Connect with us

DAKSHINA KANNADA

Mangaluru: ಎಂ.ಡಿ.ಎಂ.ಎ. ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ..!

Published

on

ಮಂಗಳೂರು: ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂ.ಡಿ.ಎಂ.ಎ. ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಒಟ್ಟು 70,500 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

ಉಳ್ಳಾಲ ತಾಲೂಕಿನ ಹರೇಕಳದವನಾಗಿದ್ದು, ಪ್ರಸ್ತುತ ಮಂಗಳೂರಿನ ಬಜಾಲ್ ಪಡ್ಪು ಎಂಬಲ್ಲಿ ವಾಸವಾಗಿರುವ  ಹಸೈನಾರ್ ಯಾನೆ ಅಚ್ಚು (32) ಬಂಧಿತ ಆರೋಪಿ. ಮಂಗಳೂರಿನ ಪಡೀಲ್ ಪರಿಸರದಲ್ಲಿ ಸಾರ್ವಜನಿಕರಿಗೆ ಎಂ.ಡಿ.ಎಂ.ಎ. ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೋಪಿಯನ್ನು ಬಂಧಿಸಿದರು. ಆರೋಪಿಯಿಂದ 12 ಗ್ರಾಂ ತೂಕದ 60,000 ರೂಪಾಯಿ ಮೌಲ್ಯದ ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಆತನ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಹಲ್ಲೆ ಪ್ರಕರಣ ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು 3 ಪ್ರಕರಣಗಳು ದಾಖಲಾಗಿರುತ್ತವೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು : ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ

Published

on

ಮಂಗಳೂರು : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಯುವ ಪೀಳಿಗೆಯ ಯುವ ಮಕ್ಕಳ ಮುಂದಿನ ಉಜ್ವಲ ಭವಿಷ್ಯದ ನಿರ್ಮಾಣಕ್ಕಾಗಿ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಪಚ್ಚನಾಡಿಯಲ್ಲಿ ನಡೆಯಿತು.

ಈ ಸಂದರ್ಭ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ಅಧ್ಯಕ್ಷ ಸತೀಶ್ ಕುಮಾರ್ ಬಜಾಲ್ ಮಾತನಾಡಿ, ನಾವು ಸಣ್ಣವರಿದ್ದಾಗ ಕಲಿಕಾ ಸಾಮಗ್ರಿಗಳಿಲ್ಲದೇ ಕಷ್ಟಪಟ್ಟಿದ್ದೆವು. ಅಂತಹ ಕಷ್ಟ ಬಡ ವಿದ್ಯಾರ್ಥಿಗಳು ಪಡಬಾರದೆಂದು ಸಮಾಜದ ಎಲ್ಲರಿಗೂ ಪ್ರೇರಣೆಯಾಗುವಂತೆ ಮಂಗಳೂರಿನ ಎಲ್ಲಾ ಕಡೆ ಪ್ರತಿವರ್ಷದಂತೆ ಪುಸ್ತಕ ವಿತರಣೆ ಕಾರ್ಯಕ್ರಮ ಮಾಡುವುದಾಗಿ ಭರವಸೆ ನೀಡಿದರು. ಪುಸ್ತಕ ಪಡೆದ ವಿದ್ಯಾರ್ಥಿಗಳು ಜೀವನದಲ್ಲಿ ಕಲಿತು ಆರ್ಥಿಕವಾಗಿ ಬೆಳೆದರೆ, ನೀವು ಕೂಡ ಈ ರೀತಿ ಕಾರ್ಯಕ್ರಮ ಮಾಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಸಹಾಯಮಾಡಿ ಎಂದರು.

ಇದನ್ನೂ ಓದಿ : ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

ಗೌರವಾಧ್ಯಕ್ಷ ವಸಂತ್ ಜೆ ಪೂಜಾರಿ, ಉಪಾಧ್ಯಕ್ಷ ಅಕ್ಷಯ್ ಬಂಜನ್, ಕಮಲಾಕ್ಷ ಬಜಾಲ್, ಪ್ರಧಾನ ಕಾರ್ಯದರ್ಶಿ ನಟರಾಜ್ ಪಚ್ಚನಾಡಿ, ಜೊತೆ ಕಾರ್ಯದರ್ಶಿ ಶರತ್ ಕುಂದರ್ ಪದವಿನಂಗಡಿ, ಪ್ರಸಾದ್ ಕುಂಪಲ, ಖಜಾಂಚಿ ಅರುಣ್ ಡಿಸೋಜ, ಸದಸ್ಯ ರಾಕೇಶ್ ಶೆಟ್ಟಿ, ಪಿ ಎಎಫ್ ಸಿ ತಂಡದ ಪ್ರಮುಖರಾದ ಐವನ್ ಆಲ್ವರಿಸ್, ಕೀರ್ತಿ ಪ್ರಸಾದ್, ರಘು, ರಾಕೇಶ್ ಶೆಟ್ಟಿ, ರೂಪೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

Published

on

ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Continue Reading

DAKSHINA KANNADA

15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!

Published

on

ಮಂಗಳೂರು ( ಜಾರ್ಖಂಡ್‌ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು ಜಾರ್ಖಂಡ್‌ನಲ್ಲಿ ನಡೆದ ಘಟನೆಯಾಗಿದ್ದು, ಹತ್ತು ಸಾವಿರ ಲಂಚ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಇಡಿ  ಸಾಮಾನ್ಯ ನೌಕರನ ಮನಗೆ ದಾಳಿ ಮಾಡಿತ್ತು. ಅಲ್ಲಿ ಅಡಗಿಸಿಟ್ಟಿದ್ದ ಹಣ ನೋಡಿ ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಣ ಎಣಿಸಲು ಮೆಷಿನ್ ಹಾಗೂ ಹೆಚ್ಚುವರಿ ನೌಕರರನ್ನು ಮನೆಗೆ ಕರೆಸಿಕೊಂಡಿದ್ದಾರೆ.

ನೌಕರನ ಮನೆಗೆ ಲಂಚದ ಹಣ…!

ಜಾರ್ಖಂಡ್‌ ನ ಸಚಿವ ಅಲಂಗೀರ್ ಆಲಂ ಅವರ ಖಾಸಗಿ ಕಾರ್ಯದರ್ಶಿ ಮನೆ ಮೇಲೆ ರಾಂಚಿಯ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಲಂಗೀರ್ ಆಲಂ ಅವರ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಲ್ಲಿನ ಲಂಚದ ಹಣ ನೌಕರನ ಮನೆಗೆ ಹೋಗುತ್ತದೆ ಅನ್ನೋ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಚಿವರ ಆಪ್ತ ಕಾರ್ಯದರ್ಶಿಯ ಅಡಿಯಲ್ಲಿ ಮಾಸಿಕ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ನೌಕರನ ಮನೆಗೆ ದಾಳಿ ಮಾಡಿದಾಗ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ.

ವಿಡಿಯೋ ನೋಡಿ :

ಹತ್ತು ಸಾವಿರ ಲಂಚದ ಹಿಂದೆ ಬಿದ್ದಿದ್ದ ಇಡಿ..!

ಕಳೆದ ವರ್ಷ ಹತ್ತು ಸಾವಿರ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಇಂಜೀನಿಯರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಇಂಜೀನಿಯರ್ ಅವರ ಹೇಳಿಕೆಯನ್ನು ದಾಖಲಿಸಿದಾಗ ಲಂಚದ ಹಣ ಸಚಿವರಿಗೆ ತಲುಪಿಸಲಾಗುತ್ತದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಜಾರ್ಖಂಡ್‌ನ ಗ್ರಾಮೀಣ ಅಭಿವೃದ್ದಿ ಸಚಿವ ಅಲಂಗೀರ್ ಆಲಂ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹೆಸರು ಮುನ್ನಲೆಗೆ ಬಂದಿತ್ತು . ಹೀಗಾಗಿ ಸಂಜೀವ್‌ ಲಾಲ್ ಅವರ ಬಳಿ ನೌಕರನಾಗಿದ್ದ ವ್ಯಕ್ತಿಯ ಮನೆಗೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

ಜಾರ್ಖಂಡ್ ಕಾಂಗ್ರೆಸ್ ಸರ್ಕಾರದ ಸಚಿವ…!

ಅಲಂಗೀರ್ ಆಲಂ ಜಾರ್ಖಂಡ್‌ನ ಪಾಕುರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾರೆ. ಈ ಹಿಂದೆ 2006 ರಿಂದ 2009 ರ ವರೆಗೆ ಅವರು ಸ್ಪೀಕರ್ ಕೂಡಾ ಆಗಿದ್ದರು. 2023ರ ಡಿಸೆಂಬರ್‌ ತಿಂಗಳಲ್ಲಿ ಜಾರ್ಖಂಡ್‌ನ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಉದ್ಯಮಿ ಧೀರಜ್ ಸಾಹು ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲಿ 350 ಕೋಟಿಯಷ್ಟು ಹಣ ಪತ್ತೆಯಾಗಿತ್ತು. ಈ ವೇಳೆ ಧೀರಜ್ ಸಾಹು ಅದು ಮದ್ಯದ ವ್ಯವಹಾರದ ಹಣವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.

Continue Reading

LATEST NEWS

Trending