LATEST NEWS
Mangaluru: ಆಫ್ರಿಕನ್ ಹಂದಿಜ್ವರ ಹರಡದಂತೆ ಮುನ್ನೆಚ್ಚರಿಕೆ- ಜಿಲ್ಲಾಡಳಿತ ಸೂಚನೆ..!
ಕೇರಳದಲ್ಲಿ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ರೋಗ ದೃಡಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೋಗ ಹರಡದಂತೆ ಅಗತ್ಯ ಮುನ್ನೆಚ್ಛರಿಕೆ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಜಿಲ್ಲೆಯ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಮಂಗಳೂರು: ಕೇರಳದಲ್ಲಿ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ರೋಗ ದೃಡಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೋಗ ಹರಡದಂತೆ ಅಗತ್ಯ ಮುನ್ನೆಚ್ಛರಿಕೆ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಜಿಲ್ಲೆಯ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಆಫ್ರಿಕನ್ ಹಂದಿ ಜ್ವರವು ಸಾಕು ಮತ್ತು ಕಾಡು ಹಂದಿಗಳಲ್ಲಿ ವೈರಾಣುನಿಂದ ಬರುವ ಸಾಂಕ್ರಮಿಕ ರೋಗವಾಗಿದ್ದು, ಸಾವಿನ ಪ್ರಮಾಣವು ಶೇ.100 ರವರೆಗೂ ತಲುಪ ಬಹುದಾಗಿದೆ.
ಈ ರೋಗಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಹಾಗೂ ಲಸಿಕೆ ಇಲ್ಲದಿರುವುದರಿಂದ ನಿಯಮಾನುಸಾರ ರೋಗ ದೃಢೀಕರಣಗೊಂಡ ಪ್ರದೇಶದ 1 ಕಿ.ಮೀ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ವಧೆ ಮಾಡಬೇಕಾಗಿದೆ.
ಶೇ.100 ರಷ್ಟು ಸಾವಿನ ಪ್ರಮಾಣ ಇರುವುದರಿಂದ ಹಂದಿ ಸಾಕಾಣಿಕೆದಾರರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ.
ಈ ವೈರಸ್ ಮನುಷ್ಯರಿಗೆ ಯಾವುದೇ ರೋಗ ಹರಡುವುದಿಲ್ಲ ಎಂದಿದ್ದಾರೆ.
ಈ ರೋಗವು ಕರ್ನಾಟಕಕ್ಕೆ ಹರಡಂತೆ ತಡೆಗಟ್ಟಲು ಕೇರಳ ರಾಜ್ಯಕ್ಕೆ ಸಂಪರ್ಕಿಸುವ ಗಡಿ ಭಾಗದಲ್ಲಿ ಚೆಕ್‍ಪೋಸ್ಟ್ ಗಳನ್ನು ತೆರೆದು ಹಂದಿ ಹಾಗೂ ಹಂದಿ ಮಾಂಸಗಳ ಸಾಗಾಣಿಕೆ ಮೇಲೆ ನಿಗಾ ವಹಿಸಲಾಗಿದೆ.
ಜಿಲ್ಲೆಯ ಎಲ್ಲಾ ಹಂದಿ ಸಾಕಾಣಿಕೆದಾರರಿಗೆ ರೋಗ ಬರದ ಹಾಗೆ ಮುಂಜಾಗ್ರತೆ ಕ್ರಮವಹಿಸಲು ಸೂಚಿಸಲಾಗಿದೆ.
ಪಶು ಪಾಲನಾ ಇಲಾಖೆಯ ಪಶುವೈದ್ಯಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಎಲ್ಲಾ ಹಂದಿ ಫಾರಂಗಳಿಗೆ ಭೇಟಿ ನೀಡಿ ಹಂದಿ ಸಾಕಾಣಿಕೆದಾರರಿಗೆ ಈ ಬಗ್ಗೆ ಸಲಹೆ ನೀಡುವಂತೆ ನಿರ್ದೇಶನ ಕೊಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರವು ಈ ವರ್ಷ ಇದುವರೆಗೆ ಕಂಡು ಬಂದಿಲ್ಲ.
ಹಾಗಾಗಿ ಹಂದಿ ಸಾಕಾಣಿಕೆದಾರರು ಮತ್ತು ಸಾರ್ವಜನಿಕರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದವರು ತಿಳಿಸಿದ್ದಾರೆ.
LATEST NEWS
ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ
ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಲಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ ಮರು ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಗಸ್ತು ತಿರುಗಲು ಮತ್ತು ವೈಮಾನಿಕ ಸಮೀಕ್ಷೆ ನಡೆಸಲು ಮಿಲಿಟರಿ ಹೆಲಿಕಾಪ್ಟರ್ ಅನ್ನು ನಿಯೋಜಿಸಲಾಗಿದ್ದು, ಕೂಂಬಿಂಗ್ ಕಾರ್ಯಾಚರಣೆಯೂ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕರು ತಿಳಿಸಿದ್ದಾರೆ.
LATEST NEWS
ಹಳಿಗಳ ಮೇಲೆ ಸಿಮೆಂಟ್ ಬ್ಲಾಕ್ ಗಳನ್ನು ಇಟ್ಟ ಕಿಡಿಗೇಡಿಗಳು: ತಪ್ಪಿದ ರೈಲು ದುರಂತ
ಅಜ್ಮೀರ್: ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಸರಕು ಸಾಗಣೆ ಕಾರಿಡಾರ್ ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್ ಗಳನ್ನು ಇಡುವ ಮೂಲಕ ಸರಕು ರೈಲನ್ನು ಹಳಿ ತಪ್ಪಿಸುವ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ತಲಾ 70 ಕೆ.ಜಿ ತೂಕದ ಸಿಮೆಂಟ್ ಬ್ಲಾಕ್ ಗಳಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಆದರೆ, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ‘ಭಾನುವಾರ ಕೆಲವು ದುರ್ಷ್ಕಮಿಗಳು ಸರಕು ಸಾಗಣೆ ಕಾರಿಡಾರ್ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್ ಗಳನ್ನು ಇಟ್ಟಿದ್ದಾರೆ. ಗೂಡ್ಸ್ ರೈಲು ಅದಕ್ಕೆ ಡಿಕ್ಕಿ ಹೊಡೆದಿದೆ’ ಎಂದು ವಾಯುವ್ಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್ ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು. ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್ ತುಂಬಿದ ಬಾಟಲಿಗಳು, ಗನ್ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿ ರೈಲು ಸಿಲಿಂಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು. ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ.
ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.
FILM
ನಟ ದರ್ಶನ್ ಮನವಿ ಪುರಸ್ಕರಿಸಿದ ಹೈಕೋರ್ಟ್; ಮಾಧ್ಯಮಗಳಿಗೆ ನಿರ್ಬಂಧ
ಮಂಗಳೂರು/ಬೆಂಗಳೂರು: ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅದರಲ್ಲಿರುವ ಅಂಶಗಳ ಬಗ್ಗೆ ಈಗಾಗಲೇ ಸಾಕಷ್ಟು ವರದಿಗಳು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಬಿತ್ತರವಾಗುತ್ತಿತ್ತು.
ಚಾರ್ಜ್ ಶೀಟ್ ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು(ಸೆ.10) ಆದೇಶವನ್ನು ಪ್ರಕಟಿಸಿದ್ದು, ದರ್ಶನ್ ಮನವಿಯನ್ನು ಪುರಸ್ಕರಿಸಿ, ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಆದೇಶಿಸಿದೆ.
ಕಳೆದ ತಿಂಗಳು ಆಗಸ್ಟ್ 27 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರಿಗೆ ಸಂಬಂಧಿಸಿದ ಖಾಸಗಿ ಚಿತ್ರಗಳನ್ನು ಮಾಧ್ಯಮಗಳಲ್ಲಿ ಪ್ರದರ್ಶಿಸದಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ ಪ್ರತಿಬಂಧಕಾಜ್ಞೆ ತಂದಿದ್ದರು.
ಇದನ್ನೂ ಓದಿ :ಮಗುವನ್ನು ಕೊಂ*ದು ವಾಷಿಂಗ್ ಮೆಷಿನ್ ನಲ್ಲಿಟ್ಟ ಮಹಿಳೆ!
ಈಗ ಅದೇ ಅರ್ಜಿಯನ್ನು ಉಲ್ಲೇಖಿಸಿ, ಆರೋಪ ಪಟ್ಟಿಯಲ್ಲಿರುವ ಮಾಹಿತಿ ಹಾಗೂ ಹರಿದಾಡುತ್ತಿರುವ ಕೆಲವು ಚಿತ್ರಗಳನ್ನು ಪ್ರದರ್ಶಿಸದಂತೆ ಸೂಚನೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಹೈಕೋರ್ಟ್ ಏಕಸದಸ್ಯ ಪೀಠ ಮುಂದಿನ ವಿಚಾರಣೆಯವರೆಗೂ ಆರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಪ್ರಸಾರ ಮಾಡದಂತೆ ಸೂಚನೆ ನೀಡಿ ಆದೇಶ ಹೊರಡಿಸಿದೆ.
- LATEST NEWS6 days ago
ಪೇಟಿಎಂ ಮೂಲಕ ಲಕ್ಷ ಹಣ ವರ್ಗಾವಣೆ..! ಆರೋಪಿಯ ಬಂಧನ
- DAKSHINA KANNADA5 days ago
ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ; 21 ಶಿಕ್ಷಕರಿಗೆ ಪ್ರಶಸ್ತಿ
- FILM5 days ago
ಅಮ್ಮನಾದ ಮಿಲನಾ ನಾಗರಾಜ್; ಸಂತಸ ಹಂಚಿಕೊಂಡ ನಟ ಡಾರ್ಲಿಂಗ್ ಕೃಷ್ಣ
- LATEST NEWS1 day ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್