Connect with us

    LATEST NEWS

    Mangaluru: ಲಾರಿ, ಸ್ಕೂಟರ್ ಢಿಕ್ಕಿ – ವಿದ್ಯಾರ್ಥಿ ಸಾವು..!

    Published

    on

    ಟಿಪ್ಪರ್- ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಆ.26ರಂದು ಮಂಗಳೂರು ನಗರದ ಹೊರವಲಯದ ಅಡ್ಯಾರ್ ನಲ್ಲಿ  ನಡೆದಿದೆ.

    ಮಂಗಳೂರು: ಟಿಪ್ಪರ್- ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಆ.26ರಂದು ಮಂಗಳೂರು ನಗರದ ಹೊರವಲಯದ ಅಡ್ಯಾರ್ ನಲ್ಲಿ  ನಡೆದಿದೆ.

    ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ  ಶರಫುದ್ದೀನ್  (16)ಎಂದು ಗುರುತಿಸಲಾಗಿದೆ.

    ಈತ ನಗರದ ಮಿಲಾಗ್ರಿಸ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

    ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರ ರಕ್ತಸ್ರಾವವುಂಟಾಗಿತ್ತು ಎನ್ನಲಾಗಿದೆ.

    ಕೂಡಲೇ ಸ್ಥಳೀಯರು ಶರಫುದ್ದೀನ್ ನನ್ನು ಸಮೀಪದ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

    ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

     

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮೇ 31ರಂದು ಮಸ್ಕತ್ ನಲ್ಲಿ “ಶ್ರೀ ದೇವೀ ಮಹಾತ್ಮೆ” ಚಾರಿತ್ರಿಕ ಯಕ್ಷಗಾನ

    Published

    on

    ಮಂಗಳೂರು: ಬಿರುವ ಜವನೆರ್ ಮಸ್ಕತ್ ಮತ್ತು ಇನ್ಸ್ಟಿರೇಷನ್ ಡಿಪೈನ್ ಇವರ ಸಹ ಪ್ರಯೋಜಕತ್ವದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಕಲಾ ಮಂಡಳಿಯ ಆರು ಮೇಳಗಳ ಆಯ್ದ 33 ಕಲಾವಿದರು ಮೇ 31 ರಂದು ಮಸ್ಕತ್ ನಲ್ಲಿ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಬಿರುವ ಜವನೆರ್ ಸಂಘಟನೆಯ ಗುರುಪ್ರಸಾದ್ ರಾಮ ಅಮೀನ್ ನಾನಿಲ್ ಅವರು ತಿಳಿಸಿದರು.

     

    ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಒಮಾನ್ ದೇಶದ ಮನ್ಮತ್ ನ ರುವಿ ಯಲ್ಲಿರುವ ಅಫಾಲಾಜ್ ಹೋಟೆಲ್ ನಲ್ಲಿ ಮಧ್ಯಾಹ್ನ 12 ರಿಂದ ರಾತ್ರಿ 9ರ ತನಕ ಪುಷ್ಪಾಲಂಕಾರದಿಂದ ಶೋಭಿಸುವ ಸಂಪ್ರದಾಯಕ ರಂಗಸ್ಥಳದಲ್ಲಿ ವಿಜೃಂಭಣೆಯ ಬಯಲಾಟ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

     

    ಭಾಗವಹಿಸುವ ಕಲಾವಿದರು:

    ಬಲಿಪ ಶಿವಶಂಕರ್ ಭಟ್, ದೇವಿಪ್ರಸಾದ್ ಆಳ್ವ ಅವರು ಭಾಗವತರಾಗಿ, ದಯಾನಂದ ಶೆಟ್ಟಿಗಾರ, ಭಾಸ್ಕರ್ ಭಟ್ ಕಟೀಲು, ರಾಮಪ್ರಕಾಶ ಕಲ್ಲೂರಾಯ ಚೆಂಡೆ ಮದ್ದಳೆ ವಾದಕರಾಗಿ ಮತ್ತು ಮುಮ್ಮೇಳದಲ್ಲಿ ವೇಷಧಾರಿಗಳಾಗಿ ಸುಣ್ಣಂಬಳ ವಿಶ್ವೇಶ್ವರ ಭಟ್, ವಿಷ್ಣು ಶರ್ಮ ವಾಟೆ ಪಡ್ಪು, ಡಾ। ವಾದಿರಾಜ್ ಕಲ್ಲೂರಾಯ, ಪ್ರಶಾಂತ್ ಶೆಟ್ಟಿ ನೆಲ್ಯಾಡಿ, ಡಾ। ಮಹೇಶ್ ಕುಮಾರ್, ಬಾಲಕೃಷ್ಣ ಗೌಡ ಮಿಜಾರು, ಮೋಹನ್ ಕುಮಾರ್ ಅಮ್ಮುಂಜೆ, ಅರುಣ್ ಕೋಟ್ಯಾನ್, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಗಣೇಶ್ ಚಂದ್ರಮಂಡಲ, ರವಿರಾಜ ಪೆಣೆಯಾಲೆ, ಹರಿನಾರಾಯಣ ಭಟ್, ಕೃಷ್ಣ ಪ್ರಸಾದ್, ಅರಳ ಗಣೇಶ, ಡಾ। ಶ್ರುತಕೀರ್ತಿರಾಜ, ಸಂಜೀವ ಶೇರಂಕಲ್ಲು, ಮೋನಪ್ಪ ದೇವಾಡಿಗ, ಉಮೇಶ ಕುಪ್ಪೆಪದವು, ರವಿ ಪೂಜಾರಿ, ಪ್ರೇಮರಾಜ್ ಕೊಯಿಲ, ರಾಜೇಶ್ ಆಚಾರ್ಯ, ಅಕ್ಷಯ್ ಭಟ್, ರಕ್ಷಿತ್ ಪೂಜಾರಿ, ನಿಖಿಲ್ ಶೆಟ್ಟಿ ಹಾಗೂ ಮಸ್ಕತ್ ನಲ್ಲಿರುವ ಹವ್ಯಾಸಿ ಕಲಾವಿದೆ ವಿದೂಷಿ ಶ್ರೀಮತಿ ತೀರ್ಥ ಕಟೀಲ್ ಭಾಗವಹಿಸಲಿದ್ದಾರೆ. ರಮೇಶ್ ಕುಲಶೇಖರ ವೇಷ ಭೂಷಣದ ವ್ಯವಸ್ಥೆ ಮಾಡಲಿದ್ದಾರೆ.

    ಬಿರುದು ಗೌರವ:

    ಹಿರಿಯ ಅರ್ಥಧಾರಿ, ವೇಷ ಧಾರಿ, ಪ್ರಭಂದಕ ಶ್ರೀ ಸುಣ್ಣಂಬಳ ವಿಶ್ವೇಶ್ವರ ಭಟ್ ಅವರಿಗೆ “ಯಕ್ಷ ಸಿರಿ” ಹಾಗೂ ವೇಷಧಾರಿ, ಅರ್ಥಧಾರಿ, ಉಪನ್ಯಾಸಕ, ನಿರೂಪಕ ಡಾ. ವಾದಿರಾಜ ಕಲ್ಲೂರಾಯರಿಗೆ “ಯುವ ಸಿರಿ” ಬಿರುದು ನೀಡಿ ಗೌರವಿಸಲಾಗುವುದು.

    ವಿಶೇಷ ಅತಿಥಿಗಳು:

    ಈ ಕಾರ್ಯಕ್ರಮದಲ್ಲಿ ಕರಾವಳಿಯ ಶಾಂತಾ ರಾಮ ಅಮೀನ್ ನಾನಿಲ್ ಹಳೆಯಂಗಡಿ, ನಮ್ಮ ಕುಡ್ಲ ವಾಹಿನಿಯ ನಿರ್ದೇಶಕ ಲೀಲಾಕ್ಷ ಕರ್ಕೇರ, ಸುಚೇತನಾ ಕೆ ಅಂಚನ್, ಸೂರ್ಯ ಕಾಂತ್ ಜಯ ಸುವರ್ಣ, ಮಿತ್ರ ಹೆರಾಜೆ, ಮೋಹನ್ ದಾಸ್ ಸಾಲಿಯಾನ್ ಪಚ್ಚನಾಡಿ, ಆನಂದ ಸನಿಲ್, ಗಂಗಾಧರ್ ಪೂಜಾರಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

    ಸಾಮಾಜಿಕ ಸೇವಾ ಚಟುವಟಿಕೆಗಳೊಂದಿಗೆ ಸಾಂಸ್ಕೃತಿಕ ಕಲಾ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುವ ಬಿರುವ ಜವನೆರ್ ಸಂಘಟನೆ ಈ ಪೂರ್ವದಲ್ಲಿ ಎರಡು ಬಾರಿ ಶ್ರೀ ಶನೀಶ್ವರ ಮಹಾತ್ಮೆ ಹಾಗೂ ಒಂದು ಬಾರಿ ಶ್ರೀ ಸತ್ಯ ನಾರಾಯಣ ವೃತ ಮಹಾತ್ಮೆ ಪೂಜಾ ಸಹಿತ ಯಕ್ಷಗಾನ ತಾಳಮದ್ದಳೆಯನ್ನು ಶ್ರೀ ಶನೀಶ್ವರ ಭಕ್ತ ವೃಂದ ಪಕ್ಷಿಕೆರೆ, ಮಂಗಳೂರು ತಂಡದ ಮೂಲಕ ನಡೆಸಿದೆ. ಕಳೆದ ವರ್ಷ ನಡೆದ ಸ್ವಾಮಿ ಕೊರಗಜ್ಜ ತಾಳಮದ್ದಳೆಯೂ ಜನ ಮೆಚ್ಚುಗೆ ಪಡೆದಿತ್ತು. ಕಲ್ಲಡ್ಕ ವಿಠಲ್ ನಾಯ್ಕ ಅವರ ಗೀತಾ ಸಾಹಿತ್ಯ ಸಂಭ್ರಮವನ್ನೂ ಮಸ್ಕತ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಆಯೋಜಿಸಿ ಕರಾವಳಿಯ ಕಲಾವಿದರಿಗೆ ಪ್ರೋತ್ಸಾಹ ನೀಡಿದೆ.

    ದೇವೀ ಮಹಾತ್ಮೆ ಯಕ್ಷಗಾನ ಪ್ರದರ್ಶನಕ್ಕೆ ಉಚಿತ ಪ್ರವೇಶ ಇದ್ದು ಬೆಳಿಗ್ಗೆ 11 ರಿಂದ ಪ್ರಸಾದ ಭೋಜನ ಇದೆ ಸಂಜೆ ಉಪಹಾರ ಹಾಗೂ ರಾತ್ರಿ ಭೋಜನ ಪೊಟ್ಟಣ ವ್ಯವಸ್ಥೆಯನ್ನೂ ಮಾಡಲಾಗಿದೆ.

    ಪತ್ರಿಕಾಗೋಷ್ಠಿಯಲ್ಲಿ , ಡಾ. ವಾದಿರಾಜ ಕಲ್ಲೂರಾಯ, ಸುಹಾನ್ ಹೇಮಚಂದ್ರ, ಗಂಗಾಧರ್ ಪೂಜಾರಿ, ಕದ್ರಿ ನವನೀತ ಶೆಟ್ಟಿ, ಮೋಹನ್ ದಾಸ್ ಉಪಸ್ಥಿತರಿದ್ದರು.

    Continue Reading

    LATEST NEWS

    ಮಾಜಿ ಪ್ರಿಯತಮೆ ಮದುವೆಗೆ ವಿಶ್ ಮಾಡಲು ಹೋದ ಯುವಕ..! ವರನಿಗೆ ಹಿಗ್ಗಾಮುಗ್ಗ ಥಳಿಸಿ ಹಲ್ಲೆ..!!

    Published

    on

    ರಾಜಸ್ಥಾನ/ಮಂಗಳೂರು: ಸಾಮಾನ್ಯವಾಗಿ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಮದುವೆ ಮನೆಗೆ ನುಗ್ಗಿ ದಾಂಧಲೆ ಮಾಡೋದನ್ನು ನೋಡಿದ್ದೇವೆ.  ಪ್ರೀತಿಸಿದ ಹುಡುಗಿ ಸಿಗದೇ ಇದ್ದಾಗ ಮಾಜಿ ಪ್ರಿಯಕರ ಮದುವೆ ಮನೆಗೆ ಪ್ರವೇಶ ಮಾಡಿ ವರನ ಮೇಲೆ ಹಲ್ಲೆ ಮಾಡುವುದನ್ನು ಸಿನೆಮಾಗಳಲ್ಲಿ ನೋಡಿದ್ದೇವೆ. ಆದ್ರೆ ಇಂತಹದ್ದೇ ಒಂದು ನೈಜ ಘಟನೆ ಇದೀಗ ರಾಜಸ್ಥಾನದಲ್ಲಿ ನಡೆದಿದೆ.

    wedding galate

    Read More..; ಖತರ್ನಾಕ್‌ ಕಿಲಾಡಿ ದಂಪತಿ ಸೆರೆ.. ನಿಟ್ಟುಸಿರು ಬಿಟ್ಟ ಪೊಲೀಸರು..! ಅಷ್ಟಕ್ಕೂ ದಂಪತಿ ಮಾಡಿದ್ದಾದರೂ ಏನು?

    ಮಾಜಿ ಗೆಳತಿಯ ಮದುವೆ ಆರತಕ್ಷತೆಗೆ ಬಂದ ಯುವಕ ಮದುವೆ ಮಂಟಪದಲ್ಲಿಯೇ ವರನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಇದೀಗ ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

    ಮದುವೆ ಮಂಟಪದಲ್ಲಿ ವಧು ರಂಪರಾಮಾಯಣ ಮಾಡುವ ವೀಡಿಯೋ, ವರನಿಗೆ ಸ್ನೇಹತರಿಂದ ಕೀಟಲೆ ಇತ್ಯಾದಿ ವೀಡಿಯೋ ಗಳು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದ್ರೆ ಇಲ್ಲೊಬ್ಬ ತಾನು ಪ್ರೀತಿಸಿದ್ದ ಯುವತಿಯ ಮದುವೆಗೆ ಪ್ರವೇಶಿಸಿ ವರನ ಮೇಲೆ ಹಲ್ಲೆ ನಡೆಸಿದ್ದಾನೆ. ತನ್ನ ಮಾಜಿ ಪ್ರೇಯಸಿ ಇನ್ನೊಬ್ಬನ ಜೊತೆ ವಿವಾಹವಾಗಲು ಹೊರಟಿದ್ದಳು. ಇದರಿಂದ ಕೋಪಗೊಂಡ ಮಾಜಿ ಪ್ರಿಯಕರ, ಮದುವೆ ಮನೆಗೆ ವಿಶ್ ಮಾಡಲು ಹೋಗಿ ಬಳಿಕ ವರನಿಗೆ ಹಿಗ್ಗಾಮುಗ್ಗ ಥಳಿಸಿದ್ದಾನೆ. ಅಲ್ಲದೇ ಚಾಕುವಿನಿಂದಲೂ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.

    ಈ ಘಟನೆ ರಾಜಸ್ಥಾನ್‌ ಚಿತ್ತೋರ್‌ಗಢ ಜಿಲ್ಲೆಯ ಭಿಲ್ವಾರದಲ್ಲಿ ನಡೆದಿದ್ದು, ವಧು ವರರಿಗೆ ವಿಶ್‌ ಮಾಡುವ ನೆಪದಲ್ಲಿ ಸ್ಟೇಜ್‌ ಹತ್ತಿದ ವಧುನಿನ ಮಾಜಿ ಪ್ರಿಯಕರ ವರನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಅದೃಷ್ಟವಶಾತ್‌ ವರನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಹಲ್ಲೆ ನಡೆಸಿರುವ ಆರೋಪಿ ಶಂಕರ್‌ ಲಾಲ್‌ ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

    ಘಟನೆಗೆ ಕಾರಣವೇನು?

    ವಧು ಹಾಗೂ ಹಲ್ಲೆ ನಡೆಸಿದ್ದ ಶಂಕರ್‌ಲಾಲ್ ಇಬ್ಬರೂ ಎರಡು ವರ್ಷಗಳ ಹಿಂದೆ ಒಂದೇ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಈ ನಡುವೆ ಇಬ್ಬರ ನಡುವೆ ಸ್ನೇಹ ಮೂಡಿದೆ. ಸ್ನೇಹ ಪ್ರೀತಿಗೆ ತಿರುಗಿದೆ. ಆದರೆ ಇಬ್ಬರ ನಡುವೆಯೂ ಬ್ರೇಕಪ್‌ ಆಗಿದೆ. ಇದೇ ಸೇಡಿನಿಂದ ಶಂಕರ್ ಲಾಲ್‌ ಮಾಜಿ ಗೆಳತಿಯ ಮದುವೆಗೆ ಹೋಗಿ ಏನು ವಿಷಯ ತಿಳಿಯದ ವರನ ಮೇಲೆ ಹಲ್ಲೆ ನಡೆಸಿದ್ದಾನೆ.

    Read More..; ಗುಜರಾತ್‌ ಎಟಿಎಸ್‌ನಿಂದ ನಾಲ್ವರು ಐಸಿಸ್ ಉಗ್ರರ ಸೆರೆ..!

    ಇನ್ನೂ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವೀಡಯೋ ಸುಮಾರು 1.7ಮಿಲಿಯನ್‌ ವೀಕ್ಷಣೆ ಪಡೆದಿದ್ದು, ನೆಟ್ಟಿಗರು ಯುವಕನ ವಿರುದ್ಧ ಕಿಡಿಕಾರಿದ್ದಾರೆ.

    Continue Reading

    DAKSHINA KANNADA

    ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024”

    Published

    on

    ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಮೆರುಗು, ಕಲಾವಿದರಿಗೆ ವಿವಿಧ ಯೋಜನೆ

    ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಮೇ 26 ರಂದು ಭಾನುವಾರ ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024” ಕಾರ್ಯಕ್ರಮ ನಡೆಯಲಿದೆ. ವಿಶೇಷ ಅತಿಥಿಯಾಗಿ ಚಲನಚಿತ್ರ ನಟ ಕಿಚ್ಚ ಸುದೀಪ್ ಭಾಗವಹಿಸಲಿದ್ದಾರೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

     

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಸಮಾರಂಭವು ಬೆಳಿಗ್ಗೆ 7.45 ಕ್ಕೆ ಚೌಕಿಪೂಜೆ ನಡೆದು ಬಳಿಕ ಅಬ್ಬರತಾಳ, ಮಹಿಳಾ ಯಕ್ಷಗಾನ ನಡೆಯಲಿದೆ. 9 ಗಂಟೆಗೆ ಕಾರ್ಯಕ್ರಮವನ್ನು ಮುಂಬೈ ಹೇರಂಭ ಕೆಮಿಕಲ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಸಿಎಂಡಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟಿಸಲಿದ್ದಾರೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯನ್ನು ಪಡೆಯಲಿದ್ದಾರೆ. ಶ್ರೀ ಕ್ಷೇತ್ರ ಕಟೀಲಿನ ವೆಂಕಟ್ರಮಣ ಆಸ್ರಣ್ಣ, ಆರ್ಶೀರ್ವಚನ ಮಾಡಲಿದ್ದಾರೆ ಎಂದರು.

    ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ. ಪಾವಂಜೆ ಕ್ಷೇತ್ರದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್ ಶುಭಶಂಸನೆಗೈಯಲಿದ್ದಾರೆ.

    ಆರೋಗ್ಯ ಶಿಬಿರದ ಉದ್ಘಾಟನೆಯನ್ನು ಡಾ ರವೀಶ್ ತುಂಗಾ ನೆರವೇರಿಸಲಿದ್ದಾರೆ. ರಕ್ತದಾನ ಶಿಬಿರವನ್ನು ಡಾ ಶ್ರೀಧರ್ ಉದ್ಘಾಟಿಸಲಿದ್ದಾರೆ. ಉಚಿತ ಕಣ್ಣು ಪರೀಕ್ಷೆ, ಕನ್ನಡ ವಿತರಣೆಯೂ ಇದೆ.
    ಬೆಳಿಗ್ಗೆ 11 ಗಂಟೆಗೆ ಯುವ ಭಾಗವತರಿಂದ “ಗಾನ ವೈಭವ” ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭಾಗವಹಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಶಶಿ ಕ್ಯಾಟರರ್ಸ್ ಸಂಸ್ಥೆ, ಉಜಿರೆ ಕಾಶಿ ವ್ಯಾಲೇಸ್ ಸಂಸ್ಥೆಯ ಮಾಲಕ ಶಶಿಧರ್ ಬಿ ಶೆಟ್ಟಿ ಬರೋಡಾ ವಹಿಸಲಿದ್ದಾರೆ. ಅತಿಥಿಗಳಾಗಿ ಜಮ್ಮು ಕಾಶ್ಮೀರ ಸರಕಾರದ ಪ್ರಿನ್ಸಿಪಾಲ್ ಸೆಕ್ರೆಟರಿ ಐಎಎಸ್ ಅಧಿಕಾರಿ ರಾಜೇಶ್ ಪ್ರಸಾದ್, ಮುಂಬಯಿ ಭವಾನಿ ಶಿಪ್ಪಿಂಗ್ ಮಾಲಕ ಕೆ.ಡಿ ಶೆಟ್ಟಿ ಮುಂಬಯಿ ಮಕಯ್ ಸಂಸ್ಥೆಯ ಅಧ್ಯಕ್ಷ ಕೆ ಎಂ ಶೆಟ್ಟಿ ಮಧ್ಯಗುತ್ತು ಮೊದಲಾದವರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಯಕ್ಷಧ್ರುವ ಯಕ್ಷಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಸಂಜೆ 3.30 ಕ್ಕೆ, ಪಾರಂಪರಿಕ ಯಕ್ಷಗಾನ “ಕಿರಾತಾರ್ಜುನ” ಪ್ರದರ್ಶನಗೊಳ್ಳಲಿದೆ.

    ಸಂಜೆ 5.15 ಕ್ಕೆ ಶ್ರೀ ಕ್ಷೇತ್ರ ಒಡಿಯೂರಿನ ಗುರುದೇವಾನಂದ ಸ್ವಾಮೀಜಿಯವರ ಗೌರವ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಪಟ್ಲ ಫೌಂಡೇಶನ್ ನ ಟ್ರಸ್ಟಿ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಎಂಆರ್ ಜಿ ಗ್ರೂಪ್ ನ ಚೇರ್‌ಮೆನ್ ಕೆ. ಪ್ರಕಾಶ್ ಶೆಟ್ಟಿ, ಉದ್ಯಮಿ ತೋನ್ನೆ ಆನಂದ ಶೆಟ್ಟಿ, ಡಾ ಎಚ್ ಎಸ್ ಬಲ್ಲಾಳ್, ಕೆ ಕೆ ಶೆಟ್ಟಿ ವಕ್ಕಾಡಿ ಪ್ರವೀಣ್ ಶೆಟ್ಟಿ, ಕನ್ಯಾನ ರಘುರಾಮ ಶೆಟ್ಟಿ, ಡಾ.ಎಂ. ಮೋಹನ್ ಆಳ್ವ ಮೊದಲಾದವರು ಭಾಗವಹಿದಲಿದ್ದಾರೆ.

    ಯಕ್ಷಧ್ರುವ ಪಟ್ಲ ಪ್ರಶಸ್ತಿ:

    ಸಮಾರಂಭದಲ್ಲಿ ರಾಮಚಂದ್ರ ಹೆಗಡೆ ಕೊಂಡದಕುಳಿ ಅವರನ್ನು 2024 ರ ಸಾಲಿನ ಯಕ್ಷಧ್ರುವ ಪಟ್ಲ ಪ್ರಶಸ್ತಿ ನೀಡಿ ಗೌರವಿಸಲಾಗುವುದು. 2024 ರ ಸಾಲಿನ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿಯನ್ನು CA ದಿವಾಕರ್ ರಾವ್ ಮತ್ತು ಶ್ರೀಮತಿ ಶೈಲಾ ದಿವಾಕರ್ ಪಡೆಯಲಿದ್ದಾರೆ. ಅದೇ ರೀತಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ 18 ಮಂದಿ ಕಲಾ ಗೌರವವನ್ನು ಸ್ವೀಕರಿಸಲಿದ್ದಾರೆ.

     

    2024 ರ ಸೇವಾ ಯೋಜನೆ :

    ಪಟ್ಲ ಪ್ರಶಸ್ತಿ ರೂ.1 ಲಕ್ಷ ಗೌರವ ಧನ, 3,500 ಕಲಾವಿದರಿಗೆ (ಯಕ್ಷಗಾನ, ನಾಟಕ -ರಂಗಭೂಮಿ, ದೈವಾರಾಧನೆ) ಅವಘಾತ ವಿಮಾ ಯೋಜನೆ, 20 ಸಾವಿರ ನಗದಿನೊಂದಿಗೆ ಯಕ್ಷಗಾನ ಸಹಿತ ವಿವಿಧ ಕ್ಷೇತ್ರಗಳ ಹಿರಿಯ ಸಾಧಕರಿಗೆ ಯಕ್ಷಧ್ರುವ ಕಲಾ ಗೌರವ, ವೈದ್ಯಕೀಯ, ಆರ್ಥಿಕ ನೆರವು, ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ಕನ್ನಡಕ ಹಾಗೂ ಔಷಧ ವಿತರಣೆ, ಆಶಕ್ತರಿಗೆ ಧನಸಹಾಯ, ಗೃಹ ನಿರ್ಮಾಣಕ್ಕೆ ಸಹಾಯ ಧನ, ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಕ್ಷಶಿಕ್ಷಣ ಯೋಜನೆ.

    11.5 ಕೋಟಿ ಮೊತ್ತದ ಸೇವಾ ಯೋಜನೆ ಅನುಷ್ಠಾನ:

    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಎಂಟು ವರ್ಷಗಳಲ್ಲಿ ಸುಮಾರು 11.5 ಕೋಟಿ ರೂಪಾಯಿ ಮೊತ್ತದ ಸೇವಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ.
    ಪಟ್ಲ ಯಕ್ಷಾಶ್ರಯದ ಮೂಲಕ 26 ಮನೆಗಳನ್ನು ನಿರ್ಮಿಸಿ ಕಲಾವಿದರಿಗೆ ಹಸ್ತಾಂತರಿಸಲಾಗಿದೆ. 12 ಮನೆಗಳು ನಿರ್ಮಾಣ ಹಂತದ ಕೊನೆಯ ಹಂತದಲ್ಲಿದೆ. ಗೃಹ ನಿರ್ಮಾಣ ಯೋಜನೆಯಲ್ಲಿ 162 ಕಲಾವಿದರಿಗೆ ತಲಾ 25 ಸಾವಿರ ಮನೆ ರಿಪೇರಿಗೆ ಸಹಾಯ ಧನ ವಿತರಿಸಲಾಗಿದೆ. 160 ಮಂದಿ ತೀರಾ ಅಶಕ್ತ ಕಲಾವಿದರಿಗೆ 50 ಸಾವಿರ ವಿತರಿಸಲಾಗಿದೆ. ಪ್ರಖ್ಯಾತ ಆರು ಮಂದಿ ಕಲಾವಿದರಿಗೆ ತಲಾ ಒಂದು ಲಕ್ಷ ರೂಪಾಯಿಯೊಂದಿಗೆ ಪಟ್ಲ ಪ್ರಶಸ್ತಿ ನೀಡಲಾಗಿದೆ. ಪ್ರಾದೇಶಿಕ ಘಟಕಗಳ ವ್ಯಾಪ್ತಿಯಲ್ಲಿ ಸುಮಾರು 410 ಮಂದಿ ಕಲಾವಿದರು ಸಂಮಾನ ಮತ್ತು ಗೌರವ ಧನ ಪಡೆದಿರುತ್ತಾರೆ.

    ಯಕ್ಷಗಾನದಲ್ಲಿ ದಾಖಲೆ ಬರೆದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ:

    ಯಕ್ಷಧ್ರುವ ಯಕ್ಷ ಶಿಕ್ಷಣ ಅಡಿಯಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಸುಮಾರು 3,500 ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯ ಬೇರೆ ಬೇರೆ ಆಯಾಮಗಳ ಸ್ಪರ್ಧೆ, ಇದರಲ್ಲಿ 1,700 ವಿದ್ಯಾರ್ಥಿಗಳು ವೇಷಭೂಷಣಗಳೊಂದಿಗೆ ಒಂದೇ ದಿನ ರಂಗ ಪ್ರವೇಶ ಮಾಡಿರುವುದು ಯಕ್ಷಗಾನದಲ್ಲಿ ದಾಖಲೆಯಾಗಿದೆ.

    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಸಂಸ್ಥೆಯೊಂದಿಗೆ ಮಹಿಳಾ ಘಟಕ ಮತ್ತು ವಿದೇಶದಲ್ಲಿರುವ ಘಟಕಗಳು ಸೇರಿದಂತೆ ಒಟ್ಟು 40 ಪ್ರಾದೇಶಿಕ ಘಟಕಗಳು ಕೆಲಸ ಮಾಡುತ್ತಿದೆ.

    2024 ನೇ ಸಾಲಿನ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ:

    ಈ ಬಾರಿ ವೃತ್ತಿಪರ ಕಲಾವಿದರ ಮಕ್ಕಳಿಗೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ (ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಹೀಗೆ ಒಟ್ಟು 4 ವಿಭಾಗಗಳಲ್ಲಿ) ಯಲ್ಲಿ 90% ಕ್ಕಿಂತ ಮೇಲ್ಪಟ್ಟು ಗರಿಷ್ಠ ಅಂಕ ಗಳಿಸಿದ ತಲಾ ಒಬ್ಬ ವಿದ್ಯಾರ್ಥಿಗೆ ಪ್ರತಿಭಾ ಪುರಸ್ಕಾರವನ್ನು 2024ರ ಪಟ್ಲ ಸಂಭ್ರಮದಂದು ನೀಡಲಾಗುವುದು.

    ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ, ಕೋಶಾಧಿಕಾರಿ CA ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಬಾಳ ಜಗನ್ನಾಥ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರವಿ ಶೆಟ್ಟಿ, ಆಶೋಕನಗರ, ಉಪಾಧ್ಯಕ್ಷ ಡಾ.ಮನು ರಾವ್, ಜೊತೆ ಕಾರ್ಯದರ್ಶಿ ರಾಜೀವ್ ಪೂಜಾರಿ ಕೈಕಂಬ ಉಪಸ್ಥಿತರಿದ್ದರು.

     

    Continue Reading

    LATEST NEWS

    Trending