Connect with us

    LATEST NEWS

    ಹನಿಟ್ರಾಪ್‌ಗೆ ಬಲಿಯಾದ ಮುಮ್ತಾಝ್ ಅಲಿ – ಮಹಿಳೆ ಸೇರಿದಂತೆ 6 ಮಂದಿ ವಿರುದ್ಧ FIR

    Published

    on

    ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಅವರ ಬಾವ ಅವರ ಸಹೋದರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಮುಮ್ತಾಜ್ ಆಲಿ ಸಹೋದರ ಹೈದರ್ ದೂರು ಆಧರಿಸಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್ ಹಾಗೂ ಸಿರಾಜ್ ವಿರುದ್ದ ಎಫ್ಐಆರ್ ದಾಖಲಾಗಿದೆ.

    ಸಹೋದರ ಮುಮ್ತಾಜ್ ಅಲಿ ಸಮಾಜದ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರ ಗೌರವ ಹಾಳು ಮಾಡಲು ಮಹಿಳೆಯ ಬಳಸಿಕೊಂಡು ಷಡ್ಯಂತ್ರ ರೂಪಿಸಿದ್ದಾರೆ. ಮುಮ್ತಾಜ್ ಆಲಿ ಅವರಿಗೆ ಅಕ್ರಮ ಸಂಬಂಧ ಇದೆ ಎಂದು ರೆಹಮತ್ ಸುಳ್ಳು ಪ್ರಚಾರ ಮಾಡಿ ಬೆದರಿಕೆ ಹಾಕಿದ್ದಾನೆ. 2024ರ ಜುಲೈನಿಂದ ಈವರೆಗೆ ಮುಮ್ತಾಜ್ ಅಲಿ ಅವರಿಂದ 50 ಲಕ್ಷ ರೂ. ವಸೂಲಿ ಮಾಡಿದ್ದಾರೆ. 25 ಲಕ್ಷ ರೂ. ಹಣವನ್ನು ಮಹಿಳೆ ಚೆಕ್ ಮೂಲಕ ಪಡೆದಿದ್ದಾಳೆ.

    ಸತ್ತಾರ್ ಎಂಬಾತ ಮುಮ್ತಾಜ್ ಅಲಿಯ ರಾಜಕೀಯ ವಿರೋಧಿಯಾಗಿದ್ದಾನೆ. ಅಕ್ರಮ ಸಂಬಂಧ ಇದೆ ಎಂದು ಇವರು ನಿರಂತರ ಬ್ಲ್ಯಾಕ್ ಮೇಲ್ ಮಾಡಿದ್ದರು. ಜೀವ ಬೆದರಿಕೆ ಜೊತೆಗೆ ಮುಮ್ತಾಜ್ ಆಲಿ ಕುಟುಂಬಕ್ಕೂ ಬೆದರಿಸಿದ್ದರು. ಹೀಗಾಗಿಯೇ ಸಹೋದರ ಮುಮ್ತಾಜ್ ಆಲಿ ಮೆಸೇಜ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಮ್ತಾಜ್ ಅಲಿ ಸಹೋದರ ಹೈದರ್ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

    ಏನಿದು ಘಟನೆ?

    ಮುಮ್ತಾಜ್ ಅಲಿ ಅವರು ಉದ್ಯಮಿಯಾಗಿದ್ದು, ಫಿಶ್ ಮಿಲ್, ಕಾಲೇಜು ಸೇರಿದಂತೆ ಹಲವು ಉದ್ಯಮಗಳನ್ನು ನಡೆಸುತ್ತಿದ್ದಾರೆ. ಮುಮ್ತಾಜ್ ಅಲಿ ಸಾಕಷ್ಟು ಸಂಘ ಸಂಸ್ಥೆಗಳಲ್ಲಿ, ಮಸೀದಿಯಲ್ಲಿ ಅಧ್ಯಕ್ಷ, ಪದಾಧಿಕಾರಿಯಾಗಿದ್ದು ಮುಸ್ಲಿಂ ಸಮುದಾಯದ ಪ್ರಮುಖ ನಾಯಕರಾಗಿದ್ದಾರೆ. ಸಮಾಜ ಸೇವೆಯ ಮೂಲಕ, ಮುಸ್ಲಿಂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿದ್ದರು.

    ಶನಿವಾರ ರಾತ್ರಿ ಮುಮ್ತಾಜ್ ಅಲಿ ಮನೆಯಲ್ಲಿ ಗಲಾಟೆಯಾಗಿದೆ. ರವಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಯಾರಿಗೂ ತಿಳಿಯದಂತೆ ತನ್ನ ಬಿಎಂಡಬ್ಲ್ಯೂ ಕಾರನ್ನು ಚಲಾಯಿಸಿಕೊಂಡು ಪಣಂಬೂರು ಬಳಿ ಬಂದಿದ್ದಾರೆ. ಅಲ್ಲಿಂದ ವೇಗವಾಗಿ ಕೂಳೂರು ಹೈವೆಯಲ್ಲಿ ಬರುತ್ತಿದ್ದು ಖಾಸಗಿ ಬಸ್ಸೊಂದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಯೂಟರ್ನ್ ತೆಗೆದುಕೊಂಡು ಬಂದು ಕೂಳೂರು ಸೇತುವೆಯ ಮಧ್ಯದಲ್ಲಿ ಕಾರನ್ನು ನಿಲ್ಲಿಸಿದ್ದಾರೆ. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ‌ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಶಂಕಿಸಲಾಗಿದೆ.

    ಮಹಿಳೆ ಕೈವಾಡ

    ಮುಮ್ತಾಜ್ ಅಲಿ ನಾಪತ್ತೆ ಹಿಂದೆ ಮಹಿಳೆಯ ಕೈವಾಡ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸುರತ್ಕಲ್ ಕೃಷ್ಣಾಪುರ ನಿವಾಸಿ ಮಹಿಳೆ ಕಳೆದ ಒಂದು ವರ್ಷದಿಂದ ಮುಮ್ತಾಜ್ ಅಲಿ ಅವರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳಂತೆ. ಮುಮ್ತಾಜ್ ಅಲಿ ಅವರ ಖಾಸಗಿ ವಿಡಿಯೋ ಇಟ್ಟುಕೊಂಡು ಮದುವೆ ಆಗುವಂತೆ ಮಹಿಳೆ ಬ್ಲಾಕ್ ಮೇಲ್ ಮಾಡುತ್ತಿದ್ದಳಂತೆ.

    ಈ ವಿಚಾರ ಮುಮ್ತಾಜ್​ ಅಲಿ ಮನೆಯವರಿಗೆ ಗೊತ್ತಾಗಿ ನಿತ್ಯ ಕಿರಿಕಿರಿಯಾಗುತ್ತಿತ್ತು. ಇತ್ತೀಚಗೆ ಮಸೀದಿ ಕಮಿಟಿ ವಿಚಾರದಲ್ಲಿ ಕಾಟಿಪಳ್ಳದ ಮೂವರು ಯುವಕರು ಆ ಮಹಿಳೆಗೆ ಸಾಥ್ ನೀಡಿ ಹೆಸರು ಕೆಡಿಸಲು ತಯಾರಿ ನಡೆಸಿದ್ದರಂತೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ಹೇಳಲಾಗುತ್ತಿದೆ‌. ಪೊಲೀಸರು ಆ ಮಹಿಳೆ ಹಾಗೂ ಆ ಮೂವರ ಹಿಂದೆ ಬಿದ್ದಿದ್ದಾರೆ. ಆ ಮಹಿಳೆ ಕೇರಳಕ್ಕೆ ಹೋಗಿದ್ದು ಅಲ್ಲಿ ಫೋನ್ ಸ್ವಿಚ್ಡ್ ಆಫ್ ಆಗಿದೆ‌. ಈ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ದೊರೆತಿದೆ. ತನಿಖೆ ಮುಂದುವರೆದಿದೆ.

    LATEST NEWS

    ಶೂ ಹಾಕಿಕೊಂಡು ದೇಗುಲ ಪ್ರವೇಶಿಸಿದ ಅಧಿಕಾರಿ ಅಮಾನತು

    Published

    on

    ಮಿರ್ಜಾಪುರ: ಮಿರ್ಜಾಪುರ ಜಿಲ್ಲೆಯ ವಿದ್ಯಾವಾಸಿನಿ ದೇವಾಲಯಕ್ಕೆ ಶೂ ಹಾಕಿಕೊಂಡು ಪ್ರವೇಶಿಸಿದ ಆರೋಪದಡಿ ಜಿಲ್ಲಾ ಕೃಷಿ ಅಭಿವೃದ್ಧಿ ಸಹಾಯಕ ಅಧಿಕಾರಿಯನ್ನು(ಎಡಿಒ) ಕೆಲಸದಿಂದ ಅಮಾನತು ಮಾಡಲಾಗಿದೆ.

    ಉಪವಿಭಾಗಾಧಿಕಾರಿಯಾಗಿ ಆಗಿಯೂ ಕೆಲಸ ಮಾಡುತ್ತಿರುವ ಪ್ರತೀಕ್ ಕುಮಾರ್ ಸಿಂಗ್ ಶೂ ಹಾಕಿಕೊಂಡು ದೇಗುಲ ಪ್ರವೇಶಿಸಿದ್ದನ್ನು ಶಾಸಕ ರತ್ನಾಕರ್ ಮಿಶ್ರಾ ಗಮನಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಮೇಲಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.

    ಅಲ್ಲದೆ, ಅಧಿಕಾರಿಗೆ ಛೀಮಾರಿ ಹಾಕಿದ ಶಾಸಕರು, ದೇಗುಲದ ಆವರಣದಿಂದ ಹೊರಗೆ ಕಳುಹಿಸಿದ್ದಾರೆ.

    ಘಟನೆಯ ಮಾಹಿತಿ ಬಂದ ಕೂಡಲೇ ಎಡಿಒ ಅಮಾನತಿಗೆ ಮಿರ್ಜಾಪುರ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಕೃಷಿ ಇಲಾಖೆಯ ಉಪ ಆಯುಕ್ತ ವಿಕಾಸ್ ಪಟೇಲ್ ಅವರು ಆದೇಶಿಸಿದ್ದಾರೆ.

    Continue Reading

    LATEST NEWS

    ಕರಾಚಿ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋ*ಟ; ಇಬ್ಬರು ಚೀನಾ ಪ್ರಜೆಗಳು ಸಾ*ವು

    Published

    on

    ಮಂಗಳೂರು/ಕರಾಚಿ : ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದ ಹೊರಗೆ ಭಾನುವಾರ ರಾತ್ರಿ(ಅ.7)  ಭಾರಿ ಸ್ಫೋ*ಟ ಸಂಭವಿಸಿದ್ದು, ಇಬ್ಬರು ಚೀನಾ ಪ್ರಜೆಗಳು ಸಾ*ವನ್ನಪ್ಪಿದ್ದಾರೆ. ಕನಿಷ್ಠ ಎಂಟು ಮಂದಿ ಗಾ*ಯಗೊಂಡಿದ್ದಾರೆ ಎಂಬುದಾಗಿ ವರದಿಯಾಗಿದೆ.

    ಸಿಂಧ್ ಪ್ರಾಂತ್ಯದಲ್ಲಿ ಪವರ್ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ಸ್ಫೋ*ಟ ನಡೆಸಲಾಗಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಪ್ರತ್ಯೇಕತಾವಾದಿ ಬಲೂಚಿಸ್ತಾನ್ ರಾಷ್ಟ್ರೀಯ ಸೇನೆ ದಾಳಿಯ ಹೊಣೆ ಹೊತ್ತುಕೊಂಡಿದೆ.

    ಸಿಂಧ್ ಪ್ರಾಂತೀಯ ಗೃಹ ಸಚಿವ ಜಿಯಾ ಉಲ್ ಹಸನ್ ಲಾಂಜಾರ್  ಈ ಬಗ್ಗೆ ಮಾಹಿತಿ ನೀಡಿದ್ದು, ಸ್ಫೋ*ಟಕ್ಕೆ ಸುಧಾರಿತ ಸ್ಫೋ*ಟಕ ಸಾಧನವನ್ನು (ಐಇಡಿ) ಬಳಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ನಗರದ ಹಲವು ಪ್ರದೇಶಗಳಲ್ಲಿ ಸ್ಫೋ*ಟದ ಸದ್ದು ಕೇಳಿಬಂದಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿನ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಇದು ಚೀನಾದ ಪ್ರಜೆಗಳ ಮೇಲೆ ನಡೆದ ದಾ*ಳಿಯಾಗಿದ್ದು, ಸಾವಿರಾರು ಚೀನೀ ಕಾರ್ಮಿಕರು ಪಾಕಿಸ್ತಾನದಲ್ಲಿದ್ದಾರೆ. ಅವರಲ್ಲಿ ಹೆಚ್ಚಿನವರು ಬೀಜಿಂಗ್‌ನ ಬಹು-ಶತಕೋಟಿ-ಡಾಲರ್ ವೆಚ್ಚದ ಬೆಲ್ಟ್ ಮತ್ತು ರೋಡ್ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದು ದಕ್ಷಿಣ ಮತ್ತು ಮಧ್ಯ ಏಷ್ಯಾವನ್ನು ಚೀನಾದ ರಾಜಧಾನಿಯೊಂದಿಗೆ ಸಂಪರ್ಕಿಸುತ್ತದೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ : VIRAL VIDEO: ಶಾಲೆಗೆ ಹೋಗದೆ ಗಲ್ಲಿ ಮೂಲೆಯಲ್ಲಿ ನಿಂತು ಹೈಸ್ಕೂಲ್ ವಿದ್ಯಾರ್ಥಿಗಳ ರೊಮ್ಯಾನ್ಸ್

    ಈ ವರ್ಷದ ಮಾರ್ಚ್ ನಲ್ಲಿ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಆತ್ಮಹ*ತ್ಯಾ ಬಾಂ*ಬ್ ಸ್ಫೋ*ಟದಲ್ಲಿ ಐವರು ಚೀನೀ ಪ್ರಜೆಗಳು, ಸ್ಥಳೀಯರೊಬ್ಬರು ಸಾ*ವನ್ನಪ್ಪಿದ್ದರು.

    Continue Reading

    LATEST NEWS

    ವಿದ್ಯಾರ್ಥಿ ಸಾವು ಬೆನ್ನಲ್ಲೇ ಪ್ರವಾಸಿಗರಿಗೆ ಮುರುಡೇಶ್ವರ ಕಡಲ ತೀರಕ್ಕೆ ನೋ ಎಂಟ್ರಿ!

    Published

    on

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಮುಳುಗಿ ಸಾ*ವನ್ನಪ್ಪಿದ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

    ಭಾನುವಾರ ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜಿನ ಗೌತಮ್ (17) ಈಜಲು ಹೋಗಿ ಮೃ*ತಪಟ್ಟಿದ್ದನು. ಧನುಷ್ ಎಂಬಾತನನ್ನ ರಕ್ಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಪ್ರವಾಸಿಗರ ಹುಚ್ಚಾಟಕ್ಕೆ ನಿರ್ಬಂಧ ವಿಧಿಸಲು ಮುಂದಾಗಿದ್ದಾರೆ.

    ವೀಕೆಂಡ್ ಆದ್ದರಿಂದ ಹೆಚ್ಚು ಪ್ರವಾಸಿಗರು ಕಡಲ ತೀರಕ್ಕೆ ಆಗಮಿಸಿದ್ದು, ಸಮುದ್ರಕ್ಕೆ ಇಳಿಯದಂತೆ ಮುರುಡೇಶ್ವರ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಇದರಿಂದಾಗಿ ದಸರ ರಜೆ ವೀಕೆಂಡ್ ಎಂಜಾಯ್ ಮಾಡಲು ಬಂದ ಪ್ರವಾಸಿಗರ ಖುಷಿಗೆ ತಣ್ಣೀರು ಬಿದ್ದಿದ್ದು, ಕಡಲ ತೀರ ಖಾಲಿ ಹೊಡೆಯುತ್ತಿದೆ.

    Continue Reading

    LATEST NEWS

    Trending