Connect with us

    DAKSHINA KANNADA

    ಉಪ್ಪಿನಂಗಡಿ ಸಹೋದರರ ಕಿಡ್ನ್ಯಾಪ್ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು..! ಕೃತ್ಯದ ಹಿಂದೆ ಗೋಲ್ಡ್ ಮಾಫಿಯಾದ ಶಂಕೆ..!

    Published

    on

    ಮಂಗಳೂರು: ಉಪ್ಪಿನಂಗಡಿಯ ಸಹೋದರರ ಕಿಡ್ನ್ಯಾಪ್ ಪ್ರಕರಣವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಮಂಗಳೂರು ಹೊರ ವಲಯದ ಅರ್ಕುಳದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದ ಬೆನ್ನತ್ತಿ ಹೋದ ಪೊಲೀಸರಿಗೆ ಅಪರಹರಣದ ಪ್ರಕರಣ ಲಿಂಕ್ ಆಗಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. 

    ಈ ಅಪರಣದಲ್ಲಿ ಕುಮ್ಮಕ್ಕು ನೀಡಿರುವ ರೌಡಿಶೀಟರ್ ಒಬ್ಬನ ಬಂಧನಕ್ಕೆ ಬಲೆ ಬೀಸಲಾಗಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.

    ಉಪ್ಪಿನಂಗಡಿಯ ಅಬೂಬಕ್ಕರ್ ಸಿದ್ದಿಕ್ ಯಾನೆ ಜೆಸಿಬಿ ಸಿದ್ದಿಕ್ (39), ಬಂಟ್ವಾಳದ ಕಲಂದರ್ ಶಾಫಿ ಗಡಿಯಾರ (22), ಬಂಟ್ವಾಳದ ಇರ್ಫಾನ್ (38), ಪಾಂಡೇಶ್ವರದ ಮೊಹಮ್ಮದ್ ರಿಯಾಜ್ (33) ಮತ್ತು ಬೆಳ್ತಂಗಡಿಯ ಮೊಹಮ್ಮದ್ ಇರ್ಷಾದ್ (28) ಬಂಧಿತ ಆರೋಪಿಗಳಾಗಿದ್ದಾರೆ.

    ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಬಳಿ ವಿದೇಶದಿಂದ ಬಂದ ಸಹೋದರರಿಬ್ಬರನ್ನು ಗುರುವಾರ ಅಪಹರಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಅವರಲ್ಲಿ ತಮ್ಮನನ್ನು ಒತ್ತೆ ಇರಿಸಿಕೊಂಡು ಹಣ ತರುವಂತೆ ಬೇಡಿಕೆಯಿಟ್ಟು ಅಣ್ಣನನ್ನು ಮನೆಗೆ ಕಳುಹಿಸಿದ್ದರು.

    ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಣ್ಣ ನಿಜಾಮುದ್ದೀನ್ ಮತ್ತು ತಮ್ಮ ಶಾರುಕ್ ನನ್ನು ಅಪಹರಿಸಲಾಗಿತ್ತು.

    ಗುರುವಾರ ತಡರಾತ್ರಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಅರ್ಕುಳ ಗ್ರಾಮದ ತುಪ್ಪೆಕಲ್ಲು ಎಂಬಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ಎಂಬವರು ಗಸ್ತು ತಿರುಗುತ್ತಿದ್ದರು.

    ಈ ವೇಳೆ ರೈಲ್ವೆ ಹಳಿ ಬಳಿ ಕೆಲವರು ಮಾತನಾಡುತ್ತಿದ್ದದ್ದನ್ನು ಕಂಡು ವಿಚಾರಿಸಲು ಹೋದಾಗ ಅವರು ಪೊಲೀಸರ ಮೇಲೆ ಕಲ್ಲು ಎಸೆದು ಹಲ್ಲೆ ಮಾಡಿ, ಕಾರು ಹಾಯಿಸಿ ಕೊಲೆ ಯತ್ನ ನಡೆಸಿದ್ದರು.

    ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಮಂಗಳೂರು ಪೊಲೀಸರು ಸಿದ್ದಿಕ್, ಕಲಂದರ್ ಶಾಫಿ ಗಡಿಯಾರ, ಇರ್ಫಾನ್ ಮತ್ತು ಮೊಹಮ್ಮದ್ ಇರ್ಷಾದ್ ನನ್ನು ದಸ್ತಗಿರಿ ಮಾಡಿದ್ದರು.

    ಇವರನ್ನು ವಿಚಾರಣೆ ಮಾಡುವ ವೇಳೆ ಉಪ್ಪಿನಂಗಡಿ ಕಿಡ್ನಾಪ್ ರಹಸ್ಯ ಹೊರಬಿದ್ದಿದೆ. ಈ ಅರೋಪಿಗಳನ್ನು ಹಿಡಿಯುವ ವೇಳೆ ಅವರ ಜೊತೆ ಉಪ್ಪಿನಂಗಡಿಯಲ್ಲಿ ಕಿಡ್ನಾಪ್ ಆಗಿದ್ದ ಶಾರುಕ್ ಕೂಡಾ ಜೊತಗಿದ್ದ.

    ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಎಲ್ಲಾ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಕಿಡ್ನಾಪ್ ಆಗಿದ್ದ ಶಾರುಕ್ ನ ಸೋದರ ಸಂಬಂಧಿ ಶಾರುಕ್ ಎಂಬಾತ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಎರಡು ತಿಂಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಗೋಲ್ಡ್ ಬಿಸ್ಕಿಟ್ ತಲುಪಿಸುವ ಕೆಲಸ ವಹಿಸಿಕೊಂಡಿದ್ದ.

    ಆದರೆ ಸುಮಾರು 40 ಲಕ್ಷ ರೂ ಮೌಲ್ಯದ ಚಿನ್ನದ ಗಟ್ಟಿಯನ್ನು ಆತ ತಲುಪಿಸರಲಿಲ್ಲ.

    ಹೀಗಾಗಿ ಇದಕ್ಕೆ ಸಂಬಂಧ ಪಟ್ಟ ದಕ್ಷಿಣ ಕನ್ನಡ ಮೂಲದ ಬೆಂಗಳೂರು ಆಸುಪಾಸಿನಲ್ಲಿ ವಾಸವಿರುವ ರೌಡಿ ಶೀಟರ್ ಒಬ್ಬನ ಸೂಚನೆಯಂತೆ ಆರೋಪಿಗಳು ಕೃತ್ಯದಲ್ಲಿ ಪಾಲ್ಗೊಂಡಿದ್ದರು.

    ಈ ಪ್ರಕರಣಕ್ಕೆ ಗೋಲ್ಡ್ ಮಾಫಿಯಾ ನಂಟು ಇರುವ ಬಗ್ಗೆ ಅನುಮಾನಗಳಿದ್ದು, ಈ ದಿಕ್ಕಿನಲ್ಲಿಯೂ ತನಿಖೆ ನಡೆಸಲಾಗುವುದು ಎಂದು ಆಯುಕ್ತರು ಹೇಳಿದರು.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending