Home ಪ್ರಮುಖ ಸುದ್ದಿ ನಾಳೆಯಿಂದ ಮಂಗಳೂರಿನಲ್ಲಿ ಎಲ್ಲವೂ ಸಂಪೂರ್ಣ ಬಂದ್..! ಮುಂದೇನು.?

ನಾಳೆಯಿಂದ ಮಂಗಳೂರಿನಲ್ಲಿ ಎಲ್ಲವೂ ಸಂಪೂರ್ಣ ಬಂದ್..! ಮುಂದೇನು.?

ನಾಳೆಯಿಂದ ಮಂಗಳೂರಿನಲ್ಲಿ ಎಲ್ಲವೂ ಸಂಪೂರ್ಣ ಬಂದ್..! ಮುಂದೇನು.?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ನಾಳೆಯಿಂದ ಸಂಪೂರ್ಣ ಬಂದ್ ಆಗಲಿದ್ದು, ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತವೇ ಮನೆಗೆ ತಲುಪಿಸಲಿದೆ ಎಂದು ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದಾರೆ.

ಇಂದೇ (ಮಾರ್ಚ್ 25) ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶವನ್ನು ನೀಡಲಾಗಿದೆ. ಆದರೆ ನಾಳೆ (ಮಾರ್ಚ್ 26) ಯಿಂದ ಈ ವ್ಯವಸ್ಥೆ ಜಾರಿಯಲ್ಲಿ ಇರುವುದಿಲ್ಲ.

ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಅಗತ್ಯ ವಸ್ತುಗಳನ್ನು ಅವಶ್ಯಕತೆಯಿರುವವರ ಮನೆ ಬಾಗಿಲಿಗೇ ತಲುಪಿಸಲಾಗುವುದು.

ಸರಕಾರದ ಕಡೆಯಿಂದ ಈ ವ್ಯವಸ್ಥೆಯನ್ನು ಯಾವ ರೀತಿಯಲ್ಲಿ ಮಾಡಬಹುದು ಎನ್ನುವ ಕುರಿತು ಅಧಿಕಾರಿಗಳ ಜೊತೆಗೆ ಈಗಾಗಲೇ ಚರ್ಚೆಯನ್ನೂ ನಡೆಸಲಾಗುತ್ತಿದೆ.

ಅಪಾರ್ಟ್ ಮೆಂಟ್ ಗಳಿಗೆ ಹೇಗೆ ತಲುಪಿಸೋದು ಅಂತ ಮಾತುಕತೆ ನಡೆಯುತ್ತಿದೆ. ಇಷ್ಟೇ ಅಲ್ಲದೇ ಈ ನಡುವೆ ಕೇರಳ ಭಾಗದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅಂಬ್ಯುಲೆನ್ಸ್ ಗಳ ಮೂಲಕ ಮಂಗಳೂರಿಗೆ ರೋಗಿಗಳು ಬರುತ್ತಿರುವುದು ಗಮನಕ್ಕೆ ಬಂದಿದೆ.

ಸದ್ಯದ ಸ್ಥಿತಿಯಲ್ಲಿ ಮಂಗಳೂರಿನಲ್ಲಿರುವ ಆಸ್ಪತ್ರೆ ಜಿಲ್ಲೆಯ ಜನರಿಗೇ ಸಾಕಾಗುವುದಿಲ್ಲ.

ನಿನ್ನೆ ಅತೀ ಹೆಚ್ಚು ರೋಗಿಗಳು ಕೇರಳದಿಂದ ಮಂಗಳೂರಿಗೆ ಬಂದಿದ್ದಾರೆ. ಹೀಗಾಗಿ ಹೊರಗಿನ ಯಾವುದೇ ವಾಹನ, ಅಂಬ್ಯುಲೆನ್ಸ್ ಗಳನ್ನು ಜಿಲ್ಲೆಯ ಒಳಗೆ ಬಿಡಬಾರದು ಎಂದು ನಿರ್ಧರಿಸಲಾಗಿದೆ.

ಎಲ್ಲಾ ಅಂಬ್ಯುಲೆನ್ಸ್ ಗಳನ್ನು ತಲಪಾಡಿ ಗಡಿಯಲ್ಲೇ ನಿರ್ಬಂಧಿಸಲಾಗುತ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದಾರೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...