Connect with us

DAKSHINA KANNADA

Mangaluru: ಅಧಿಕಾರಿಗಳು ಜಿಲ್ಲೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ-ಯು.ಟಿ. ಖಾದರ್‌

Published

on

ತಪಸ್ಯಾ ಫೌಂಡೇಶನ್‌ ವತಿಯಿಂದ ನಡೆಸಲು ಉದ್ದೇಶಿಸಿರುವ ಮಂಗಳೂರು ಬೀಚ್‌ ಫೆಸ್ಟಿವಲ್‌ ಮತ್ತು ಮಂಗಳೂರು ಟ್ರಯೊತ್ಲಾನ್‌ ಬಗೆಗಿನ ಪೂರ್ವ ಭಾವಿ ಸಭೆ ಸೆ.20ರಂದು ಮಂಗಳೂರಿನಲ್ಲಿ ನಡೆಯಿತು.

ಮಂಗಳೂರು: ತಪಸ್ಯಾ ಫೌಂಡೇಶನ್‌ ವತಿಯಿಂದ ನಡೆಸಲು ಉದ್ದೇಶಿಸಿರುವ ಮಂಗಳೂರು ಬೀಚ್‌ ಫೆಸ್ಟಿವಲ್‌ ಮತ್ತು ಮಂಗಳೂರು ಟ್ರಯೊತ್ಲಾನ್‌ ಬಗೆಗಿನ ಪೂರ್ವ ಭಾವಿ ಸಭೆ ಸೆ.20ರಂದು ಮಂಗಳೂರಿನಲ್ಲಿ ನಡೆಯಿತು.

ಆರೋಗ್ಯ ಖಾತೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂ ರಾವ್‌ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ದಿನೇಶ್‌ ಗುಂಡೂ ರಾವ್‌,  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 27 ರಂದು ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ನಡೆಯುವ ಕಾರ್ಯಾಗಾರದಲ್ಲಿ ಜಿಲ್ಲೆಯಲ್ಲಿ ಮುಂದಿನ ಒಂದು ವರ್ಷ ಅವಧಿಯಲ್ಲಿ ಕೈಗೊಳ್ಳುವ ಪ್ರವಾಸೋದ್ಯಮ ಚಟುವಟಿಕೆಗಳ ಬಗ್ಗೆ ಕ್ರಿಯಾ ಯೋಜನೆ ತಯಾರಿಸಲಾಗುವುದು ಎಂದರು.

ತಪಸ್ಯಾ ಫೌಂಡೇಶನ್‌ ವತಿಯಿಂದ ನಡೆಸಲು ಉದ್ದೇಶಿಸಿರುವ ಮಂಗಳೂರು ಬೀಚ್‌ ಫೆಸ್ಟಿವಲ್‌ ಮತ್ತು ಮಂಗಳೂರು ಟ್ರಯೊತ್ಲಾನ್‌ ಪ್ರವಾಸೋದ್ಯಮ ಅಭಿವೃದ್ದಿಗೆ ಪೂರಕವಾಗಿದೆ.

ಇದನ್ನು ಆಂತಾರಾಷ್ಟ್ರೀಯ ಗುಣ ಮಟ್ಟದಲ್ಲಿ ನಡೆಸಲು ಸರಕಾರ ಮತ್ತು ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸ್ಪೀಕರ್‌ ಯು.ಟಿ. ಖಾದರ್‌,  ಕ್ಯಾನ್ಸರ್‌ ರೋಗಿಗಳ ಆರೈಕೆ ಮಾಡುತ್ತಿರುವ ತಪಸ್ಯಾ ಫೌಂಡೇಶನ್‌ ಕೆಲಸವನ್ನು ಶ್ಲಾಘಿಸಿದರು.

ಫೌಂಡೇಶನ್‌ ಹಮ್ಮಿಕೊಂಡಿರುವ ಬೀಚ್‌ ಫೆಸ್ಟಿವಲ್‌ ಮತ್ತು ಟ್ರಯೊತ್ಲಾನ್‌ ಕಾರ್ಯಕ್ರಮದಿಂದ ಪ್ರವಾಸೋದ್ಯಮ ಅಭಿವೃದ್ಧಿಯ ಜತೆಗೆ ಕ್ಯಾನ್ಸರ್‌ ಜಾಗೃತಿಯೂ ಆಗಲಿದೆ.

ಜನರು ಇದಕ್ಕೆ ಸಹಕಾರ ನೀಡಬೇಕೆಂದರು.

ಮಂಗಳೂರಿಗೆ ಅಧಿಕಾರಿಗಳು ಬರಲು ಒಪ್ಪುವುದಿಲ್ಲ. ಇಲ್ಲಿಗೆ ಬಂದವರು ವರ್ಗಾವಣೆಗಾಗಲು ಹಿಂದೇಟು ಹಾಕುತ್ತಾರೆ.

ನಮ್ಮ ನಮ್ಮ ಟಿಆರ್‌ಪಿ ಅಥವಾ ರಾಜಕೀಯದ ಟಿಆರ್‌ಪಿ ಹೆಚ್ಚಳ ನಮಗೆ ಮುಖ್ಯವಲ್ಲ. ನಮಗೆ ನಮ್ಮ ಜಿಲ್ಲೆಯ ಟಿ.ಆರ್‌.ಪಿ. ಮೇಲೆ ಹೋಗಬೇಕು.

ಮುಂದಿನ ಪೀಳಿಗೆಯ ಹಿತ ದೃಷ್ಟಿಯಿಂದ ಜಿಲ್ಲೆಯ ಫೇಸ್‌ ವ್ಯಾಲ್ಯೂ ಬದಲಾವಣೆ ಆಗಲೇಬೇಕು.

ಮಂಗಳೂರು ಟ್ರಯೊತ್ಲಾನ್‌ ನಿಂದ ಜಿಲ್ಲೆಯ ಫೇಸ್‌ ವ್ಯಾಲ್ಯೂ ಬದಲಾವಣೆ ಆಗಲಿದೆ ಎಂದು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್‌, ಡಾ. ಭರತ್‌ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ಮತ್ತು ಇತರ ಆಧಿಕಾರಿಗಳು, ತಪಸ್ಯಾ ಫೌಂಡೇಶನ್‌ ಪದಾಧಿಕಾರಿಗಳಾದ ನವೀನ್‌ ಹೆಗ್ಡೆ, ಸಬಿತಾ ಶೆಟ್ಟಿ ಉಪಸ್ಥಿತರಿದ್ದರು.

ತಪಸ್ಯಾ ಫೌಂಡೇಶನ್‌ ಟ್ರಸ್ಟಿ ಡಾ. ಆಶಾ ಜ್ಯೋತಿ ರೈ ಸ್ವಾಗತಿಸಿ, ಮಂಗಳೂರು ಟ್ರಯೊತ್ಲಾನ್‌ 2024 ಫೆಬ್ರವರಿ 18 ರಂದು ನಡೆಯಲಿದೆ.

ಸ್ವಿಮತಾನ್‌, ಸೈಕ್ಲೊತಾನ್‌ ಮತ್ತು ಡ್ರೀಮ್‌ ರನ್‌ ಇವೆಂಟ್‌ ಗಳನ್ನು ಒಳಗೊಂಡ ಈ ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

Click to comment

Leave a Reply

Your email address will not be published. Required fields are marked *

Ancient Mangaluru

ಮೇ.10 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನೆ

Published

on

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಷ್ಟ್ರೀಯ ಪುರಸ್ಕಾರ ಪಡೆದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನಾ ಸಮಾರಂಭ ಮೇ 10 ರಂದು ಮಧ್ಯಾಹ್ನ 12 ಗಂಟೆಗೆ ಮುಲ್ಕಿಯ ಲಘುವಿ ಕಾಂಪ್ಲೆಕ್ಸ್ ಮುಖ್ಯರಸ್ತೆ ಪಕ್ಷಿಕೆರೆಯಲ್ಲಿ ನಡೆಯಲಿದೆ.

ಮುಲ್ಕಿ ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಪಕ್ಷಿಕೆರೆ ಸಂತ ಜುದರ ಪುಣ್ಯಕ್ಷೇತ್ರ ಧರ್ಮಗುರು ಅತಿ ವಂದನೀಯ ಗುರುಗಳು ಮೆಲ್ವಿನ್ ನೊರೊಹ್ನಾ ದ್ವೀಪ ಪ್ರಜ್ವಲಿಸಲಿದ್ದಾರೆ. ಪಕ್ಷಿಕೆರೆ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಶ್ರೀ ಕೆ.ಸೀತಾರಾಮ್ ಶೆಟ್ಟಿ, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಗಣಕೀಕೃತ ಬ್ಯಾಂಕಿಂಗ್ ಗೆ ಚಾಲನೆ ನೀಡಲಿದ್ದಾರೆ. ಪಕ್ಷಿಕೆರೆ, ಎಸ್ ಕೋಡಿ, ಬಿಲ್ಲವ ಸಂಘದ ಅಧ್ಯಕ್ಷ ನವೀನ್ ಹರಿಪಾದೆ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ಎರಡನೇ ಸ್ಥಾನ

ಸಮಾಜಸೇವಕ ಧನಂಜಯ ಶೆಟ್ಟಿಗಾರ್ ಇ-ಮುದ್ರಾಂಕ ಸೇವೆಗೆ, ಹಳೆಯಂಗಡಿ ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಆವರ್ತನ ಠೇವಣಿಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಸ್ತೂರಿ ಪಂಜ ಉಳಿತಾಯ ಖಾತೆಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ಕಟ್ಟಡದ ಮಾಲಕ ಶ್ರೀನಿವಾಸ ಕೋಟ್ಯಾನ್ ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸರ್ವರಿಗೂ ಆದರದ ಸ್ವಾಗತ ಕೋರಲಾಗಿದೆ.

Continue Reading

DAKSHINA KANNADA

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ಎರಡನೇ ಸ್ಥಾನ

Published

on

ಮಂಗಳೂರು:  2023- 24ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.  ಈ ಪೈಕಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಹಾಜರಾಗಿದ್ದರು. 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.

ಇದೀಗ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆ  ಶೇಕಡಾ 94 ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ. 92.12 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಹೊಂದಿದೆ. ಶಿವಮೊಗ್ಗ ಶೇ.88.67 ಫಲಿತಾಂಶದಿಂದ  ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

ರಾಜ್ಯಕ್ಕೆ ಬಾಗಲಕೋಟೆ ಮುಧೋಳಿನ ಅಂಕಿತಾ 625 ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. ದಕ್ಷಿಣ ಕನ್ನಡ ಚಿನ್ಮಯ್ 624 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಮುಂದೆ ಓದಿ..; ಮಂಗಳೂರು: ಸರಕಾರಿ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!!

ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸ ಬಹುದು. kseab.karnataka.gov.in ಅಥವಾ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸ ಬಹುದಾಗಿದೆ.

Continue Reading

DAKSHINA KANNADA

ಮಂಗಳೂರು: ಸರಕಾರಿ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!!

Published

on

ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20 ವ) ಎಂಬವರು ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಮೇ.8ರಂದು ಬೆಳಿಗ್ಗೆ 10.30ರ ಸುಮಾರಿಗೆ ನಡೆದಿದೆ. ನಗರದ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿದ್ದ ನಿತೇಶ್ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.

suicide

ಮುಂದೆ ಓದಿ..; PUTTUR : ಮದುವೆ ಸಮಾರಂಭದಲ್ಲಿ ಹುಡುಗಿಯರ ಫೋಟೋ ತೆಗೆದವರಿಗೆ ಬಿತ್ತು ಧರ್ಮದೇಟು!

ಇವರು ಉಡುಪಿ ಜಿಲ್ಲೆಯ ನಿವಾಸಿಯಾಗಿದ್ದು, ಕಳೆದ 2 ವರ್ಷಗಳಿಂದ ಮಂಗಳೂರು ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ತಂದೆ ಸುಮಾರು 5 ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಈ ಬಗ್ಗೆ ಆಕೆಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

LATEST NEWS

Trending