Connect with us

    BELTHANGADY

    ಮಂಗಳೂರು: ಬಸ್ಸುಗಳ ಅತೀ ವೇಗಕ್ಕೆ ಕಡಿವಾಣ ಹಾಕಿಸಿ – ಶಾಸಕ ಭರತ್ ಶೆಟ್ಟಿಗೆ ಸ್ಥಳೀಯರ ಮನವಿ

    Published

    on

    ಮಂಗಳೂರು – ಮೂಡುಬಿದಿರೆಯ ರಾಷ್ಟ್ರೀಯ ಹೆದ್ದಾರಿ 169 ಮರಣದ ರಸ್ತೆಯಾಗಿ ಮಾರ್ಪಟ್ಟಿದೆ. ಇಲ್ಲಿನ ಹೆದ್ದಾರಿ ಕಾಮಗಾರಿ ಆರಂಭಗೊಂಡಿದ್ದು, ಟಿಪ್ಪರ್ ಹಾಗೂ ಬಸ್ಸು ಚಾಲಕರು ಧಾವಂತದಿಂದ ವಾಹನಗಳನ್ನು ಓಡಿಸುವುದರಿಂದ ರಸ್ತೆ ದುರಂತಗಳು ಹೆಚ್ಚಾಗಿದೆ.

    ಮಂಗಳೂರು: ಮಂಗಳೂರು – ಮೂಡುಬಿದಿರೆಯ ರಾಷ್ಟ್ರೀಯ ಹೆದ್ದಾರಿ 169 ಮರಣದ ರಸ್ತೆಯಾಗಿ ಮಾರ್ಪಟ್ಟಿದೆ. ಇಲ್ಲಿನ ಹೆದ್ದಾರಿ ಕಾಮಗಾರಿ ಆರಂಭಗೊಂಡಿದ್ದು, ಟಿಪ್ಪರ್ ಹಾಗೂ ಬಸ್ಸು ಚಾಲಕರು ಧಾವಂತದಿಂದ ವಾಹನಗಳನ್ನು ಓಡಿಸುವುದರಿಂದ ರಸ್ತೆ ದುರಂತಗಳು ಹೆಚ್ಚಾಗಿದೆ.

    ಜೂನ್‌ 5ರಂದು ಎಡಪದವಿನಲ್ಲಿ ಬೈಕ್‌ ಸವಾರನೊಬ್ಬ ಬಸ್ಸು ಚಾಲಕನ ಧಾವಂತಕ್ಕೆ ಬಲಿಯಾಗಿದ್ದರೆ, ಕೆಲವು ದಿನಗಳ ಹಿಂದೆ ಕೂಡಾ ರಸ್ತೆ ಅಪಘಾತ ನಡೆದು ವ್ಯಕ್ತಿಯೊಬ್ಬರು ಬಲಿಯಾಗಿದ್ದರು.

    ಇದಕ್ಕೆ ಬಸ್ಸು ಚಾಲಕರ ಅತಿವೇಗ, ನಿರ್ಲಕ್ಷ್ಯತನದ ಚಾಲನೆಯೇ ಇದಕ್ಕೆ ಕಾರಣವಾಗಿದ್ದು, ಕೂಡಲೇ ಪೊಲೀಸರು ಇಂತಹ ನಿಯಮಗಳನ್ನು ಉಲ್ಲಂಘಿಸುವ ಬಸ್ಸು ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಡಪದವಿನಲ್ಲಿ ಸ್ಥಳೀಯರ ನಾಗರಿಕರು ಪ್ರತಿಭಟನೆ ನಡೆಸಿದರು.

    ಈ ಸಂದರ್ಭ ಮೂಡುಬಿದಿರೆ ಪೊಲೀಸ್‌ ಠಾಣಾಧಿಕಾರಿಗಳಿಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

    ಬೆಳಿಗ್ಗೆ ಎಡಪದವಿನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಸ್ಥಳೀಯರು ಜಮಾಯಿಸಿ ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದರು.

    ಬಸ್ಸು ಮಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

    ಬಳಿಕ ಘಟನಾ ಸ್ಥಳಕ್ಕೆ ಬಂದ ಠಾಣಾಧಿಕಾರಿ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಇದೇ ವೇಳೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಶಾಸಕ ಭರತ್‌ ಶೆಟ್ಟಿ ಅವರು ಪ್ರತಿಭಟನಾನಿರತರಲ್ಲಿಗೆ ಆಗಮಿಸಿ ಅಹವಾಲು ಸಲ್ಲಿಕೆ ಮಾಡಿದರು.

    ಅವರಿಗೂ ಸ್ಥಳೀಯರು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಭರತ್‌ ಶೆಟ್ಟಿ, ಇಲ್ಲಿ ಯಾವುದೇ ಅನಾಹುತ ನಡೆಯದಂತೆ ಸೂಕ್ತ ವ್ಯವಸ್ಥೆ ಮಾಡಬೇಕಾಗಿದೆ.

    ಇದಕ್ಕೆ ಸರಿಯಾದ ಉತ್ತರವನ್ನು ಜಿಲ್ಲಾಡಳಿತ ಹಾಗೂ ಆರ್‌ಟಿಒ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ. ಇದಕ್ಕೆ ಒತ್ತಡ ಹಾಕಲಾಗುವುದು ಎಂದರು.

    BELTHANGADY

    ಎರಡು ತಿಂಗಳಿನಿಂದ ಆತಂಕ ಸೃಷ್ಟಿ ಮಾಡಿದ್ದ ಚಿರತೆ ಸೆರೆ

    Published

    on

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ಸ್ಥಳೀಯರಿಗೆ ಆತಂಕ ಸೃಷ್ಟಿ ಮಾಡಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ. ಎರಡು ತಿಂಗಳ ಹಿಂದೆ ಚಿರತೆ ಸ್ಥಳೀಯರಿಗೆ ಕಾಣಿಸಿಕೊಂಡಿದ್ದು ಭಯವನ್ನು ಸೃಷ್ಟಿಮಾಡಿತ್ತು. ಇದೀಗ ಈ ಚಿರತೆ ಬೋನಿಗೆ ಬಿದ್ದಿದ್ದು ಜನರ ಆತಂಕ ದೂರವಾಗಿದೆ.

    ಊರಿನಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು ಈ ಕುರಿತು ಇಲಾಖಾ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದ್ದಾರೆ. ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು.

    ಕುಡ್ಲ ತುಳುಕೂಟದ ಅಧ್ಯಕ್ಷ ದಾಮೋದರ ನಿಸರ್ಗ ವಿಧಿವಶ

    ಕಳೆದ ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ನುಗ್ಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.  ಚಿರತೆ ಸೆರೆಯಾಗಿದ್ದು ಸ್ಥಳೀಯ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.

    Continue Reading

    BELTHANGADY

    ಅಳದಂಗಡಿ ಗ್ರಾ.ಪಂ. ಮಾಜಿ ಸದಸ್ಯೆ ಕಮಲಮ್ಮ ನಿಧನ

    Published

    on

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಕೃಷಿ ತಜ್ಞರೂ ಆಗಿದ್ದ ಅಳದಂಗಡಿ ನಿವಾಸಿ ಕಮಲಮ್ಮ ಅವರು ಆಗಸ್ಟ್‌  30ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 80 ವರ್ಷವಾಗಿತ್ತು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

    ಮಾವು ಮತ್ತು ಗುಲಾಬಿ ಕಸಿ ಕಟ್ಟುವಿಕೆಗೆ ಹೆಸರಾಗಿದ್ದ ಅವರು, ಮಾವಿನ ತೋಟ ಅಭಿವೃದ್ಧಿ ಪಡಿಸಿದ್ದರು. ವೈವಿಧ್ಯಮಯ ಕೃಷಿ ಸಾಧನೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. ಹಲವು ವರ್ಷ ಅಂಗನವಾಡಿ ಸಹಾಯಕಿಯಾಗಿ ಕೂಡಾ ಕೆಲಸ ಮಾಡಿದ್ದರು. ಅವರು ಉದಯವಾಣಿ ಮಣಿಪಾಲ ಆವೃತ್ತಿಯ ಸ್ಥಾನೀಯ ಸಂಪಾದಕ ಕೃಷ್ಣ ಭಟ್‌ ಅವರ ತಾಯಿ ಆಗಿದ್ದರು.

    Continue Reading

    BANTWAL

    ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

    Published

    on

    ಮಂಗಳೂರು : ರಾಜ್ಯದ ಹಲವು ಭಾಗಗಳು ಭಾರಿ ಮಳೆಯಿಂದ ಹೈರಾಣಾಗಿದ್ದವು. ಆ ಬಳಿಕ ಕೊಂಚ ವಿರಾಮ ಪಡೆದಿದ್ದ ಮಳೆ ಮತ್ತೆ ಆರ್ಭಟಿಸುವ ಲಕ್ಷಣ ಕಾಣುತ್ತಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
    ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಎಲ್ಲೆಲ್ಲಿ ಮಳೆ ?

    ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.

    ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ರಭಸವಾಗಿ ಗಾಳಿ ಬೀಸಲಿದೆ. ಜೊತೆಗೆ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

    ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಿದೆ.

    Continue Reading

    LATEST NEWS

    Trending