವಿತರಣೆ
Published
5 months agoon
By
NEWS DESK4ಮಂಗಳೂರು : ಶರಬತ್ಕಟ್ಟೆ ಸಮೀಪದಲ್ಲಿರುವ ವೇದಮಾಯು ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಅಮವಾಸ್ಯೆಯ ಹಾಲೆ ಮರದ ತೊಗಟೆ ಕಷಾಯ ಹಾಗೂ ಮೆಂತೆ ಗಂಜಿಯ ಉಚಿತ ವಿತರಣೆ ಇಂದು(ಆ.4) ನಡೆಯಿತು. ಆಯುಷ್ ಇಲಾಖೆ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ದಕ್ಷಿಣ ಕನ್ನಡ ಪ್ರವಾಸೋದ್ಯಮ ಇಲಾಖೆ, ಮಂಗಳೂರಿನ ಸಾವಯವ ಕೃಷಿಕ ಬಳಗ ಹಾಗೂ ವೇದಮಾಯು ಆಯುರ್ವೇದ ಆಸ್ಪತ್ರೆಯ ಜಂಟಿ ಸಹಯೋಗದಲ್ಲಿ ಆಟಿ ಕಷಾಯದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆಟಿ ಕಷಾಯ ಕುಡಿಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಮ್ಮ ಪಾರಂಪರಿಕ ಪದ್ಧತಿ ಕೇವಲ ಆಚರಣೆಯಲ್ಲ, ಅದು ನಮ್ಮ ಪರಿಸರ, ದೈಹಿಕ ಆರೋಗ್ಯವನ್ನು ಒಳಗೊಂಡಿರುವ ಸಂಸ್ಕೃತಿಯಾಗಿದೆ. ಆಷಾಢ ಕಾಲದ ಬಿರುಮಳೆಗೆ ನಮ್ಮ ಪರಿಸರದಲ್ಲಿಯೇ ಸಿಗುವ ಅಂಶಗಳನ್ನು ಮದ್ದಾಗಿ ಸೇವಿಸುವುದನ್ನು ನಮ್ಮ ಪಾರಂಪರಿಕ ವೈದ್ಯಕೀಯ ಪದ್ಧತಿಗಳಾದ ಸಿದ್ಧ, ಆಯುರ್ವೇದದಲ್ಲಿ ತಲೆತಲಾಂತರಗಳಿಂದ ಅನುಭವದಾರಿಕೆಯ ಮೂಲಕ ಇಂದಿಗೂ ಅನುಕರಿಸಲಾಗುತ್ತಿದೆ. ಇಂತಹ ಪದ್ಧತಿಗಳನ್ನು ಉಳಿಸಿ, ಮುಂದಿನ ತಲೆಮಾರಿಗೆ ಅದನ್ನು ವರ್ಗಾಯಿಸುವ ಕೆಲಸ ಬಹುಮುಖ್ಯವಾಗಿ ತುಳುನಾಡಿನಲ್ಲಿ ಆಗುತ್ತಿದೆ. ಇದು ಬಹಳ ಶ್ಲಾಘನೀಯ ಕೆಲಸವಾಗಿದೆ. ನಮ್ಮ ಕಲೆ, ಸಂಸ್ಕೃತಿ, ಆಹಾರ, ವಿಚಾರಗಳ ಜೊತೆಯಲ್ಲಿ ನಮ್ಮ ಆಚರಣೆಗಳನ್ನು ಜಗತ್ತಿಗೆ ತೋರಿಸಿ, ಆಸಕ್ತರಿಗೆ ಅವಕಾಶವನ್ನು ಒದಗಿಸುವಂತದ್ದು, ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತದೆ. ಅಂತಹ ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಿರುವುದು ಸಂತಸದ ವಿಷಯ ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್, ಜಿಲ್ಲಾ ಪ್ರವಾಸೋದ್ಯಮ ಉಪ ನಿರ್ದೇಶಕ ಎನ್ ಮಾಣಿಕ್ಯ, ದಾಯ್ಜಿವಲ್ಡ್ ನ್ಯೂಸ್‌ನ ವಾಲ್ಟರ್ ನಂದಳಿಕೆ, ಜನಪದ ತಜ್ಞ ಮುಕೇಶ್ ಪಂಬದ, ಸಾವಯವ ಬಳಗದ ರತ್ನಾಕರ್ ಉಪಸ್ಥಿತರಿದ್ದರು.
ಇದನ್ನೂ ಓದಿ : ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ, ವಿಕೃ*ತಿ ಮೆರೆದ ಪತಿ
ವೇದಮಾಯು ಆಯುರ್ವೇದ ಆಸ್ಪತ್ರೆಯ ಡಾ.ಕೇಶವರಾಜ್ ಅತಿಥಿಗಳನ್ನು ಸ್ವಾಗತಿಸಿದರು. ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು. ಸಾವಯವ ಬಳಗದ ಸದಸ್ಯರು ಆಟಿ ಕಷಾಯ ಹಾಗೂ ಮೆಂತೆ ಗಂಜಿ ವಿತರಣೆಯಲ್ಲಿ ಸಹಕರಿಸಿದರು. ಸುಮಾರು 3೦೦ಕ್ಕೂ ಅಧಿಕ ಜನರು ಉಚಿತ ಆಟಿ ಕಷಾಯ ಹಾಗೂ ಮೆಂತೆ ಗಂಜಿಯನ್ನು ಸ್ವೀಕರಿಸಿದರು.
ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.
ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
DAKSHINA KANNADA
ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ
Published
5 hours agoon
15/01/2025ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
DAKSHINA KANNADA
ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?
Published
7 hours agoon
15/01/2025By
NEWS DESK3ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ
ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.
LATEST NEWS
ಬಾಲಕಿಯರಿಬ್ಬರ ಮೇಲೆ ಅ*ತ್ಯಾಚಾ*ರವೆಸಗಿ ಬ್ಲ್ಯಾ*ಕ್ಮೇಲ್ ಮಾಡಿದ ಗ್ಯಾಂಗ್ ಅರೆಸ್ಟ್
ಫಿನಾಲೆಗೆ ಡೇಟ್ ಫಿಕ್ಸ್; ಈ ಸಲ ಬಿಗ್ ಬಾಸ್ ಗೆಲ್ಲುವವರು ಯಾರು ?
ಗೆಳತಿಯ ಖಾ*ಸಗಿ ಫೊಟೋ, ವಿಡಿಯೋ ಶೇರ್ ಮಾಡಿ ಆ*ತ್ಮಹ*ತ್ಯೆಗೆ ಶರಣಾದ ಯುವಕ
ಧನರಾಜ್ ಗೆ ಒಲಿದ ಅದೃಷ್ಟ; ಭವ್ಯಾಗೆ ಆಘಾತ !
ಸರಿಗಮ ವಿಜಿ ಹೆಸರಿಗೆ ‘ಸರಿಗಮ’ ಸೇರಿಕೊಳ್ಳಲು ಆ ಒಂದು ನಾಟಕ ಕಾರಣ !
ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು
Trending
- BIG BOSS4 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS5 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS2 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- FILM6 days ago
ಮಗುವಿನೊಂದಿಗೆ ಕೊಲ್ಲೂರು ದೇಗುಲಕ್ಕೆ ಹರ್ಷಿಕಾ ದಂಪತಿ ಭೇಟಿ