Connect with us

DAKSHINA KANNADA

ಮಂಗಳೂರು: ತೋಟ ಬೆಂಗ್ರೆಯ ಜನರಲ್‌ ಸ್ಟೋರ್‌ನಲ್ಲಿ ಭಾರೀ ಬೆಂಕಿ- ಸುಟ್ಟು ಕರಕಲಾದ ಅಂಗಡಿ

Published

on

ನಗರದ ತೋಟಬೆಂಗ್ರೆ ಪರಿಸರದಲ್ಲಿರುವ ಜನರಲ್‌ ಸ್ಟೋರ್‌ಗೆ ಸೋಮವಾರ ತಡರಾತ್ರಿ ಆಕಸ್ಮಿಕ ಬೆಂಕಿ ಹಿಡಿದು ಅಪಾರ ನಷ್ಟ ಸಂಭವಿಸಿದೆ.

ಮಂಗಳೂರು: ನಗರದ ತೋಟಬೆಂಗ್ರೆ ಪರಿಸರದಲ್ಲಿರುವ ಜನರಲ್‌ ಸ್ಟೋರ್‌ಗೆ ಸೋಮವಾರ ತಡರಾತ್ರಿ ಆಕಸ್ಮಿಕ ಬೆಂಕಿ ಹಿಡಿದು ಅಪಾರ ನಷ್ಟ ಸಂಭವಿಸಿದೆ.

ಸರಿಸುಮಾರು 2 ಘಂಟೆ ರಾತ್ರಿಗೆ ಜನರಲ್ ಸ್ಟೋರ್ ನಲ್ಲಿ ಬೆಂಕಿ ಕಾಣಿಸಿದ್ದು, ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕದ್ರಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರಲ್ಲದೇ ತಾವೇ ಸ್ವತಃ ಬೆಂಕಿ ನಂದಿಸುವ ಎಲ್ಲಾ ಪ್ರಯತ್ನ ಮಾಡಿದ್ದಾರೆ.

ಬಳಿಕ ಬಂದ ಕದ್ರಿ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಸೇರಿ ಬೆಂಕಿ ನಂದಿಸಿದ್ದಾರೆ.

ಅಷ್ಟರಲ್ಲಾಗಲೇ ಅಂಗಡಿಯ ಸಾಮಾನು ಸಂಪೂರ್ಣ ಸುಟ್ಟು ಕರಕಲಾಗಿದೆ.

ಬೆಂಗ್ರೆ ಮಹಾಜನ ಸಭಾದ ಕಟ್ಟಡದಲ್ಲಿ ಇರುವ ಜನರಲ್ ಸ್ಟೋರ್ ಗೀತಾ ಕರ್ಕೇರಾ ಎಂಬವರ ಮಾಲೀಕತ್ವದ್ದಾಗಿದ್ದು, ಸುಮಾರು ಒಂದುವರೆ ಲಕ್ಷದ ಸಾಮಾನುಗಳನ್ನು ಖರೀದಿಸಿ ಅಂಗಡಿಗೆ ತಂದಿಡಲಾಗಿತ್ತು.

ಆದರೆ ಇದೀಗ 8 ಲಕ್ಷ ‌ಮೌಲ್ಯದ ಸಾಮಾನುಗಳು ಸುಟ್ಟ ಹೋಗಿದೆ. ಅಂಗಡಿ ಮಾಲಿಕನಿಗೆ ಭಾರಿ ನಷ್ಟ ಉಂಟಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!

Published

on

ಕಡಬ: ವ್ಯಕ್ತಿಯೊಬ್ಬರು  ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ.  ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.

ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!

marriage

ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.  ಮಾರ್ಚ್‌1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್‌ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading

DAKSHINA KANNADA

ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ

Published

on

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.

ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.

ಪ್ರೀಮಿಯರ್ ಶೋ

ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.

Continue Reading

DAKSHINA KANNADA

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ

Published

on

ಸುಳ್ಯ :  ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ  ಮೃ*ತ ಸಹೋದರರು.

ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

Continue Reading

LATEST NEWS

Trending