Connect with us

    DAKSHINA KANNADA

    Mangaluru: ಹಿಂದೂ ದೇವರ ಬಗ್ಗೆ ಅಶ್ಲೀಲ ಸಂದೇಶ – ಆರೋಪಿ ಬಂಧನ..!

    Published

    on

    ಹಿಂದೂ ದೇವರ ಬಗ್ಗೆ ಅಶ್ಲೀಲವಾದ ಕಮೆಂಟ್ ಮಾಡಿದ್ದ ಆರೋಪಿಯನ್ನು ನಗರದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಮಂಗಳೂರು: ಹಿಂದೂ ದೇವರ ಬಗ್ಗೆ ಅಶ್ಲೀಲವಾದ ಕಮೆಂಟ್ ಮಾಡಿದ್ದ ಆರೋಪಿಯನ್ನು ನಗರದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ನಗರದ ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

    ಮೊಹಮ್ಮದ್ ಸಲ್ಮಾನ್  ಆರೋಪಿ  ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಹಿಂದೂ ದೇವರ ಬಗ್ಗೆ  ಅಶ್ಲೀಲವಾಗಿ ಕಮೆಂಟ್ ಮಾಡಿದ್ದ.

    ಈ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು  ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಯನ್ನು ನಗರದ 7ನೇ ಜೆ.ಎಂ.ಎಫ್ ‌ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

    ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಸೂಚನೆಯಂತೆ ಸೆನ್ ಇನ್‌ಸ್ಪೆಕ್ಟರ್ ಪ್ರಕಾಶ್ ಕಾರ್ಯಾಚರಣೆ ನಡೆಸಿದ್ದರು.

    DAKSHINA KANNADA

    ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ವಾಹನ ಬೆಂ*ಕಿಗಾಹುತಿ !

    Published

    on

    ಮಂಗಳೂರು: ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನವೊಂದು ಬೆಂ*ಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.

    ‘ಫಲ್ಮೀರ್‌ನ ಅಥೆನಾ ಆಸ್ಪತ್ರೆ ಬಳಿ ಸಾಗುತ್ತಿದ್ದಾಗ ಬೊಲೆರೊ ವಾಹನದ ಬಾನೆಟ್‌ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣವೇ ವಾಹನವನ್ನು ನಿಲ್ಲಿಸಿದ ಚಾಲಕ ಅದರಲ್ಲಿದ್ದ ಆರು ಮಂದಿ ಪ್ರಯಾಣಿಕನನ್ನು ಕೆಳಗಿಳಿಸಿದ್ದ. ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ವಾಹನವನ್ನು ಆವರಿಸಿಕೊಂಡಿತು. ಸ್ಥಳೀಯರು ತಕ್ಷಣವೇ ಪಾಂಡೇಶ್ವರದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು. ಅವರು ಬಂದು ಬೆಂಕಿ ನಂದಿಸಿದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.

    ‘2015ನೇ ಸಾಲಿನಲ್ಲಿ ನೋಂದಣಿಯಾಗಿರುವ ಈ ವಾಹನವು ಬಾವುಟಗುಡ್ಡೆಯಲ್ಲಿರುವ ಜಾಸ್ ಆಲುಕ್ಕಾಸ್ ಜ್ಯುವೆಲ್ಲರಿ ಮಳಿಗೆಗೆ ಸೇರಿದ್ದಾಗಿದೆ. ಮಳಿಗೆಯ ಸಿಬ್ಬಂದಿಯನ್ನು ಕರೆದೊಯ್ಯುವಾಗ ಈ ಅವಘಡ ಸಂಭವಿಸಿದೆ’ ಎಂದು ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    Continue Reading

    Ancient Mangaluru

    ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು

    Published

    on

    ಮಂಗಳೂರು : ವೆಣೂರಿನ ಬರ್ಕಜೆ ಸಮೀಪದಲ್ಲಿರುವ ಸ್ನೇಹಿತನ ಮನೆಗೆ ತೆರಳಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಮದ್ಯಾಹ್ನದ ಊಟ ಮುಗಿಸಿ ಸಮೀಪದ ನದಿಗೆ ಈಜಲು ತೆರಳಿದ್ದ ಮೂವರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾ*ಣ ಕಳೆದುಕೊಂಡಿದ್ದಾರೆ.


    ಬೆಳ್ತಂಗಡಿ ತಾಲೂಕಿನ ವೇಣೂರಿನ ಮೂಡಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಮೂಡಬಿದ್ರೆಯ ಲಾರೆನ್ಸ್ 20 ವರ್ಷ, ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ 19 ವರ್ಷ, ಹಾಗೂ ಬಂಟ್ವಾಳದ ವಗ್ಗ ಗ್ರಾಮದ ಜೈಸನ್ 19 ವರ್ಷ ಈ ಮೂವರು ಹೋಗಿದ್ದಾರೆ. ಮದ್ಯಾಹ್ನದ ಊಟವನ್ನು ಮುಗಿಸಿದ ಇವರು ಜೊತೆಯಾಗಿ ಬರ್ಕಜೆ ಸಮೀಪದ ಡ್ಯಾಂ ಬಳಿ ನದಿಯಲ್ಲಿ ಈಜಲು ಹೋಗಿದ್ದಾರೆ. ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಮೂವರೂ ನೀರುಪಾಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಿಯರು ರಕ್ಷಣೆಗೆ ನದಿಗೆ ದುಮಿಕಿದ್ದಾರೆ. ಆದ್ರೆ ಮೂವರನ್ನು ನದಿಯಿಂದ ಮೇಲೆತ್ತುವ ಮೊದಲೇ ಇ*ಹಲೋಕ ತ್ಯಜಿಸಿದ್ದಾರೆ. ಮೂವರೂ ಮಂಗಳೂರಿನ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.

    Continue Reading

    BANTWAL

    ಬಂಟ್ವಾಳ: ಅಟೋ ಮತ್ತು ಬೈಕ್ ನಡುವೆ ಅ*ಪಘಾತ; ಮೂವರು ಗಂ*ಭೀರ

    Published

    on

    ಬಂಟ್ವಾಳ : ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪದ ಕಾಡುಮಠದ ಬಳಿ ಅಟೋ ಹಾಗೂ ಬೈಕ್ ಒಂದರ ನಡುವೆ ಅ*ಪಘಾತ ಸಂಭವಿಸಿ ಮೂವರು ಗಾ*ಯಗೊಂಡಿದ್ದಾರೆ.

    ಸಾಲೆತ್ತೂರಿನ ಅಟೋ ಚಾಲಕ ರಫೀಕ್, ಬೈಕ್ ಸವಾರರಾದ ಕಡಂಬು ನಿವಾಸಿ ಉಮ್ಮರ್ ಮತ್ತು ರಾದುಕಟ್ಟೆ ನಿವಾಸಿ ಅಬೂಬಕ್ಕರ್ ಅವರು ಗಾ*ಯಗೊಂಡಿದ್ದಾರೆ. ಅ*ಪಘಾತದ ತೀವ್ರತೆಗೆ ಮೂವರಿಗೂ ಗಂಭೀರ ಗಾ*ಯಗಳಾಗಿದ್ದು, ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿತ್ತು. ಇದೇ ವೇಳೆ ಸ್ಥಳದಲ್ಲಿದ್ದ ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಗಾ*ಯಾಳುಗಳ ನೆರವಿಗೆ ಧಾವಿಸಿ ಬಂದಿದ್ದಾರೆ.

    ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಮೂವರು ಗಾ*ಯಾಳುಗಳು ಕೂಡಾ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿದ್ದು, ಓರ್ವನ ಸ್ಥಿತಿ ಗಂ*ಭೀರವಾಗಿದೆ ಎಂದು ಮಾಹಿತಿ ಲಭಿಸಿದೆ. ಈ ಅ*ಪಘಾತದ ಕುರಿತಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending