Connect with us

DAKSHINA KANNADA

Mangaluru: ಡಿ. 28ರಂದು 12 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ

Published

on

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ 12 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಡಿ. 28ರಂದು ಆಯೋಜನೆ ಮಾಡಿದ್ದೇವೆ ಎಂದು ಸಮಿತಿಯ ಪಿ ಕೃಷ್ಣಯ್ಯ ಹೇಳಿದ್ದಾರೆ.

ಮಂಗಳೂರು: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್‌ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಘಟಕ, ಅರಸು ಫ್ರೆಂಡ್ಸ್‌ ಬಳಗ ಮಂಗಳೂರು, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಅಳಕೆ ಫ್ರೆಂಡ್ಸ್‌ ಟ್ರಸ್ಟ್‌ ಮಂಗಳೂರು ಈ  ಸಂಘಟನೆಗಳಲ್ಲವೂ ಸೇರಿ ಸಾಮಾಜಿಕ , ಧಾರ್ಮಿಕ ಶೈಕ್ಷಣಿಕ , ಕ್ರೀಡಾ, ರಕ್ತದಾನ, ಆರೋಗ್ಯ, ಪರಿಸರ ಸಂರಕ್ಷಣೆ  ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿವೆ.

ಇದೀಗ ಈ ನಾಲ್ಕು ಸಂಘಟನೆಗ ಜಂಟಿ ಆಶ್ರಯದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ 12 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಡಿ. 28ರಂದು ಆಯೋಜನೆ ಮಾಡಿದ್ದೇವೆ ಎಂದು ಸಮಿತಿಯ ಪಿ ಕೃಷ್ಣಯ್ಯ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ವಿಶೇಷ ಸಂಘಟನೆಗಳ ವತಿಯಿಂದ ನೂತನ ವಧುವರರಿಗೆ ಒಂದು ಪವನ್‌ ಚಿನ್ನದ ಕರಿಮಣಿ, ಉಡುಪುಗಳನ್ನು ನೀಡಲಾಗುವುದು.

ಆಸುಪಾಸಿನಲ್ಲಿ ತೀರ ಬಡತನದಲ್ಲಿ ಇರುವ ವಧುವರರು ಇದ್ದರೆ ಈ ಸಾಮೂಹಿಕ ವಿವಾದಲ್ಲಿ ಪಾಲ್ಗೊಳ್ಳಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಪ್ರಮುಖರಾದ ದೀಪಕ್ ಜಿ ಬೆಳ್ತಂಗಡಿ, ಮನೋಜ್ ಕುಮಾರ್‌, ಪ್ರಸಾದ್ ಭಂಡಾರಿ ಮೊದಲಾದವರಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಆಂಬುಲೆನ್ಸ್ – ಕಾರು ನಡುವೆ ಭೀಕರ ಅ*ಪಘಾತ..! ಮೂವರ ದುರ್ಮ*ರಣ.!

Published

on

ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ನಡೆದಿದೆ.

accident

ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

 ಮುಂದೆ ಓದಿ..; ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

accident

 

Continue Reading

DAKSHINA KANNADA

ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ರಕ್ತಸಿಕ್ತ ಸ್ಥಿತಿಯಲ್ಲಿದ್ದ ಶ*ವ.!!

Published

on

ಮಂಗಳೂರು: ಹೆಸರಾಂತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಭಂಟರ ಭವನದ ಆವರಣದ ಕಂಪೌಂಡ್‌ ಒಳಗಡೆ ವ್ಯಕ್ತಿಯೋರ್ವನ ಮೃತದೇಹ ರಕ್ತಸಿಕ್ತವಾಗಿ ಇದ್ದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಅವರ ಮೃತದೇಹ ಎಂದು ಗುರುತಿಸಲಾಗಿದೆ.

bantwala death

ಬಂಟರ ಭವನದ ಹೊರಗಡೆ ಸಂತೋಷ್ ಗೆ ಸೇರಿದ್ದ ಬೈಕ್‌ ಪತ್ತೆಯಾಗಿದೆ. ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿದ್ದು ಈ ವೇಳೆ ಕುಸಿದು ಕೆಳಗೆ ಬಿದ್ದು ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ.. ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading

BELTHANGADY

ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ

Published

on

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪ*ಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿತು.

ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಹೀಗೆ ಒಟ್ಟು 2 ರಿಕ್ಷಾಗಳು ಹಾಗೂ 3 ಕಾರುಗಳು ಜಖಂಗೊಂಡಿವೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಎಲ್ಲ ಕಾರುಗಳು ಜಖಂಗೊಂಡಿವೆ.

Continue Reading

LATEST NEWS

Trending