Connect with us

    DAKSHINA KANNADA

    ಮಂಗಳೂರು : ವೈದ್ಯರ ಗಾಂಜಾ ಜಾಲ ಪ್ರಕರಣ:ವೈದ್ಯರು, ವೈದ್ಯ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು..!

    Published

    on

    ಮಂಗಳೂರಿನಲ್ಲಿನ ವೈದ್ಯರ ಗಾಂಜಾ ಜಾಲ ಪ್ರಕರಣಕ್ಕೆ ಸಂಬಂಧಿದಂತೆ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.

    ಮಂಗಳೂರು :  ಮಂಗಳೂರಿನಲ್ಲಿನ ವೈದ್ಯರ ಗಾಂಜಾ ಜಾಲ ಪ್ರಕರಣಕ್ಕೆ ಸಂಬಂಧಿದಂತೆ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿ ವೈದ್ಯರು ಮತ್ತು ವಿದ್ಯಾರ್ಥಿಗಳ ಸಹಿತ ಒಟ್ಟು 24 ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು.

    ಈ ಪೈಕಿ ವೈದ್ಯಕೀಯ (ಬಿಡಿಎಸ್‌) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್‌ ಕಿಂಗ್‌ಡಮ್‌ನ ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ (38) ಹೊರತುಪಡಿಸಿ ಉಳಿದ 23 ಮಂದಿಗೂ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.

    ಈ ಹಿಂದೆ 13 ಮಂದಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು. ಇದೀಗ 10 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

    ಈ ಇಡೀ ಗಾಂಜಾ ಜಾಲದ ರೂವಾರಿ ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.

    BIG BOSS

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಂಚು ರೂಪಿಸುತ್ತಿದ್ದಾಗಲೇ ಅರೆಸ್ಟ್‌

    Published

    on

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.

    ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್‌ನನ್ನು ಬಂಧಿಸಲು ಮುಂದಾಗಿದೆ.

    ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್‌ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

    ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .

    Continue Reading

    BIG BOSS

    ಕೊಣಾಜೆ: 3 ವರ್ಷದ ಬಾಲೆಗೆ ಕಿ*ರುಕುಳ ನೀಡಿದ 70ರ ಅಜ್ಜ ಅರೆಸ್ಟ್

    Published

    on

    ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ,‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.

    ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ

    Published

    on

    ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.

    ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.

    ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending