Connect with us

DAKSHINA KANNADA

ಎಂಡಿಎಂಎ ಮಾರಾಟ ಮಾಡುತ್ತಿದ್ದ 2 ಆರೋಪಿಗಳ ಬಂಧನ- 2ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ..!

Published

on

ಮಂಗಳೂರು: ‘ಡ್ರಗ್ಸ್ ಮುಕ್ತ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ‘ಎಂಡಿಎಂಎ’ಯನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ನಗರದ ಹೊರವಲಯದ ಉಳ್ಳಾಲ ಬೈಲ್ ಪರಿಸರದಲ್ಲಿ ಇಬ್ಬರು ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಉಳ್ಳಾಲ ಸುಭಾಷ್‌ನಗರದ ಜಾಕೀರ್ (29)  ಮತ್ತು ಅರ್ಕುಳ ಗ್ರಾಮದ ವಳಚಿಳ್ ಪದವಿನ ಕಾರ್ತಿಕ್ ಸುವರ್ಣ (27) ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಂದ 20 ಗ್ರಾಂ ತೂಕದ 1 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, 1 ಹೊಂಡಾ ಅಕ್ಟಿವಾ ಸ್ಕೂಟರ್, 2 ಮೊಬೈಲ್ ಫೋನ್‌ಗಳು, ನಗದು 3,300ರೂಪಾಯಿ ಮೌಲ್ಯದ ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ಇವುಗಳ ಒಟ್ಟು ಮೌಲ್ಯ 2.15 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಜಾಕೀರ್ ಎಂಬಾತನ ವಿರುದ್ಧ ಈ ಹಿಂದೆ ಕರ್ತವ್ಯ ನಿರತ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣವು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ.

ಇನ್ನೋರ್ವ ಆರೋಪಿ ಕಾರ್ತಿಕ್ ವಿರುದ್ಧ ದ್ವಿಚಕ್ರ ವಾಹನ ಕಳ್ಳತನ ಮಾಡಿದ ಪ್ರಕರಣವು ಬಂದರ್ ಠಾಣೆಯಲ್ಲಿ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Published

on

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.


ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.

ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Continue Reading

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

LATEST NEWS

Trending