bengaluru
Mangaluru: ಪತ್ರಕರ್ತ, ಪತ್ರಿಕೋದ್ಯಮ ಪ್ರಾಧ್ಯಾಪಕ ಪಾವ್ಲ್ ಬೆಂಜಮಿನ್ ನಿಧನ..!
ನಿವೃತ್ತ ಪತ್ರಕರ್ತ ಹಾಗೂ ಬೆಂಗಳೂರಿನ ಸೈಂಟ್ ಪಾವ್ಲ್‌ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಅಸಿಸ್ಟಂಟ್ ಪ್ರೊಫೆಸರ್ ಆಗಿದ್ದ ಪಾವ್ಲ್ ಬೆಂಜಮಿನ್ ಅವರು ನಿಧನ ಹೊಂದಿದ್ದಾರೆ.
ಮಂಗಳೂರು: ನಿವೃತ್ತ ಪತ್ರಕರ್ತ ಹಾಗೂ ಬೆಂಗಳೂರಿನ ಸೈಂಟ್ ಪಾವ್ಲ್‌ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಅಸಿಸ್ಟಂಟ್ ಪ್ರೊಫೆಸರ್ ಆಗಿದ್ದ ಪಾವ್ಲ್ ಬೆಂಜಮಿನ್ ಅವರು ನಿಧನ ಹೊಂದಿದ್ದಾರೆ.
ಮೈಸೂರು ಸಮೀಪದ ಕೊಳ್ಳೇಗಾಲ ನಿವಾಸಿಯಾಗಿದ್ದ ಅವರು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜು ಮತ್ತು ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ.
ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದ ಅವರು ಮಂಗಳೂರಿನ ವೆಬ್‌ಸೈಟ್ ಗಳಲ್ಲಿ ಮತ್ತು ಪತ್ರಿಕೆಯಲ್ಲಿ ಕೆಲವು ವರ್ಷ ಸೇವೆ ಸಲ್ಲಿಸಿದ್ದರು.
ಬಳಿಕ ಹೊಸ ದಿಲ್ಲಿಗೆ ಹಾಗೂ ಇತ್ತೀಚೆಗೆ ಬೆಂಗಳೂರಿನ ಸೈಂಟ್ ಪಾವ್ಲ್‌ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾಗಿ ಸೇರ್ಪಡೆ ಗೊಂಡಿದ್ದರು.
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರು ಕಳೆದ 25 ದಿನಗಳಿಂದ ಸಾವು ಬದುಕಿನ ಹೋರಾಟದಲ್ಲಿದ್ದರು.
bengaluru
ಪಟಾಕಿ ದುರಂತ: ಡಬ್ಬದ ಮೇಲೆ ಯುವಕನನ್ನು ಕೂರಿಸಿ ಬಾಂಬ್ ಸಿಡಿಸಿದ್ರು; ಸ್ಥಳದಲ್ಲೇ ಸಾ*ವು!
ಬೆಂಗಳೂರು: ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬ*ಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.
ಪಟಾಕಿ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದರೆ ಸ್ನೇಹಿತರು ಹುಡುಗಾಟ ಮಾಡಲು ಹೋಗಿ ಸ್ನೇಹಿತನನ್ನೇ ಕಳೆದುಕೊಂಡಿದ್ದಾರೆ. ಶಬರೀಶ್ ಎಂಬ ಯುವಕ ಸ್ನೇಹಿತರೊಂದಿಗೆ ಹುಚ್ಚಾಟ ಮಾಡಲು ಹೋಗಿ ಬ*ಲಿಯಾಗಿದ್ದಾನೆ.
ದೀಪಾವಳಿ ದಿನದಂದು ಶಬರೀಶ್ ಹಾಗೂ ಸ್ನೇಹಿತರು ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಪಟಾಕಿ ಇಟ್ಟು ಅದರ ಮೇಲೆ ಡಬ್ಬ ಇಟ್ಟು ಕೂರಲು ಚಾಲೆಂಜ್ ಹಾಕಿದ್ದರು. ಮದ್ಯಪಾನ ಮಾಡಿದ್ದ ಶಬರೀಶ್ ಅದೇ ರೀತಿ ಮಾಡಿದ್ದಾನೆ. ಪಟಾಕಿ ಸಿಡಿದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದಾನೆ.
ಗಾಯಾಳು ಶಬರೀಶನನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶಬರೀಶ್ ಸಾ*ವನ್ನಪ್ಪಿದ್ದಾನೆ. ಸದ್ಯ ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.
bangalore
ಅಬ್ಬಬ್ಬಾ! ಖತರ್ನಾಕ್ ಗರ್ಲ್ ಫ್ರೆಂಡ್; ಪ್ರಿಯಕರನನ್ನೇ ರಾಬರಿ ಮಾಡಿಸಿದ ಯುವತಿ, ಯಾಕೆ ಗೊತ್ತಾ!?
ಮಂಗಳೂರು/ ಬೆಂಗಳೂರು: ಇತ್ತೀಚೆಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೆಲವೊಂದು ಪ್ರಕರಣಗಳು ವಿಚಿತ್ರವಾಗಿರುತ್ತವೆ. ಇಲ್ಲೊಬ್ಬಾಕೆ ಪ್ರಿಯತಮನ ಮೊಬೈಲ್‌ನಲ್ಲಿದ್ದ ತನ್ನ ಫೋಟೋ ಹಾಗೂ ವೀಡಿಯೊಗಳನ್ನು ಡಿಲೀಟ್ ಮಾಡಿಸಲೆಂದು ರಾಬರಿ ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಿನಿಮೀಯ ರೀತಿ ಪ್ರಿಯತಮೆಯೇ ಪ್ರಿಯಕರನ ಮೇಲೆ ರಾಬರಿ ಮಾಡಿಸಿ ಸಿಕ್ಕಿಬಿದ್ದಿದ್ದಾಳೆ.
ಬೆಳ್ಳಂದೂರು ಪೊಲೀಸರು ಟೆಕ್ಕಿ ಶ್ರುತಿ ಸೇರಿ ಮೂವರನ್ನು ಬಂಧಿಸಿದ್ದಾರೆ.
ಆ್ಯಕ್ಸಿಡೆಂಟ್ – ಡ್ರಾಮಾ :
ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶ್ರುತಿ ಭೇಟಿಗೆ ತೆರಳಿದ್ದ. ಭೇಟಿಯಾಗಿ ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದ ಅಪರಿಚಿತರು ವಂಶಿಕೃಷ್ಣರೆಡ್ಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಜಗಳ ತೆಗೆದ ಅಪರಿಚಿತರು ಆತನ ಬಳಿಯಿದ್ದ ಮೊಬೈಲ್ ಕಸಿದಿದ್ದರು. ಅಲ್ಲದೇ, ವಂಶಿ ಜತೆಯಲ್ಲಿಯೇ ಇದ್ದ ಶ್ರುತಿಯ ಮೊಬೈಲ್ ಅನ್ನು ಕಸಿದುಕೊಂಡಿದ್ದರು. ಬಳಿಕ ದೂರು ಕೊಡುವುದು ಬೇಡ ಮೊಬೈಲ್ ಹೋದರೆ ಹೋಯಿತು ಎಂದು ಬಾಯ್‌ಫ್ರೆಂಡ್ ವಂಶಿ ಮುಂದೆ ಶ್ರುತಿ ನಾಟಕವಾಡಿದ್ದಾಳೆ.
ಆದರೆ, ಇಷ್ಟಕ್ಕೆ ಸುಮ್ಮನಾಗದ ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ತೆರಳಿ ಕಾರಿನ ನಂಬರ್ ಸಮೇತ ದೂರು ನೀಡಿದ್ದರು.
ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
ಇದನ್ನು ಓದಿ:ಪುತ್ತೂರು ಕಾಂಗ್ರೆಸ್ ಮುಖಂಡನ ಅಶ್ಲೀ*ಲ ವೀಡಿಯೋ ವೈರಲ್..!
ಬೇಡವಾಗಿದ್ದ ಬಾಯ್ ಫ್ರೆಂಡ್ :
ಇತ್ತೀಚೆಗೆ ಪ್ರಿಯತಮ ವಂಶಿಕೃಷ್ಣನಿಂದ ದೂರವಾಗಲು ಶ್ರುತಿ ಯತ್ನಿಸಿದ್ದಳು. ಆದರೆ, ವಂಶಿಕೃಷ್ಣನ ಮೊಬೈಲ್‌ನಲ್ಲಿ ಶ್ರುತಿಯ ಫೋಟೋಗಳಿದ್ದವು. ನೇರವಾಗಿ ಹೇಳಿದರೆ ಎಲ್ಲಿ ವಂಶಿಕೃಷ್ಣ ವಿರೋಧ ವ್ಯಕ್ತಪಡಿಸುತ್ತಾನೋ ಎಂಬ ಭಯದಿಂದ ಶ್ರುತಿ ಮೊಬೈಲ್ ರಾಬರಿ ಮಾಡುವ ಯೋಜನೆ ರೂಪಿಸಿದ್ದಾರೆ. ಸದ್ಯ ಆರೋಪಿ ಟೆಕ್ಕಿ ಶ್ರುತಿಯನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದು, ಈ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
bengaluru
ಜೈಲಿನಲ್ಲೇ ಮೊಬೈಲ್ ಬಳಕೆ !
ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ
- DAKSHINA KANNADA6 days ago
ಮಂಗಳೂರು: ನೇತ್ರಾವತಿ ಸೇತುವೆ ಬಳಿ ಭೀಕರ ಅ*ಪಘಾತ; ಓರ್ವ ಮೃ*ತ್ಯು, ಮತ್ತೋರ್ವ ಗಂಭೀರ
- LATEST NEWS3 days ago
ರೈಲ್ವೆ ನಿಲ್ದಾಣದಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯ ಶ*ವ ಪತ್ತೆ; ತನಿಖೆ ವೇಳೆ ಬಯಲಾಯ್ತು ಸತ್ಯ!
- LATEST NEWS4 days ago
ಮಹಿಳೆಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 450 ರೂ.ಗೆ ಗ್ಯಾಸ್ ಸಿಲಿಂಡರ್
- DAKSHINA KANNADA4 days ago
ದಕ್ಷಿಣ ಕನ್ನಡ : ಹೆಬ್ಬಾವಿನ ಬಾಯಿಂದ ಬೆಕ್ಕಿನ ರಕ್ಷಣೆಗಾಗಿ ಶೋಭಕ್ಕನ ಹರಸಾಹಸ; ವೀಡಿಯೋ ವೈರಲ್