Connect with us

    DAKSHINA KANNADA

    Mangaluru: ಬಿ.ಎನ್.ಐ ವತಿಯಿಂದ ಉತ್ಪನ್ನ ಪ್ರದರ್ಶನ ಮತ್ತು ಮಾರಾಟ-‘ಬಿಗ್‌ ಬ್ಯ್ರಾಂಡ್ಸ್ ಎಕ್ಸ್‌ ಪೊ 2023’

    Published

    on

    ಬಿಸ್‌ ನೆಸ್‌ ನೆಟ್‌ ವರ್ಕ್ ಇಂಟರ್‌ ನ್ಯಾಶನಲ್‌ – ಬಿ.ಎನ್.ಐ. ಮಂಗಳೂರು ವತಿಯಿಂದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ- ‘ಬಿಗ್‌ ಬ್ಯ್ರಾಂಡ್ಸ್ ಎಕ್ಸ್‌ ಪೊ 2023 ‘ ಮಂಗಳೂರಿನ ಡಾ. ಟಿ.ಎಂ.ಎ. ಪೈ ಇಂಟರ್‌ ನ್ಯಾಶನಲ್‌ ಕನ್ವನ್‌ಶನ್‌ ಸೆಂಟರ್‌ ನಲ್ಲಿ ಸೆ. 30 ರಿಂದ ಅ. 2 ರ ವರೆಗೆ 3 ದಿನಗಳ ಕಾಲ ನಡೆಯಲಿದೆ.

    ಮಂಗಳೂರು: ಬಿಸ್‌ ನೆಸ್‌ ನೆಟ್‌ ವರ್ಕ್ ಇಂಟರ್‌ ನ್ಯಾಶನಲ್‌ – ಬಿ.ಎನ್.ಐ. ಮಂಗಳೂರು ವತಿಯಿಂದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ- ‘ಬಿಗ್‌ ಬ್ಯ್ರಾಂಡ್ಸ್ ಎಕ್ಸ್‌ ಪೊ 2023’ ಮಂಗಳೂರಿನ ಡಾ. ಟಿ.ಎಂ.ಎ. ಪೈ ಇಂಟರ್‌ ನ್ಯಾಶನಲ್‌ ಕನ್ವನ್‌ಶನ್‌ ಸೆಂಟರ್‌ ನಲ್ಲಿ ಸೆ. 30 ರಿಂದ ಅ. 2 ರ ವರೆಗೆ 3 ದಿನಗಳ ಕಾಲ ನಡೆಯಲಿದೆ.

    ಬಿ.ಎನ್.ಐ. ಮಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಗಣೇಶ್‌ ಎನ್‌. ಶರ್ಮ ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಬಿಗ್‌ ಬ್ಯ್ರಾಂಡ್ಸ್ ಎಕ್ಸ್‌ ಪೊ ದಲ್ಲಿ 120 ಮಳಿಗೆಗಳಲ್ಲಿ ಬಿ.ಎನ್.ಐ. ಮಂಗಳೂರು ಸದಸ್ಯರು ತಮ್ಮ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ನಡೆಸಲಿದ್ದಾರೆ.

    ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆಯ ತನಕ ಈ ಪ್ರದರ್ಶನವು ಸಾರ್ವಜನಿಕರಿಗೆ ತೆರೆದಿರುತ್ತದೆ.

    ಇದಕ್ಕೆ ಪ್ರವೇಶ ಉಚಿತ. ಕಳೆದ ವರ್ಷ 2 ದಿನ ಇಂತಹ ಕಾರ್ಯಕ್ರಮ ನಡೆದಿದ್ದು, 8500 ಜನರು ಭೇಟಿ ನೀಡಿದ್ದರು.

    ಈ ವರ್ಷ ಮೂರು ದಿನ ನಡೆಯಲಿದ್ದು, ಸುಮಾರು 12,000 ಜನರು ಭೇಟಿ ಮಾಡುವ ನಿರೀಕ್ಷೆ ಇದೆ ಎಂದರು.

    ಕಟ್ಟಡ ಸಾಮಗ್ರಿ, ಆಟೋಮೊಬೈಲ್‌, ಚಿನ್ನ ಮತ್ತು ಇತರ ಆಭರಣಗಳು, ಮಾನವ ಸಂಪನ್ಮೂಲ, ಲೈಟಿಂಗ್‌ಗಳು, ಉಡುಪುಗಳು, ಐಟಿ ಉತ್ಪನ್ನಗಳು, ಸಾಫ್ಟ್‌ವೇರ್‌, ಮನೆ ಮತ್ತು ಕಚೇರಿಯ ಉಪಕರಣಗಳು, ಆಹಾರ ಉತ್ಪನ್ನಗಳು, ಎಲೆಕ್ಟ್ರಿಕ್‌ ಮತ್ತು ಎಲೆಕ್ಟ್ರಾನಿಕ್‌ ಉಪಕರಣಗಳು, ಅಲಂಕಾರಿಕ ವಸ್ತುಗಳು, ಪೀಠೋಪಕರಣ, ವೈದ್ಯಕೀಯ ಮತ್ತು ವಿದೇಶೀ ಶಿಕ್ಷಣ ಮತ್ತು ವಿದೇಶ ಪ್ರಯಾಣ ಮಾಹಿತಿ ನೀಡುವ ಕೇಂದ್ರ ಸೇರಿದಂತೆ ವಿವಿಧ ವಸ್ತುಗಳ ಹಾಗೂ ಸೇವಾ ವ್ಯವಸ್ಥೆಯ ಮಳಿಗೆಗಳು ಇರುತ್ತವೆ ಎಂದು ವಿವರಿಸಿದರು.

    ‘ಬಿಗ್‌ ಬ್ಯ್ರಾಂಡ್ಸ್ ಎಕ್ಸ್‌ ಪೊ 2023 ಇದರ ಅಧ್ಯಕ್ಷ ಮೋಹನ್‌ ರಾಜ್‌, ಸುನಿಲ್‌ ದತ್‌ ಪೈ, ದೀಪಿಕಾ ಶೆಟ್ಟಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    BANTWAL

    ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು

    Published

    on

    ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.

    ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.

    ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

     

    ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

     

    ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

    ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

    Published

    on

    ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

     

    ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

     

    ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

     

    ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

    Continue Reading

    DAKSHINA KANNADA

    ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

    Published

    on

    ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

    ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

    ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
    ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.

    ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.

    ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.

    Continue Reading

    LATEST NEWS

    Trending