DAKSHINA KANNADA
ಆಂಧ್ರದಿಂದ ಮಂಗಳೂರಿಗೆ 23 ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದಾತ ಮಾಲು ಸಮೇತ ಅರೆಸ್ಟ್..!
ಆಂಧ್ರ ಪ್ರದೇಶದಿಂದ ಮಂಗಳೂರು ಮತ್ತು ಕೇರಳಕ್ಕೆ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಬಂಧಿಸಿದೆ. ಬಂಧಿತನಿಂದ ಸುಮಾರು 23 ಕೆಜಿ ಗಾಂಜಾವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಮತ್ತು ಕೇರಳಕ್ಕೆ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಬಂಧಿಸಿದೆ. ಬಂಧಿತನಿಂದ ಸುಮಾರು 23 ಕೆಜಿ ಗಾಂಜಾವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮೊಯಿದ್ದೀನ್ ಶಬೀರ್ (35) ಎಂದು ಗುರುತಿಸಲಾಗಿದೆ.
ಶಬೀರ್ ವಿಶಾಖಪಟ್ಟಣದಿಂದ ಕಾರಿನ ಮೂಲಕ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದಾಗ ಉಳ್ಳಾಲ ಮುಡಿಪು ಕಾಯಿರಗೋಳಿ ಎಂಬಲ್ಲಿ ಸಿಸಿಬಿ ಪೊಲೀಸರ ತಂಡ ಸೆರೆ ಹಿಡಿದಿದೆ.
ಈತ ಬಳಿಯಿಂದ ಒಟ್ಟು 12,96, 470 ರೂ ಮೌಲ್ಯದ 23 ಕೆಜಿ ಗಾಂಜಾ, ಮಹೀಂದ್ರ ಕಾರು ಮತ್ತು ಎರಡು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಶಬೀರ್ ವಿರುದ್ಧ ಕಾಸರಗೋಡು, ಮಂಜೇಶ್ವರ, ಕುಂಬ್ಳೆ ಮತ್ತು ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಸೇರಿ 12 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!