Connect with us

DAKSHINA KANNADA

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಪ್ರಶಸ್ತಿ ಪ್ರಕಟ

Published

on

ಮಂಗಳೂರು: ತುಳು ರಂಗಭೂಮಿ ನಟ ಕೃಷ್ಣಪ್ಪ ಉಪ್ಪೂರು, ತುಳು ಜಾನಪದ ಕ್ಷೇತ್ರದ ಸಂಜೀವ ಬಂಗೇರ ಮತ್ತು ತುಳು ಸಾಹಿತ್ಯ ಕ್ಷೇತ್ರದ ಉಲ್ಲಾಸ ಕೃಷ್ಣ ಪೈ ಪುತ್ತೂರು ಸಹಿತ ಮೂವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2021 ನೇ ಸಾಲಿನ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ತುಳು ಸಾಹಿತ್ಯ ಅಕಾಡೆಮಿಯ 2021 ನೇ ಸಾಲಿನ ಗೌರವ ಪ್ರಶಸ್ತಿ, ವಿಶೇಷ ಬಾಲ ಪ್ರತಿಭಾ ಪುರಸ್ಕಾರ, ಯುವ ಸಾಧಕ ಪ್ರಶಸ್ತಿ, ಮಾಧ್ಯಮ ಪುರಸ್ಕಾರ ಹಾಗೂ ಪುಸ್ತಕ ಬಹುಮಾನ ವಿಜೇತರ ವಿವರಗಳನ್ನು ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್‌ ಅವರು ಇಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಪ್ರಕಟಿಸಿದರು.

ಪುಸ್ತಕ ಬಹುಮಾನ ಯೋಜನೆಗೆ ಕವನ ಸಂಕಲನ ವಿಭಾಗದಲ್ಲಿ ಯೋಗೀಶ್‌ ಕಾಂಚನ್‌ ಬೈಕಂಪಾಡಿ ಅವರ ತಂಞನ ಬೊಳ್ಳಿ, ನಾಟಕ ವಿಭಾಗದಲ್ಲಿ ಅಕ್ಷತಾರಾಜ್‌ಪೆರ್ಲ ಅವರ ಬೇಲಿ, ಸಾಪೊದ ಕಣ್ಣ್‌, ಆಧ್ಯಯನ ವಿಭಾಗದಲ್ಲಿ ಡಾ. ಅಶೋಕ್‌ ಆಳ್ವ ಸುರತ್ಕಲ್‌ ಅವರ ತುಳುನಾಡಿನ ಪ್ರಾಣಿ ಜಾನಪದ ಕೃತಿಗಳು ಆಯ್ಕೆಯಾಗಿವೆ ಎಂದರು.

2021 ನೇ ಸಾಲಿನ ವಿಶೇಷ ಪುರಸ್ಕಾರ ವಿಭಾಗದಲ್ಲಿ ಬಾಲ ಪ್ರತಿಭಾ ಪುರಸ್ಕಾರಕ್ಕೆ ನಿರೀಕ್ಷಾ ಕೋಟ್ಯಾನ್‌ ಕೋಡಿಕೆರೆ, ಜೀವಿಕಾ ಶೆಟ್ಟಿ ಮುಂಬಯಿ, ಸಾನ್ವಿ ಯುಎಸ್‌ಎ, ಯುವ ಸಾಧಕ ಪುರಸ್ಕಾರ ವಿಭಾಗದಲ್ಲಿ ಹರಿಪ್ರಸಾದ್‌ ನಂದಳಿಕೆ, ಚಿನ್ಮಯಿ ಮೋಹನ್‌ ಸಾಲಿಯಾನ್‌ ಮುಂಬಯಿ,

ರಮಾನಂದ ಶೆಟ್ಟಿ ಒಮಾನ್‌, ಮಾಧ್ಯಮ ಪುರಸ್ಕಾರಕ್ಕೆ ಶಶಿ ಬಂಡಿಮಾರ್‌ಮತ್ತು ರೋನ್ಸ್ ಬಂಟ್ವಾಳ್‌, ಸಂಘಟನಾ ಪುರಸ್ಕಾರಕ್ಕೆ ಜೈ ತುಳುನಾಡು, ತುಳು ಕೂಟ ಫೌಂಡೇಶನ್‌ ನಾಲಸೋಪಾರ ಮುಂಬಯಿ ಹಾಗೂ ತುಳು ಕೂಟ ಕತಾರ್‌ ಸಂಘಟನೆ ಆಯ್ಕೆಯಾಗಿದೆ.

ಪತ್ರಿಕಾ ಗೋಷ್ಠಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಲೀಲಾಕ್ಷ ಕರ್ಕೇರ, ಕಾಂತಿ ಶೆಟ್ಟಿ, ನಾಗೇಶ್‌ ಕುಲಾಲ್‌, ರಿಜಿಸ್ಟ್ರಾರ್‌ ಕವಿತಾ ಅವರು ಉಪಸ್ಥಿತರಿದ್ದರು.

 

DAKSHINA KANNADA

”ನಮ್ಮ ಕಂಬಳ ಪ್ರಶಸ್ತಿ ಪ್ರದಾನ 2024”ರ ಸಂಭ್ರಮ; ಕಂಬಳ ಸಾಧಕರನ್ನು ಗುರುತಿಸಿ ಗೌರವಿಸಿದ “ನಮ್ಮ ಕುಡ್ಲ”

Published

on

ಮಂಗಳೂರು : ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 2023/24 ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆದ ಒಟ್ಟು 24 ಕಂಬಳಗಳ 6 ವಿಭಾಗಗಳಲ್ಲಿ ಪ್ರಶಸ್ತಿ ನೀಡುವ ವಿಶೇಷ ಕಾರ್ಯಕ್ರಮ ಶುಕ್ರವಾರ (ಮೇ 17) ಮಂಗಳೂರಿನ ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ಎಲ್.ಎಫ್. ರಸ್ಕಿನ್ಹಾ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.


ನಮ್ಮಕುಡ್ಲ ಟಿವಿ ಚಾನೆಲ್, ನಮ್ಮ ಕಂಬಳ ಟೀಮ್ ದುಬಾಯಿ ಮತ್ತು ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭವನ್ನು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಅಧ್ಯಕ್ಷತೆಯಲ್ಲಿ ಮೂಲ್ಕಿ ಸೀಮೆ ದುಗ್ಗಣ್ಣ ಸಾವಂತರಸರು ಮತ್ತು ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ರೆಕ್ಟರ್ ಫಾ. ಮೆಲ್ವಿನ್ ಜೋಸೆಫ್ ಪಿಂಟೋ ಅವರು ಉದ್ಘಾಟಿಸಿದರು. ನಮ್ಮಕುಡ್ಲ ಚಾನೆಲ್ ನ ಸಿಒಒ ಕದ್ರಿ ನವನೀತ ಶೆಟ್ಟಿ ಪ್ರಸ್ತಾವನೆಗೈದು ‘ನಮ್ಮಕಂಬಳ ಪ್ರಶಸ್ತಿ 2024’ ರ ಬಗ್ಗೆ ಮಾಹಿತಿ ನೀಡಿದರು.

‘ನಮ್ಮ ಕಂಬುಲ ನನ ದುಂಬುಲ’ ಕೈಪಿಡಿ ಬಿಡುಗಡೆ

ಕದ್ರಿ ನವನೀತ ಶೆಟ್ಟಿ ಮತ್ತು ಸನತ್ ಕುಮಾರ್ ಶೆಟ್ಟಿ ದುಬಾಯಿ ಸಂಪಾದಿತ ‘ನಮ್ಮ ಕಂಬುಲ ನನ ದುಂಬುಲ’ ಎಂಬ 2023/24 ನೇ ಸಾಲಿನ ಕಂಬಳದ ಮಾಹಿತಿ ಕೈಪಿಡಿಯನ್ನು ಮೂಲ್ಕಿ ಸೀಮೆ ದುಗ್ಗಣ್ಣ ಸಾವಂತರಸರು ಬಿಡುಗೆಡೆ ಮಾಡಿದರು. ರಿಯಲ್‌ಎಸ್ಟೇಟ್‌ಉದ್ಯಮಿ ಹಾಗೂ ಬಿಲ್ಡರ್ ಕ್ಷೇತ್ರದ ಹಿರಿಯ ಸಾಧಕ ರೋಹನ್ ಕಾರ್ಪೋರೇಷನಿನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಅವರಿಗೆ ಪೇಟ ಧರಿಸಿ, ಫಲಪುಷ್ಪ ಹಾಗೂ ಸ್ಮರಣಿಕೆ ನೀಡಿ ಗೌರವ ಸನ್ಮಾನ ನೀಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ಡಾ.ಮೋಹನ್ ಆಳ್ವ ಮಾತನಾಡಿ, ಕಾಲದೊಂದಿಗೆ ಬದಲಾದ ಕಂಬಳ ಇಂದು ಜಗತ್ತಿನ ಗಮನ ಸೆಳೆದೆದಿದೆ. ಹಂತ ಹಂತವಾಗಿ ಕಂಬಳ ಬದಲಾಗಿ ಇಂದು ಲಕ್ಷಾಂತರ ಜನರನ್ನು ತಲುಪಿದೆ. ಇಂತಹ ಬದಲಾವಣೆಗಳ ಜತೆಗೆ ಕಂಬಳದಲ್ಲಿ ಕೋಣಗಳನ್ನು ಬಿಡುವ ವಿಚಾರದಲ್ಲೂ ಬದಲಾವಣೆ ಆಗ ಬೇಕು ಎಂದರು.

ರೋಹನ್ ಮೊಂತೆರೊ ಅವರು ಮಾತನಾಡಿ, ಈ ಸನ್ಮಾನದಿಂದ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಬಾಲ್ಯದಲ್ಲಿ ತಾನು ಕೂಡಾ 2 ವರ್ಷ ಗದ್ದೆಯಲ್ಲಿ ಉಳುಮೆ ಮಾಡಿದ್ದೇನೆ. ಕೋಣಗಳನ್ನು ಸಾಕುವ ಕಷ್ಟ ನನಗೂ ಗೊತ್ತು ಎಂದು ಹೇಳಿ ನಮ್ಮಕುಡ್ಲ ಚಾನೆಲ್ ಮತ್ತು ಸಂಘಟಕರನ್ನು ಅಭಿನಂದಿಸಿದರು.

ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಪುತ್ತೂರು ಶಾಸಕ, ಬೆಂಗಳೂರು ಕಂಬಳದ ಸಾರಥಿ ಅಶೋಕ್‌ ಕುಮಾರ್ ರೈ, ಆಭರಣ ಟೈಮ್ ಲೆಸ್ ಜುವೆಲ್ಲರಿ ಬೆಂಗಳೂರು ಇದರ ಮಾಲಕ ಪ್ರತಾಪ್ ಮಧುಕರ ಕಾಮತ್, ಎಸ್.ಎಲ್. ಡೈಮಂಡ್ ಹೌಸ್ ನ ಮಾಲಕ ಪ್ರಶಾಂತ್ ಶೇಟ್, ಜನಪದ ವಿದ್ವಾoಸ ಹಾಗೂ ಕಂಬಳದ ಪ್ರಧಾನ ತೀರ್ಪುಗಾರ ಗುಣಪಾಲ ಕಡoಬ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಶಿಸ್ತು ಸಮಿತಿಯ ಅಧ್ಯಕ್ಷ ಭಾಸ್ಕರ ಕೋಟ್ಯಾನ್, ಸೈoಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ಡೀನ್ ಡಾ. ಆದರ್ಶ ಗೌಡ, ಅದಾನಿ ಸಂಸ್ಥೆಯ ಸಿಇಒ ಕಿಶೋರ್ ಆಳ್ವ, ಪಟ್ಲ ಫೌಂಡೇಶನಿನ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ನಮ್ಮ ಕುಡ್ಲ ಸಂಸ್ಥೆಯ ನಿರ್ದೇಶಕ ಲೀಲಾಕ್ಷ ಬಿ. ಕರ್ಕೇರ ಸ್ವಾಗತಿಸಿ, ವಂದಿಸಿದರು. ನಿರ್ದೇಶಕರಾದ ಹರೀಶ್ ಬಿ. ಕರ್ಕೇರ, ಸುರೇಶ್ ಬಿ. ಕರ್ಕೇರ, ಮೋಹನ್ ಬಿ. ಕರ್ಕೇರ, ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಸುದರ್ಶನ್, ಅಮಿತಾ, ಸುರೇಖಾ ಶೆಟ್ಟಿ ಮತ್ತಿತರರು ಇದ್ದರು. ನಿತಿನ್ ಸಾಲ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

120 ಪ್ರಶಸ್ತಿ ಪ್ರದಾನ :

ಕಂಬಳದ ಚಾಂಪಿಯನ್ ಕೋಣ ಹಾಗೂ ಕೋಣದ ಯಜಮಾನರಿಂದ ಹಿಡಿದು ತಂಡದ ಎಲ್ಲಾ ಸದಸ್ಯರನ್ನು ಗುರುತಿಸಿ ವಿವಿಧ ವಿಭಾಗಗಳಲ್ಲಿ ಒಟ್ಟು ಸುಮಾರು 120 ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಕನೆ ಹಲಗೆ ಮತ್ತು ಅಡ್ಡ ಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ, ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ ಭಟ್, ಹಗ್ಗ ಕಿರಿಯ ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ, ನೇಗಿಲು ಹಿರಿಯ ಬೋಳದ ಗುತ್ತು ಸತೀಶ್ ಶೆಟ್ಟಿ, ನೇಗಿಲು ಕಿರಿಯ ಮುನಿಯಾಲ್ ಉದಯಕುಮಾರ್ ಶೆಟ್ಟಿ ಸೇರಿದಂತೆ ಕೋಣಗಳ ಯಜಮಾನರಿಗೆ ಪ್ರಶಸ್ತಿ ನೀಡಲಾಯಿತು.

ಇದನ್ನೂ ಓದಿ : ಕೊನೆಗೂ ಮೌನ ಮುರಿದ ಎಚ್‌ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?

ಬೈಂದೂರು ಮಹೇಶ್ ಪೂಜಾರಿ, ಭಟ್ಕಳ ಹರೀಶ್, ಬಂಬ್ರಾಣ ಬೈಲ್ ವಂದಿತ್ ಶೆಟ್ಟಿ, ಭಟ್ಕಳ ಶಂಕರ ನಾಯ್ಕ್, ಕಕ್ಕೆ ಪದವು ಪೆರ್oಗಾಲ್ ಕೃತಿಕ್ ಗೌಡ ಮತ್ತು ಮಾಸ್ತಿಕಟ್ಟೆ ಸ್ವರೂಪ್ ಸಹಿತ 6 ವಿಭಾಗಗಳಲ್ಲಿ ಕೋಣ ಓಡಿಸುವವರನ್ನು ನಮ್ಮ ಕಂಬಳ ಪ್ರಶಸ್ತಿ ನೀಡಿ ಗೌರವಿಸಲಾಯಿತು. 6 ವಿಭಾಗಗಳ ಕೋಣಗಳಿಗೆ ಚಾoಪಿಯನ್ ಅವಾರ್ಡ್ ಪ್ರದಾನ ಮಾಡಲಾಯಿತು. ಕಂಬಳ ಸಂಯೋಜಕರು ಮತ್ತು ತೀರ್ಪುಗಾರರನ್ನು ಶಾಲು ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.

Continue Reading

DAKSHINA KANNADA

ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Published

on

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.


ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.

ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Continue Reading

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

LATEST NEWS

Trending