Thursday, December 2, 2021

ಪ್ರಯಾಣಿಕರಲ್ಲಿ ಗೊಂದಲ ಸೃಷ್ಟಿಸಿದ ಮಂಗಳೂರು-ಕುವೈಟ್‌ ವಿಮಾನಯಾನ ವೇಳಾಪಟ್ಟಿ

ಮಂಗಳೂರು: ಮಂಗಳೂರಿನಿಂದ ಕುವೈಟ್‌ಗೆ ತೆರಳುವ ಏರ್‌ ಇಂಡಿಯಾ ವಿಮಾನಗಳ ವೇಳಾಪಟ್ಟಿಯನ್ನು ನವೆಂಬರ್‌ನಿಂದ ಪರಿಷ್ಕರಿಸಲಾಗಿದ್ದು, ಈ ವೇಳಾಪಟ್ಟಿಯಿಂದ ಅನಿವಾಸಿ ಭಾರತೀಯರಿಗೆ ಅನಾನುಕೂಲವಾಗಿದೆ ಎಂಬ ಆರೋಪ ಕೇಳಿಬಂದಿದೆ.


ಕೋವಿಡ್‌ ಮುಂಚೆ ಸಮರ್ಪಕವಾಗಿದ್ದ ಮಂಗಳೂರು-ಕುವೈತ್‌ ವಿಮಾನದ ವೇಳಾಪಟ್ಟಿ, ಇದೀಗ ದಿಢೀರನೆ ಬದಲಾಗಿದೆ. ಗುರುವಾರ ಕುವೈತ್‌ನಿಂದ ಹೊರಟು ಮಂಗಳೂರಿಗೆ ಬರುವವರಿಗೆ ಮೊದಲಿನ ವೇಳಾಪಟ್ಟಿ ಅನುಕೂಲವಾಗಿತ್ತು.

ಕುವೈತ್‌ ನಲ್ಲಿ ಶುಕ್ರವಾರ ಮತ್ತು ಶನಿವಾರ ವಾರಾಂತ್ಯ ರಜೆ ಇರುವುದರಿಂದ, ಕರಾವಳಿ ಜನರು ಊರಿಗೆ ಬಂದು ಹೋಗಲು ಪ್ರಯೋಜನವಾಗುತ್ತಿತ್ತು. ರಜೆ ಇಲ್ಲದೆ ಭಾನುವಾರ ಮತ್ತೆ ಕೆಲಸಕ್ಕೆ ಹಾಜರಾಗಲು ಅವಕಾಶ ಸಿಗುತ್ತಿತ್ತು.
ನಂತರ ಈ ವೇಳಾಪಟ್ಟಿಯನ್ನು ಹಠಾತ್ತಾಗಿ ಬದಲಾಯಿಸಲಾಗಿದ್ದು, ವಿಮಾನ ಸಂಚಾರವನ್ನು ರಾತ್ರಿಯ ಬದಲು ಹಗಲಿಗೆ ನಿಗದಿಪಡಿಸಲಾಗಿತ್ತು. ಇದರಿಂದಾಗಿ ಕುವೈತ್‌ನಿಂದ ಮಂಗಳೂರಿಗೆ ಬರುವ ಜನರು ವಾರದ ಕರ್ತವ್ಯದ ಅವಧಿಯಲ್ಲಿ ರಜೆ ಹಾಕಿ ಬರಬೇಕಾಗುತ್ತಿತ್ತು.

ಈ ಸಮಯವನ್ನು ಹಿಂದಿನಂತೆ ಮರು ನಿಗದಿಪಡಿಸುವಂತೆ ಕುವೈತ್‌ನ ಕರಾವಳಿಗರ ಸಂಘಟನೆಗಳು ಸಂಸದರಿಗೆ ಮನವಿ ಸಲ್ಲಿಸಿದ್ದವು.
ವಾರದ ಮಧ್ಯೆ ವಿಮಾನ: ಹೊಸ ವೇಳಾಪಟ್ಟಿ ಪ್ರಕಾರ ಮಂಗಳೂರಿನಿಂದ ಪ್ರತಿ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಕುವೈತ್‌ಗೆ ವಿಮಾನ ಹೊರಡಲಿದೆ. ಪ್ರತಿ ಬುಧವಾರ ಬೆಳಿಗ್ಗೆ 8.45ಕ್ಕೆ ಕುವೈತ್‌ನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಲಿದೆ.

ಇದು ಕುವೈತ್‌ನಲ್ಲಿರುವ ಕರಾವಳಿ ಉದ್ಯೋಗಿಗಳಿಗೆ ಅನುಕೂಲ ಆಗುವುದಿಲ್ಲ. ವಾರದ ಮಧ್ಯೆ ವಿಮಾನ ಸಂಚಾರ ನಿಗದಿ ಆಗಿದ್ದರಿಂದ ಊರಿಗೆ ಬಂದು ಹೋಗಬೇಕಾದರೆ ರಜೆ ಹಾಕಬೇಕಾಗುತ್ತದೆ. ಹಾಗಾಗಿ ಈ ವೇಳಾಪಟ್ಟಿಯನ್ನು ಹಿಂದಿನಂತೆ ರಾತ್ರಿಗೆ ಬದಲಾಯಿಸುವುದೇ ಸೂಕ್ತ ಎಂದು ಒತ್ತಾಯಿಸಿದ್ದಾರೆ.

‘ನ.30ರ ವರೆಗೆ ವಂದೇ ಭಾರತ್‌ ಮಿಷನ್‌ನಡಿ ಈ ರೀತಿ ವಿಮಾನ ಸಂಚರಿಸುತ್ತದೆ. ಕೋವಿಡ್‌–19 ವೇಳೆಯ ಸಂಚಾರ ಇದಾಗಿದ್ದು, ಇದು ತಾತ್ಕಾಲಿಕ ವೇಳಾಪಟ್ಟಿ. ಹಾಗಾಗಿ ಮತ್ತೆ ವೇಳಾಪಟ್ಟಿ ಪರಿಷ್ಕರಣೆಯಾಗುವ ಸಂಭವ ಇದೆ’ ಎಂದು ಏರ್‌ ಇಂಡಿಯಾ ಮಂಗಳೂರಿನ ಅಧಿಕಾರಿಗಳು ಹೇಳುತ್ತಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...