Connect with us

DAKSHINA KANNADA

ಮಂಗಳೂರು: ವಾಮಂಜೂರಿನ ಜನರ ಬದುಕನ್ನೇ ಹೈರಾಣಾಗಿಸಿದ ಅಣಬೆ..!

Published

on

ಪಚ್ಚನಾಡಿ ಡಂಪಿಂಗ್‌ಯಾರ್ಡ್‌ನಿಂದ ಸಂಕಷ್ಟ ಅನುಭವಿಸಿರುವ ವಾಮಂಜೂರು ವ್ಯಾಪ್ತಿಯ ಜನರಿಗೆ ಈಗ ತಿರುವೈಲು ವಾರ್ಡ್‌ನ ಓಂಕಾರ ನಗರದಲ್ಲಿರುವ ಅಣಬೆ ಫ್ಯಾಕ್ಟರಿ ಇನ್ನೊಂದು ತಲೆನೋವು ತಂದೊಡ್ಡಿದೆ.

ಮಂಗಳೂರು: ಪಚ್ಚನಾಡಿ ಡಂಪಿಂಗ್‌ಯಾರ್ಡ್‌ನಿಂದ ಸಂಕಷ್ಟ ಅನುಭವಿಸಿರುವ ವಾಮಂಜೂರು ವ್ಯಾಪ್ತಿಯ ಜನರಿಗೆ ಈಗ ತಿರುವೈಲು ವಾರ್ಡ್‌ನ ಓಂಕಾರ ನಗರದಲ್ಲಿರುವ ಅಣಬೆ ಫ್ಯಾಕ್ಟರಿ ಇನ್ನೊಂದು ತಲೆನೋವು ತಂದೊಡ್ಡಿದೆ.

ಈ ಫ್ಯಾಕ್ಟರಿಯ ಸಮಸ್ಯೆಯ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದರೂ ಯಾವುದೇ ಕ್ರಮ ಆಗಿಲ್ಲ, ಫ್ಯಾಕ್ಟರಿ ನಿರಾತಂಕವಾಗಿ ಕಾರ್ಯಾಚರಿಸುತ್ತಿದೆ.

ವಾಮಂಜೂರು ಓಂಕಾರನಗರದಲ್ಲಿ ‘ವೈಟ್‌ಗ್ರೋ ಎಗ್ರಿ ಎಲ್‌ಎಲ್‌ಪಿ’ ಹೆಸರಿನ ಅಣಬೆ ಫ್ಯಾಕ್ಟರಿ ಕಳೆದ ಎರಡು ವರ್ಷದಿಂದ ಕಾರ್ಯಾಚರಿಸುತ್ತಿದ್ದು, ಇದರಿಂದ ಹೊರಸೂಸುವ ದುರ್ವಾಸನೆ ಸ್ಥಳೀಯ ಜನರ ನೆಮ್ಮದಿಯನ್ನು ಹಾಳು ಮಾಡುತ್ತಿದೆ.

ಈ ಫ್ಯಾಕ್ಟರಿ ವಿರೋಧಿಸಿ ಅಂಬೇಡ್ಕರ್‌ನಗರ, ಆಶ್ರಯನಗರ, ತೊೖಪೆಕಲ್ಲು, ಜ್ಯೋತಿನಗರ, ಪರಾರಿ, ಕೊಳಕೆಬೈಲು, ಅಮೃತನಗರ, ದೇವಿಪ್ರಸಾದ್‌ ಕಂಪೌಂಡ್‌, ತಿರುವೈಲು, ಕೆಲರೈಕೋಡಿ, ಕೆಎಚ್‌ಬಿ ಲೇಔಟ್‌ ಮತ್ತಿತರ ಪ್ರದೇಶಗಳ ನಿವಾಸಿಗರು ಬೀದಿಗಿಳಿದು ಪ್ರತಿಭಟನೆ ಮಾಡಿದರೂ ಆಡಳಿತದವರು ಕ್ರಮ ಕೈಗೊಂಡಿಲ್ಲ.

ಹಾಗಾಗಿ ಇಂದು ಬೆಳಗ್ಗೆ ಫ್ಯಾಕ್ಟರಿ ಎದುರು ‘ವೈಟ್‌ಗ್ರೋ ಎಗ್ರಿ ಎಲ್‌ಎಲ್‌ಪಿ ಫ್ಯಾಕ್ಟರಿ ಹೋರಾಟ ಸಮಿತಿ’ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗಿದೆ.

ವಾಮಂಜೂರಿನ ವ್ಯಾಪಾರಿಗಳು ಕೂಡಾ ತಮ್ಮ   ಅಂಗಡಿಗಳನ್ನು ಮುಚ್ಚಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಕುಡಿಯುವ ನೀರಿನ ಫ್ಯಾಕ್ಟರಿ ಎಂದು ಸ್ಥಳೀಯರಿಗೆ ನಂಬಿಸಿ ಬಳಿಕ ಅಣಬೆ ಫ್ಯಾಕ್ಟರಿಯಾಗಿ ಮಾರ್ಪಾಡು ಮಾಡಲಾಯಿತು ಎನ್ನುವುದು ಸ್ಥಳೀಯರ ಆರೋಪ.

ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳ ಬೇಕೆಂದು ಸ್ಥಳೀಯ ಕಾರ್ಪೊರೇಟರ್‌ ಹೇಮಲತಾ ರಘು ಸಾಲ್ಯಾನ್‌ ಒತ್ತಾಯಿಸಿದರು.

ಎಸಿಪಿ ಪರಮೇಶ್ವರ ಎ. ಹೆಗಡೆ ಅವರು ಸ್ಥಳಕ್ಕೆ ಭೇಟಿ ನೀಡಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಮನವಿ ಮಾಡಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲಿಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.

ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡ ಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending