DAKSHINA KANNADA
Mangaluru: ಕಂಬಳಕ್ಕೆ ಸರಕಾರದಿಂದ ಸಂಪೂರ್ಣ ಸಹಕಾರ ಇದೆ -ಡಿಸಿಎಂ ಡಿ ಕೆ ಶಿವಕುಮರ್
ಮಂಗಳೂರು:ವಾಮಂಜೂರು ತಿರುವೈಲು ಗುತ್ತು ಸಂಕುಪೂಂಜ-ದೇವುಪೂಂಜ ಜೋಡುಕರೆ ಕಂಬಳ ಟ್ರಸ್ಟ್ ವತಿಯಿಂದ ಇಂದು ತುಳುನಾಡಿನ ಕಂಬಳ ಎಂದೇ ಖ್ಯಾತಿಯನ್ನು ಪಡೆದಿರುವ ತಿರುವೈಲೋತ್ಸವ ಕಂಬಳ ಆರಂಭಗೊಂಡಿದೆ.
ಪ್ರಕೃತಿ ರಮಣೀಯವಾಗಿರುವ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಾಲಯದ ವ್ಯಾಪ್ತಿಯ ಐದು ಗ್ರಾಮ ಒಂದು ಮಾಗಣೆಗೆ ಸಂಬಂಧಪಟ್ಟ ಮೊದಲ ಗುತ್ತಿನ ಮನೆ ತಿರುವೈಲು ಗುತ್ತು. ಈ ಗುತ್ತಿನ ಮನೆಯ ಇತಿಹಾಸ ಪ್ರಸಿದ್ಧ ಸಂಕುಪೂಂಜ- ದೇವುಪೂಂಜ ಕಂಬಳ ಗುತ್ತಿನ ಮನೆಯ ಯಜಮಾನ, ತಿರುವೈಲು ಗುತ್ತು ಕಂಬಳ ಸಂಸ್ಥಾಪಕರಾದ ನವೀನ್ಚಂದ್ರ ಆಳ್ವ ಅವರ ನೇತೃತ್ವದಲ್ಲಿ ವೈಭವಯುತವಾಗಿ ಇಂದು ಮುಂಜಾನೆ ಆರಂಭಗೊಂಡಿತು. ಮುಂಜಾನೆ ಶ್ರೀ ಅಮೃತೇಶ್ವರ ದೇವರಿಗೆ ವಿಶೇಷವಾದ ಪೂಜೆಯನ್ನು ಗುತ್ತಿನ ಮನೆಯ ಯಜಮಾನದ ಸಮ್ಮುಖದಲ್ಲಿ ನಡೆಸಿ ಬಳಿಕ ಕರೆ ಪೂಜೆ ಬಳಿಕ ಕಂಬಳ ಓಟಕ್ಕೆ ಚಾಲನೆ ನೀಡಲಾಯಿತು.
ಕಂಬಳವನ್ನು ವೀಕ್ಷಿಸಲು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಗಮಿಸಿದ್ದು, ವಿಶೇಷವಾಗಿತ್ತು.
ತುಳುನಾಡು ಪವಿತ್ರವಾದ ಭೂಮಿ. ಇದು ಸರ್ವ ಜನಾಂಗದ ಶಾಂತಿಯ ತೋಟ. ಎಲ್ಲಾ ರಂಗದಲ್ಲೂ ಕೂಡಾ ಉದ್ಯೋಗವನ್ನು ಸೃಷ್ಟಿ ಮಾಡುವುದೇ ಈ ಭೂಮಿ. ಇಲ್ಲಿನ ಭಾಷೆ, ಸಂಸ್ಕೃತಿ ಇಡೀ ರಾಜ್ಯಕ್ಕೆ ಮಾದರಿ. ಕಂಬಳವನ್ನು ಉಳಿಸಿಕೊಂಡು ಬೆಳೆಸುವ ಪ್ರತಿಯೊಬ್ಬರಿಗೂ ನಾನು ಶುಭ ಹಾರೈಸುತ್ತೇನೆ. ಈ ಕ್ರೀಡೆಗೆ ಬೇಕಾದ ಸಹಕಾರ ಸರಕಾರದ ವತಿಯಿಂದ ನೀಡಲಾಗುತ್ತದೆ ಎಂದರು.
ವೇದಿಕೆಯಲ್ಲಿ ಗೌರವಾಧ್ಯಕ್ಷ ಮಿಥುನ್ ರೈ, ಕಾರ್ಯಾಧ್ಯಕ್ಷ ತಿರುವೈಲು ಗುತ್ತು ಪ್ರವೀಣ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ರಾಜ್ಕುಮಾರ್ ಶೆಟ್ಟಿ, ಪವನ್ ಶೆಟ್ಟಿ, ನವೀನ್ ಕುಮಾರ್ ಶೆಟ್ಟಿ ಚಂದಳಿಕೆ,ಕೋಶಾಧಿಕಾರಿಗಳಾದ ಧನರಾಜ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಅಭಿಲಾಷ್, ಅತಿಥಿಗಳಾದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಾಜಿ ಮೇಯರ್ ಮಹಾಬಲ ಮಾರ್ಲ, ಕಾಂಗ್ರೆಸ್ ನಾಯಕ ಇನಾಯತ್ ಆಲಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಖಜಾಂಚಿ ಪದ್ಮರಾಜ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
DAKSHINA KANNADA
ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ
ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.
ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.
ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
DAKSHINA KANNADA
ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ
ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್ಗಳನ್ನು ತೆರೆದಿದೆ.
ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ.
ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್ಗಳು ನೇರವಾಗಿ ಪ್ಲಾಟ್ಫಾರ್ಮ್ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.
ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- LATEST NEWS6 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು
- LATEST NEWS5 days ago
ಖಾಲಿ ಬಿಯರ್ ಬಾಟಲಿಗಳಿಂದ ಲಕ್ಷಾಧಿಪತಿಯಾದ ವ್ಯಕ್ತಿ..!
- LATEST NEWS5 days ago
ಪ್ರೇಯಸಿಯ ಜೊತೆ ಗೋವಾ ಟೂರ್..! ಕ್ಷೌರಿಕನಿಗೆ ದುಬಾರಿಯಾದ ಟೂರ್..!
- DAKSHINA KANNADA5 days ago
ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!