Connect with us

  BANTWAL

  Mangaluru: ಹೆದ್ದಾರಿ ದುರಸ್ತಿಗೊಳ್ಳದಿದ್ದರೆ ಸರಣಿ ಹೆದ್ದಾರಿ ತಡೆ- ಬಿ.ಕೆ ಇಮ್ತಿಯಾಜ್

  Published

  on

  ಬಿ.ಸಿ ರೋಡ್ ನಿಂದ ಸುರತ್ಕಲ್ ವರೆಗಿನ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ಅಪಾಯಕಾರಿ ಹೊಂಡಗುಂಡಿಗಳಿಂದ ವಾಹನ ಸವಾರರಿಗಾಗುವ ಪ್ರಾಣ ಹಾನಿಗಳಿಗೆ ಹೆದ್ದಾರಿ ಪ್ರಾಧಿಕಾರವೇ ನೇರಹೊಣೆ ಎಂದು ಡಿವೈಎಫ್ಐ ನ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಜು.24ರಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬೈಕಂಪಾಡಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೇಳಿದ್ದಾರೆ.

  ಮಂಗಳೂರು: ಬಿ.ಸಿ ರೋಡ್ ನಿಂದ ಸುರತ್ಕಲ್ ವರೆಗಿನ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ಅಪಾಯಕಾರಿ ಹೊಂಡಗುಂಡಿಗಳಿಂದ ವಾಹನ ಸವಾರರಿಗಾಗುವ ಪ್ರಾಣ ಹಾನಿಗಳಿಗೆ ಹೆದ್ದಾರಿ ಪ್ರಾಧಿಕಾರವೇ ನೇರಹೊಣೆ ಎಂದು ಡಿವೈಎಫ್ಐ ನ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಜು.24ರಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬೈಕಂಪಾಡಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೇಳಿದ್ದಾರೆ.

  ಬಳಿಕ ಮಾತನಾಡಿದ ಅವರು ಹೆದ್ದಾರಿಯನ್ನು ಆದಷ್ಟು ಬೇಗ ಸರಿಪಡಿಸದಿದ್ದಲ್ಲಿ ಡಿವೈಎಫ್ಐ ಸಂಘಟನೆಯು ಅಲ್ಲಲ್ಲಿ ಹೆದ್ದಾರಿಗಳನ್ನು ತಡೆದು ಸರಣಿ ಪ್ರತಿಭಟನೆ ನಡೆಸಲಿದ್ದೇವೆ.

  ಸುರತ್ಕಲ್ ನಿಂದ ಬಿಸಿರೋಡ್ ವರೆಗಿನ ಹೆದ್ದಾರಿಯ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು.

  ಕೂಳೂರು ನೂತನ ಸೇತುವೆ ನಿರ್ಮಾಣ ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

  ರಸ್ತೆ ಗುಂಡಿಗೆ ಬಲಿಯಾದ ಟೈಟಸ್ ಫೆರಾವೋ ಕುಟುಂಬಕ್ಕೆ‌ ಪರಿಹಾರ ಧನ ಒದಗಿಸಲು ಬೇಜವಾಬ್ದಾರಿ ವಹಿಸಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು.

  ಪ್ರತಿ ವರ್ಷ ಹೆದ್ದಾರಿ ದುರಸ್ಥಿಗೆಂದು ಮೀಸಲಿರಿಸುವ ಸುಮಾರು 8 ಕೋಟಿ ಹಣವನ್ನು ಹೆದ್ದಾರಿ ಪ್ರಾಧಿಕಾರ ಸರಿಯಾಗಿ ವಿನಿಯೋಗಿಸದೆ ಭ್ರಷ್ಟಾಚಾರಕ್ಕೆ ಬಳಸಲಾಗುತ್ತಿದೆಯೇ ಎಂದು ಆರೋಪಿಸಿದರು.

  ಹೆದ್ದಾರಿ ಪ್ರಾಧಿಕಾರದ ಬೇಜವಾಬ್ದಾರಿಗೆ ಅಮಾಯಕ ವಾಹನ ಸವಾರರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದು, ಅಂತಹ ಸಂತ್ರಸ್ತ ಕುಟುಂಬಗಳಿಗೆ ಪರಿಹಾರವನ್ನು ಒದಗಿಸೋದಾಗಲಿ, ಬೇಜವಾಬ್ದಾರಿಯ ಕಾಮಗಾರಿ ನಡೆಸಿದ ಪ್ರಾಧಿಕಾರದ ಅಧಿಕಾರಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದರು.

  ಪ್ರತಿಭಟನೆಯಲ್ಲಿ ಡಿವೈಎಫ್ಐ ನಗರ ಕಾರ್ಯದರ್ಶಿ ನವೀನ್ ಕೊಂಚಾಡಿ, ಅಧ್ಯಕ್ಷರಾದ ಜಗದೀಅಸ್ ಬಜಾಲ್, ಜಿಲ್ಲಾ ಮುಖಂಡರಾದ ರಫೀಕ್ ಹರೇಕಳ, ಶ್ರೀನಾಥ್ ಕುಲಾಲ್, ತಯ್ಯೂಬ್ ಬೆಂಗರೆ, ಆಶಾ ಬೈಕಂಪಾಡಿ, ಪ್ರಮಿಳಾ ಶಕ್ತಿನಗರ, ಜೋಕಟ್ಟೆ ಗ್ರಾಮಪಂಚಾಯತ್ ಸದಸ್ಯರಾದ ಅಬೂಬಕ್ಕರ್ ಬಾವಾ, ಇಕ್ಬಾಲ್ ಜೋಕಟ್ಟೆ, ಸೆಲ್ವಿಯಾ ಜೋಕಟ್ಟೆ, ಡಿವೈಎಫ್ಐ ಸುರತ್ಕಲ್ ಮುಖಂಡ ಮಕ್ಸೂದ್, ರಿಹಾಬ್ , ಬಿ.ಎಮ್ ಅಬುಸಾಲಿ, ರಿಯಾಜ್ ಎಲ್ಯಾರ್ ಪದವು, ಆಸೀಫ್ ಉರುಮನೆ, ಮುಸ್ತಫಾ ಬೈಕಂಪಾಡಿಮುಂತಾದವರು ಉಪಸ್ಥಿತರಿದ್ದರು.

  BANTWAL

  ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

  Published

  on

  ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

  ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

  ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

  ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

  Continue Reading

  BANTWAL

  ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

  Published

  on

  ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

  ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

  Continue Reading

  BANTWAL

  ಬಂಟ್ವಾಳ: ಹಂಚಿಕಟ್ಟೆಯಲ್ಲಿ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸೋರಿಕೆ

  Published

  on

  ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪನಿಯ ಸಿಎನ್‌ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

  ಸಿಎನ್‌ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ.

  ಅದಾಗಲೇ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ.

  Continue Reading

  LATEST NEWS

  Trending