ಮಂಗಳೂರಿನಲ್ಲಿನ ವೈದ್ಯರ ಗಾಂಜಾ ಜಾಲ ಪ್ರಕರಣಕ್ಕೆ ಸಂಬಂಧಿದಂತೆ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಮಂಗಳೂರು : ಮಂಗಳೂರಿನಲ್ಲಿನ ವೈದ್ಯರ ಗಾಂಜಾ ಜಾಲ ಪ್ರಕರಣಕ್ಕೆ ಸಂಬಂಧಿದಂತೆ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ವೈದ್ಯರು ಮತ್ತು ವಿದ್ಯಾರ್ಥಿಗಳ ಸಹಿತ ಒಟ್ಟು 24 ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು.
ಈ ಪೈಕಿ ವೈದ್ಯಕೀಯ (ಬಿಡಿಎಸ್) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್ ಕಿಂಗ್‌ಡಮ್‌ನ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ (38) ಹೊರತುಪಡಿಸಿ ಉಳಿದ 23 ಮಂದಿಗೂ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.
ಈ ಹಿಂದೆ 13 ಮಂದಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು. ಇದೀಗ 10 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ಈ ಇಡೀ ಗಾಂಜಾ ಜಾಲದ ರೂವಾರಿ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.