Connect with us

DAKSHINA KANNADA

ಮಂಗಳೂರು : ಪಿಂಚಣಿ ದಾಖಲೆ ನೀಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ- ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ..!

Published

on

ಶಾಲೆಯ ನಿವೃತ್ತ ಶಿಕ್ಷಕಿಯ ಪೆನ್ಷನ್‌ ಹಣಕ್ಕೆ ಅಗತ್ಯವಾಗಿರುವ ದಾಖಲೆ ನೀಡಲು ಶಾಲೆಯ ಸಂಚಾಲಕಿ 5 ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ರೆಡ್‌ ಹ್ಯಾಂಡ್‌ ಅಗಿ ಮಂಗಳೂರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಮಂಗಳೂರು: ಶಾಲೆಯ ನಿವೃತ್ತ ಶಿಕ್ಷಕಿಯ ಪೆನ್ಷನ್‌ ಹಣಕ್ಕೆ ಅಗತ್ಯವಾಗಿರುವ ದಾಖಲೆ ನೀಡಲು ಶಾಲೆಯ ಸಂಚಾಲಕಿ 5 ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ರೆಡ್‌ ಹ್ಯಾಂಡ್‌ ಅಗಿ ಮಂಗಳೂರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಮಂಗಳೂರು ಹೊರವಲುದ ಬಜ್ಪೆ ನಿರಂಜನ ಸ್ವಾಮಿ ಸರ್ಕಾರಿ ಅನುದಾನಿತ ಶಾಲೆಯ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿಯಾಗಿದ್ದಾರೆ.

ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಹಾಗು ಮುಖ್ಯ ಶಿಕ್ಷಕಿಯಾಗಿ 42 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾರಾಣಿರವರು ದಿನಾಂಕ 31.07.2023 ರಂದು ವಯೋನಿವೃತ್ತಿ ಹೊಂದಲಿದ್ದು, ತನ್ನ ವಯೋ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ದಿನಾಂಕ 25.05.2023 ರಂದು ಶ್ರೀ ನಿರಂಜನ ಸ್ವಾಮೀ ಅನುದಾನಿತ ಶಾಲೆಯ ಮ್ಯಾನೇಜ್‌ಮೆಂಟ್‌ ಸಂಚಾಲಕರಾದ ಶ್ರೀಮತಿ ಜ್ಯೋತಿ ಎನ್ ಪೂಜಾರಿರವರಿಗೆ ಮನವಿ ಪತ್ರದೊಂದಿಗೆ ವಿನಂತಿಸಿಕೊಂಡು ಸ್ವೀಕೃತಿಯನ್ನು ನೀಡುವಂತೆ ಕೋರಿಕೊಂಡಿದ್ದರು.

ಸಂಚಾಲಕರಾದ ಶ್ರೀಮತಿ ಜ್ಯೋತಿ.ಎನ್‌.ಪೂಜಾರಿರವರು ಸ್ವೀಕೃತಿಯನ್ನು ನಂತರ ನೀಡುವುದಾಗಿ ತಿಳಿಸಿ, ಪಿಂಚಣಿ ಉಪದಾನ ಪತ್ರಗಳನ್ನು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸದೇ, ಸ್ವೀಕೃತಿ ಪತ್ರವನ್ನು ನೀಡದೇ ಫಿರ್ಯಾದಿದಾರರಿಗೆ ಸತಾಯಿಸಿ, ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕಳುಹಿಸಬೇಕಾದರೆ ರೂ.20,00,000/- (ಇಪ್ಪತ್ತು ಲಕ್ಷ) ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು.

ಮತ್ತೆ ಜ್ಯೋತಿಯರನ್ನು ಭೇಟಿ ಮಾಡಿ ತನ್ನ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡಿ ಕಳುಹಿಸಿಕೊಡುವಂತೆ ಕೋರಿಕೊಂಡರೂ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡಬೇಕಾದರೆ, ರೂ 5,00,000/- (ಐದು ಲಕ್ಷ) ಕೊಡಬೇಕು ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಶೋಭಾ ರಾಣಿ ಅವರು ಮಂಗಳೂರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಇಂದು ಐದು ಲಕ್ಷ ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲಿಸರು ರೆಡ್ ಹ್ಯಾಂಡಾಗಿ ಆರೋಪಿ ಶಾಲಾ ಸಂಚಾಲಕಿ ಜ್ಯೋತಿಯವರನ್ನು ಹಿಡಿದು ಕಾನೂನು ಕ್ರಮ ಜರುಗಿಸಿದ್ದಾರೆ.

ಆರೋಪಿಯನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಂಡು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಲೋಕಾಯುಕ್ತ ಎಸ್‌ಪಿ ಸಿ.ಎ. ಸೈಮನ್ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರುಗಳಾದ ಶ್ರೀಮತಿ ಕಲಾವತಿ.ಕೆ, ಚಲುವರಾಜು, ಬಿ, ಹಾಗೂ ಪೊಲೀಸ್ ನಿರೀಕ್ಷಕರಾದ, ವಿನಾಯಕ ಬಿಲ್ಲವ ಇವರು ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

1 Comment

1 Comment

  1. CR.Padmsnabha

    08/07/2023 at 12:07 PM

    Slap her first.dirty women, big looter

Leave a Reply

Your email address will not be published. Required fields are marked *

DAKSHINA KANNADA

ಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲ್ ಮಾಡಿದ ಭಟ್- ಪ್ರಕರಣ ದಾಖಲು..!

Published

on

ಪುತ್ತೂರು: ಬಣ್ಣದ ಮಾತುಗಳಿಂದ ವಿಶ್ವಾಸಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.

ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಪ್ರಕರಣದ ಆರೋಪಿ.

ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್‌ ನಲ್ಲಿ ಹಾಡುತ್ತಿದ್ದಳು.

2020 ರಲ್ಲಿ ಆ್ಯಪ್‌ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ.

2023 ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.

ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ.

ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ.

ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ.

ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.

ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ.

ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾನೆ.

ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಾರವಾರದ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

 

 

 

Continue Reading

DAKSHINA KANNADA

ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್‌- ಮೀನುಗಾರರನ್ನು ರಕ್ಷಿಸಿದ ಕೋಸ್ಟ್‌ಗಾರ್ಡ್‌

Published

on

ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್‌ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.

ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.

ಈ ಬಗ್ಗೆ ಬೋಟ್‌ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.

ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್‌ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್‌ಗಾರ್ಡ್‌ಗೆ ಮಾಹಿತಿ ನೀಡಿದ್ದರು.

ಅದರಂತೆ ಕೋಸ್ಟ್‌ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್‌ ಗಾರ್ಡ್‌ನ ಎರಡು ಇಂಟರ್‌ಸೆಪ್ಟರ್ ಬೋಟ್‌ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್‌ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್‌ಗಾರ್ಡ್ ತಿಳಿಸಿದೆ.

Continue Reading

BELTHANGADY

ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು- ಕಳ್ಳ ಅರೆಸ್ಟ್..!

Published

on

ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ನಿವಾಸಿ ಉಮೇಶ್‌ ಬಳೇಗಾರ್‌(47) ಬಂಧಿತ ಆರೋಪಿ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅಜಿತ್ ನಗರ ಕೆಲ್ಲೆ ನಿವಾಸಿ ಫೆಲಿಕ್ಸ್ ರೋಡ್ರಿಗಸ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯ ಬಾಗಿಲು ಮುರಿದು ನುಗ್ಗಿ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಆಗಿದೆ.

ಈ ಕೂಡಲೇ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.

ಆರೋಪಿ ವಿರುದ್ಧ ತಮಿಳುನಾಡು, ಕೇರಳದ ವಿವಿಧ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಿಸಲಾಗಿದೆ.

ಅಲ್ಲದೆ ಕರ್ನಾಟಕದ ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡಬಿದ್ರೆ ಠಾಣೆಯಲ್ಲಿಯೂ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ.

ಈತನಿಗಾಗಿ ಮೂರೂ ರಾಜ್ಯಗಳ ಪೊಲೀಸರು ಹುಡುಕಾಟ ನಡೆಸುತ್ತಿರುವಾಗಲೇ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈತನಿಂದ ಕಳ್ಳತನ ಮಾಡಲಾದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

Continue Reading

LATEST NEWS

Trending