Connect with us

DAKSHINA KANNADA

Mangaluru: ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ ಸಚಿವ ಪರ್ಷೋತ್ತಮ್

Published

on

ದೇಶದ ಕರಕುಶಲ ಕರ್ಮಿಗಳಿಗೆ ವರದಾನವಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿರುವ “ಪಿಎಂ ವಿಶ್ವಕರ್ಮ” ಯೋಜನೆಯನ್ನು ಕೇಂದ್ರ ಸಚಿವ ಪರ್ಷೋತ್ತಮ್ ರೂಪಾಲಾ ಅವರು  ಸೆ.17ರಂದು ಮಂಗಳೂರಿನ ಟಿ.ಎಂ.ಪೈ ಸಭಾಂಗಣದಲ್ಲಿ ಲೋಕಾರ್ಪಣೆ ಮಾಡಿದರು. 

ಮಂಗಳೂರು: ದೇಶದ ಕರಕುಶಲ ಕರ್ಮಿಗಳಿಗೆ ವರದಾನವಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿರುವ “ಪಿಎಂ ವಿಶ್ವಕರ್ಮ” ಯೋಜನೆಯನ್ನು ಕೇಂದ್ರ ಸಚಿವ ಪರ್ಷೋತ್ತಮ್ ರೂಪಾಲಾ ಅವರು  ಸೆ.17ರಂದು ಮಂಗಳೂರಿನ ಟಿ.ಎಂ.ಪೈ ಸಭಾಂಗಣದಲ್ಲಿ ಲೋಕಾರ್ಪಣೆ ಮಾಡಿದರು.

ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಸಚಿವ ರೂಪಾಲಾ  ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಪ್ರಧಾನ ಭಾಷಣ ಮಾಡಿದ  ಅವರು, ಇಂದು ಈ ಯೋಜನೆಯನ್ನು ಉದ್ಘಾಟಿಸಲು ಮಂಗಳೂರಿಗೆ ಬಂದಿರುವುದು ಖುಷಿ ಕೊಟ್ಟಿದೆ.

ಇಂದು ವಿಶ್ವಕರ್ಮರು ಇಲ್ಲದಿದ್ದರೆ ವ್ಯವಸ್ಥೆಯನ್ನು ಊಹಿಸಿಕೊಳ್ಳುವುದಕ್ಕೂ ಕಷ್ಟ ಸಾಧ್ಯವಾಗುತ್ತಿತ್ತು.

ಸಮಾಜದಲ್ಲಿ ವ್ಯಕ್ತಿಗಳಿಗೆ ಸೌಂದರ್ಯದ ಕಲ್ಪನೆಯನ್ನು ನೀಡಿದ್ದೇ ವಿಶ್ವಕರ್ಮರು ಎಂದು ಶ್ಲಾಘಿಸಿದರು.

ಕರಕುಶಲ ಕರ್ಮಿಗಳು ತಯಾರಿಸಿದ ಪರಿಕರಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್‌ ಅವರು ಪ್ರಸ್ತಾವನೆ ಮಾಡಿದರು.

ವೇದಿಕೆಯಲ್ಲಿ ರಾಜ್ಯ ಮೀನುಗಾರಿಕೆ ಸಚಿವ ಮಾಂಕಾಳು ವೈದ್ಯ, ಉತ್ತರ ಕ್ಷೇತ್ರ ಶಾಸಕ ಭರತ್‌ ಶೆಟ್ಟಿ, ಮಂಗಳೂರು ಮೇಯರ್‌ ಸುಧೀರ್ ಶೆಟ್ಟಿ ಕಣ್ಣುರು, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಹಿಲನ್, ಭಾರತ ಸರಕಾರದ ಮರೈನ್‌ ಫಿಶರೀಶ್‌ ಜಂಟಿ ಕಾರ್ಯದರ್ಶಿ ನೀತು ಕುಮಾರಿ ಪ್ರಸಾದ್, ನೇಶನಲ್ ಫಿಶರೀಶ್‌ ಡೆವಲಪ್‌ಮೆಂಟ್ ಬೋರ್ಡಿನ ಚೀಫ್‌ ಎಕ್ಸಿಕ್ಯೂಟಿವ್‌ ಡಾ ಎಲ್ ಎನ್‌ ಮೂರ್ತಿ, ರಾಜ್ಯ ಸರಕಾರದ ಮೀನುಗಾರಿಕಾ ಇಲಾಖೆ ನಿರ್ದೇಶಕ ದಿನೇಶ್‌ ಕುಮಾರ್‌ ಕಲ್ಲೈರ್‌ ಮೊದಲಾದವರಿದ್ದರು.

 

 

 

Click to comment

Leave a Reply

Your email address will not be published. Required fields are marked *

Ancient Mangaluru

ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

Published

on

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್‌ಲೈನರ್‌ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್‌ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?

ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್‌ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಎಸ್.ಎಂ.ಎಸ್ ಮೂಲಕ ಮಾಹಿತಿ :

ಎಲ್ಲಾ ಏರ್‌ಲೈನ್ ಚೆಕ್-ಇನ್ ಕೌಂಟರ್‌ಗಳು, ಬೋರ್ಡಿಂಗ್ ಗೇಟ್‌ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್‌ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.

Continue Reading

DAKSHINA KANNADA

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!

Published

on

ಕಡಬ: ವ್ಯಕ್ತಿಯೊಬ್ಬರು  ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ.  ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.

ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!

marriage

ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.  ಮಾರ್ಚ್‌1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್‌ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading

DAKSHINA KANNADA

ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ

Published

on

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.

ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.

ಪ್ರೀಮಿಯರ್ ಶೋ

ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.

Continue Reading

LATEST NEWS

Trending