DAKSHINA KANNADA
Mangaluru: ಎನ್.ಎಂ.ಪಿ.ಎ. ವತಿಯಿಂದ ಪಣಂಬೂರಿನಲ್ಲಿ ವಾಕಥಾನ್
Published
1 year agoon
By
Adminಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದ ವತಿಯಿಂದ ಜಾಗೃತ ತಿಳುವಳಿಕೆ ಸಪ್ತಾಹದ ಅಂಗವಾಗಿ ವಾಕಥಾನ್ ಪಣಂಬೂರಿನಲ್ಲಿ ನಡೆಯಿತು. ಕೇಂದ್ರ ಜಾಗೃತ ಆಯೋಗದ ಸೂಚನೆಯಂತೆ ‘ಸೇ ನೋ ಟು ಕರೆಪ್ಶನ್…ಕಮಿಟ್ ಟು ದ ನೇಶನ್’ ಎಂಬ ಧ್ಯೇಯವಾಕ್ಯದಡಿ 2023 ನೇ ಸಾಲಿನ ಜಾಗೃತ ತಿಳುವಳಿಕೆ ಸಪ್ತಾಹವನ್ನು ಆಚರಿಸಲಾಗುತ್ತದೆ.
ನವಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ಡಾ. ವೆಂಕಟ್ರಮಣ ಅಕ್ಕರಾಜು ಅವರು ಜಾಗೃತಿ ಸಪ್ತಾಹದ ವಾಕಥಾನ್ ಗೆ ಎನ್.ಎಂ.ಪಿ.ಎ. ಆಡಳಿತ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು. ಸುಮಾರು ಒಂದು ಕಿಲೋ ಮೀಟರ್ ಸಾಗಿದ ವಾಕಥಾನ್ ಪಣಂಬೂರು ಬೀಚ್‌ನಲ್ಲಿ ಮುಕ್ತಾಯಗೊಂಡಿತು. ಬಂದರು ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬಂದಿ ವಾಕಥಾನ್ ನಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಂದೇಶ ನೀಡಿದ ಡಾ. ವೆಂಕಟ್ರಮಣ ಅಕ್ಕರಾಜು, ಭ್ರಷ್ಟಾಚಾರದಿಂದ ದೂರವಿರುವಂತೆ ಜನರನ್ನು ಸಂವೇದನಾಶೀಲರನ್ನಾಗಿ ಮಾಡುವ ಉದ್ದೇಶದಿಂದ ವಿಚಕ್ಷಣಾ ಆಯೋಗವು ಜಾಗೃತ ತಿಳುವಳಿಕೆ ಸಪ್ತಾಹ ಆಚರಿಸುತ್ತಿದ್ದು, ಅದರ ಭಾಗವಾಗಿ ಈ ವಾಕಥಾನ್ ಹಮ್ಮಿಕೊಳ್ಳಲಾಗಿದೆ.
ಎನ್.ಎಂ.ಪಿ.ಎ. ಯಲ್ಲಿ ಜಾಗೃತ ತಿಳುವಳಿಕೆ ಸಪ್ತಾಹ ಕಾರ್ಯಕ್ರಮ ಅ. 20 ರಂದು ಆರಂಭಗೊಂಡಿದೆ. ಅಂದಿನಿಂದ ಮೊದಲ್ಗೊಂಡು ಜಾಗೃತಿ ಕಾರ್ಯಕ್ರಮ, ಪ್ರಬಂಧ, ಭಾಷಣ ಮತ್ತಿತರ ವಿವಿಧ ಸ್ಪರ್ಧೆಗಳು, ಶಾಲೆಗಳಲ್ಲಿ ತಿಳುವಳಿಕೆ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ದೇಶದ ಅಭಿವೃದ್ಧಿಗೆ ಭ್ರಷ್ಟಾಚಾರ ಬಹು ದೊಡ್ಡ ಅಡ್ಡಗಾಲು ಆಗಿದೆ. ಈ ಪೈಕಿ ರಾಜಕೀಯ, ಸಾಮಾಜಿಕ ಮತ್ತು ಅಧಿಕಾರಿಗಳ ಭ್ರಷ್ಟಾಚಾರ ಬಹು ಮುಖ್ಯವಾಗಿದೆ. ಈ ಮೂರೂ ಕ್ಷೇತ್ರಗಳಲ್ಲಿನ ಭ್ರಷ್ಟಾಚಾರವನ್ನು ಅಳಿಸಿ ಹಾಕುವ ಮೂಲಕ ಭ್ರಷ್ಟಾಚಾರ ಮುಕ್ತ ಭಾರತವನ್ನು ನಿರ್ಮಾಣ ಮಾಡ ಬೇಕಾಗಿದೆ ಎಂದು ಹೇಳಿದರು. ಜಾಗೃತ ತಿಳುವಳಿಕೆ ಸಪ್ತಾಹ 2023 ಪ್ರಯುಕ್ತ ಪಣಂಬೂರು ಬೀಚ್‌ನಲ್ಲಿ ಭ್ರಷ್ಟಾಚಾರ ತೊಲಗಲಿ, ಭಾರತ ದೇಶ ಬೆಳಗಲಿ ಎಂದು ಸಂದೇಶ ಸಾರುವ ಮರಳು ಶಿಲ್ಪ ಎಲ್ಲರ ಗಮನ ಸೆಳೆಯಿತು.
DAKSHINA KANNADA
ಬಡವರ ಧ್ವನಿಯಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕೆಲಸ ಮಾಡುತ್ತಿದೆ : ಐಕಳ ಹರೀಶ್ ಶೆಟ್ಟಿ
Published
19 hours agoon
04/01/2025By
NEWS DESK4ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ. ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.
ಬಂಟ್ಸ್ ಹಾಸ್ಟೆಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಸಹಾಯಹಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಂಟ ಸಮಾಜ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯಪ್ರವೃತ್ತವಾಗುತ್ತದೆ. ಅದೇ ರೀತಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇತರೆ ಸಮಾಜದವರಿಗೂ ನೆರವಿನ ಹಸ್ತ ನೀಡುತ್ತಿದೆ ಎಂದರು.
ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವಿಕವಾಗಿ ಮಾತನಾಡಿ, 37 ವರ್ಷಗಳ ಇತಿಹಾಸ ಇರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹಲವು ಕಾರ್ಯಗಳು ನಿರಂತರವಾಗಿ ನಡೆದಿದೆ. ದಾನಿಗಳ ನೆರವಿನಿಂದ ಮತ್ತು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳ ಶ್ರಮದಿಂದ ಸಹಾಯಹಸ್ತ ನೀಡಲು ಸಾಧ್ಯವಾಯಿತು. ಈ ಬಾರಿ 16 ಲಕ್ಷ ರೂಪಾಯಿ ಹಣವನ್ನು ವಿತರಿಸಲಾಯಿತು ಎಂದರು. ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ, ಒಕ್ಕೂಟಕ್ಕೆ ಯಾರೇ ಅರ್ಜಿ ಸಲ್ಲಿಸಿದರೂ ಅರ್ಜಿಯನ್ನು ತಿರಸ್ಕರಿಸದೆ ಪರಿಶೀಲಿಸಿ ನೆರವನ್ನು ನೀಡಿದೆ ಎಂದರು.
ಇದನ್ನೂ ಓದಿ : ಆಕಾಶದಿಂದ ಬಿತ್ತು 500 ಕೆಜಿ ತೂಕದ ಹೊಳೆಯುವ ರಿಂಗ್..! ಏನಿದು ವಿಚಿತ್ರ..?
ಮುಖ್ಯ ಅತಿಥಿಯಾಗಿ ಆಗಮಿಸಿದ ಆಸ್ಟ್ರೇಲಿಯಾದ ಉದ್ಯಮಿ ದಯಾನಂದ ಶೆಟ್ಟಿ ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಚಂದ್ರಹಾಸ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಜಪ್ಪಿನಮೊಗರು ಬಂಟರ ಸಂಘದ ಅಧ್ಯಕ್ಷ ಸತ್ಯಪ್ರಸಾದ್ ಶೆಟ್ಟಿ, ಸುಧಾಕರ ಪೂಂಜ ಸುರತ್ಕಲ್, ಹರ್ಷಕುಮಾರ್ ರೈ, ಗೀತಾ ರೈ, ಕೊಲ್ಲಾಡಿ ಬಾಲಕೃಷ್ಣ ರೈ ಉಪಸ್ಥಿತರಿದ್ದರು.
ಉದಯ ಕುಮಾರ್ ಪ್ರಾರ್ಥನೆಗೈದರು. ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ನಿರ್ವಹಿಸಿದರು. ಜತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ ವಂದಿಸಿದರು.
ಬಂಟ್ವಾಳ : ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ದಾಳಿ ನಡೆಸಿ 30 ಲಕ್ಷ ರೂಪಾಯಿ ದರೋಡೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಈ ಘಟನೆ ನಡೆದಿದೆ.
ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿದ ಖದೀಮರು ಬರೋಬ್ಬರಿ 30 ಲಕ್ಷ ಲೂಟಿ ಮಾಡಿ ಪರಾರಿಯಾಗಿದ್ದಾರೆ. ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡ ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡು ಗಂಟೆಗಳವರೆಗೆ ತನಿಖೆ ನಡೆಸಿ, ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ : ಟಿಆರ್‌ಪಿಯಲ್ಲಿ ಬಿಗ್‌ಬಾಸನ್ನು ಹಿಂದಿಕ್ಕಿದ ಸರಿಗಮಪ
ಸ್ಥಳಕ್ಕೆ ದ.ಕ ಜಿಲ್ಲಾ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲು ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ.
ಮಂಗಳೂರು: “ಮಂಗಳೂರಿನಲ್ಲಿ ಓಡಾಡುವ ಖಾಸಗಿ ಬಸ್‌ಗಳ ಟಿಕೆಟ್ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ” ಎಂದು ಕೆನರಾ ಬಸ್ ಮಾಲಕರ ಸಂಘ ನಿರ್ಧರಿಸಿದೆ.
ಅಧ್ಯಕ್ಷ ರಾಜವರ್ಮ ಬಲ್ಲಾಳ್ ಸರಕಾರಿ ಬಸ್ ಟಿಕೆಟ್ ದರ ಏರಿಸಲು ಸರಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, “ರಾಜ್ಯ ಸರಕಾರದ ಶಕ್ತಿ ಯೋಜನೆ ಆರಂಭದ ಬಳಿಕ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ. ವಾಹನದ ಬಿಡಿ ಭಾಗಗಳು, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಕೋವಿಡ್ ಬಳಿಕ ಬಸ್ ಮಾಲಕರೂ ಸಂಕಷ್ಟದಲ್ಲಿದ್ದು, ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ. ಆದರೆ ಸದ್ಯಕ್ಕೆ ಆ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು” ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ ಪ್ರತಿಕ್ರಿಯಿಸಿ “ಮಂಗಳೂರಿನಲ್ಲಿ ಸಂಚರಿಸುವ ಸಿಟಿ ಬಸ್‌ಗಳಲ್ಲಿ ಟಿಕೆಟ್ ದರ ಏರಿಕೆಯ ಬಗ್ಗೆ ಚಿಂತನೆ ನಡೆಸಿಲ್ಲ. ಸದ್ಯದ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಅವಲೋಕಿಸಿ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು” ಎಂದು ಹೇಳಿದ್ದಾರೆ.
LATEST NEWS
ಬಡವರ ಧ್ವನಿಯಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕೆಲಸ ಮಾಡುತ್ತಿದೆ : ಐಕಳ ಹರೀಶ್ ಶೆಟ್ಟಿ
ಉಡುಪಿ: ಬಾಡಿಗೆ ರೂಂ ಬಳಿ ಕುಸಿದು ಬಿದ್ದು ಯುವತಿ ಸಾವು
ನಟ ಶಿವರಾಜ್ ಕುಮಾರ್ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಕಸದ ಲಾರಿಗೆ ಅಕ್ಕ-ತಂಗಿ ಬಲಿ
BBK11: ಮೈ ಮರೆತು ಮಾತಾಡಿದ ತ್ರಿವಿಕ್ರಮ್, ಮಂಜು, ಗೌತಮಿ; ಮೂವರಿಗೂ ಬಿಗ್ ಶಾಕ್!
6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ
Trending
- DAKSHINA KANNADA4 days ago
ಬೊಜ್ಜು ಕರಗಿಸಲು ವ್ಯಾಯಾಮದ ಅಗತ್ಯ ಇಲ್ಲ : ಮಾತ್ರೆ ತಿಂದರೆ ಸಾಕು..!
- BIG BOSS7 days ago
ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಸ್ಪರ್ಧಿ ಇವರೇ ನೋಡಿ..!
- DAKSHINA KANNADA2 days ago
ಜಮೀನು ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್..!
- LATEST NEWS5 days ago
ಮೈಸೂರು: ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಪ್ರತ್ಯಕ್ಷ; ಉದ್ಯೋಗಿಗಳಿಗೆ ಮನೆಯಿಂದ ಕೆಲಸಕ್ಕೆ ಸೂಚನೆ