Connect with us

    DAKSHINA KANNADA

    Mangaluru: ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಸಮಸ್ಯೆ- ಡಿವೈಎಫ್ಐ ಆಗ್ರಹ..!

    Published

    on

    ಪಡಿತರ ಚೀಟಿ ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೆ. 12 ರಿಂದ 14ರವರೆಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಗ್ರಾಹಕ ಸೇವಾ ಕೇಂದ್ರಗಳಲ್ಲಿ ಅವಕಾಶನೀಡಿ ಪ್ರಕಟಣೆ ನೀಡಿದ್ದು, ಆದರೆ ಇದೀಗ ಸರ್ವರ್ ಸಮಸ್ಯೆಯಿಂದಾಗಿ ಸಾರ್ವಜನಿಕರು ಕಂಗಲಾಗಿದ್ದಾರೆ ಎಂದು ಡಿವೈಎಫ್ಐ ಜಿಲ್ಲಾ ಸಮಿತಿ ಆಗ್ರಹಿಸಿದೆ.

    ಮಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೆ. 12 ರಿಂದ 14ರವರೆಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಗ್ರಾಹಕ ಸೇವಾ ಕೇಂದ್ರಗಳಲ್ಲಿ ಅವಕಾಶನೀಡಿ ಪ್ರಕಟಣೆ ನೀಡಿದ್ದು, ಆದರೆ ಇದೀಗ ಸರ್ವರ್ ಸಮಸ್ಯೆಯಿಂದಾಗಿ ಸಾರ್ವಜನಿಕರು ಕಂಗಲಾಗಿದ್ದಾರೆ ಎಂದು ಡಿವೈಎಫ್ಐ ಜಿಲ್ಲಾ ಸಮಿತಿ ಆಗ್ರಹಿಸಿದೆ.

    ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ ಹೆಸರು ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೆ. 12 ರಿಂದ 14ರವರೆಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಗ್ರಾಹಕ ಸೇವಾ ಕೇಂದ್ರಗಳಲ್ಲಿ ಅವಕಾಶ ನೀಡಿ ಪ್ರಕಟಣೆ ನೀಡಿತ್ತು.

    ನಗರದ ವಿವಿಧ ಸೇವಾ ಕೇಂದ್ರಗಳಿಗೆ ಡಿವೈಎಫ್ಐ ನಿಯೋಗ ಭೇಟಿ ನೀಡಿದ್ದು, ಜನರ ಸಂಕಷ್ಟಗಳ ಬಗ್ಗೆ ಜಿಲ್ಲಾಡಳಿತ ರಾಜ್ಯ ಸರಕಾರದ ಗಮನ ಸೆಳೆಯಬೇಕೆಂದು ಡಿವೈಎಫ್ಐ ಜಿಲ್ಲಾ ಸಮಿತಿ ಆಗ್ರಹಿಸಿದೆ.

    ಸೈಬರ್ ಕೇಂದ್ರಗಳು ಸರ್ವರ್ ಸಮಸ್ಯೆಯಿಂದ ಇತರ ಕೆಲಸಗಳಿಗೆ ತೊಂದರೆ ಆಗುತ್ತದೆ ಎಂದು ಪಡಿತರ ತಿದ್ದುಪಡಿಯ ಕೆಲಸವನ್ನು ಸ್ಥಗಿತಗೊಳಿಸಿವೆ.

    ಆದರೆ ಪಡಿತರ ಚೀಟಿ ಸರಿ ಮಾಡಲು ಕಳೆದೆರಡು ದಿನಗಳಿಂದ ಸಾರ್ವಜನಿಕರು ಕೆಲಸಕ್ಕೆ ರಜೆ ಹಾಕಿ ಸೇವಾ ಕೇಂದ್ರದ ಮುಂದೆ ರಾತ್ರಿವರೆಗೆ ಸಾಲುಗಟ್ಟಿ ನಿಂತರೂ ಯಾವುದೇ ಪ್ರಯೋಜನವಾಗಿಲ್ಲ.

    ಇದರಿಂದಾಗಿ ಬಡವರು,ಕೆಳ ಮಧ್ಯಮ ವರ್ಗದ ಜನರು ಸರಕಾರದ ವಿವಿಧ ಯೋಜನೆಗಳಿಂದ ವಂಚಿತರಾಗಲಿದ್ದಾರೆ ಡಿವೈಎಫ್ಐ ಆರೋಪಿಸಿದೆ.

    ಸಾರ್ವಜನಿಕರ ಅನುಕೂಲತೆಗಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿದ್ದುಪಡಿಯ ತಂತ್ರಾಂಶದಲ್ಲಿ ಸೇವಾ ಕೇಂದ್ರದಲ್ಲಿ ನಿರ್ದಿಷ್ಟ ಅವಧಿಯನ್ನು ತೆರವುಗೊಳಿಸಿ ನಿರಂತರ ಸೇವೆಗೆ ಅನುಕೂಲ ಮಾಡಿಕೊಡಬೇಕಾಗಿ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

    DAKSHINA KANNADA

    ಪುತ್ತೂರು ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಜಾನ್ಸನ್‌ ಡಿ ಸೋಜ ಅಧಿಕಾರ ಸ್ವೀಕಾರ

    Published

    on

    ಪುತ್ತೂರು: ಪುತ್ತೂರು ನಗರ ಪೊಲೀಸ್‌ ಠಾಣಾ ನೂತನ ಸರ್ಕಲ್ ಇನ್ಸ್‌ಪೆಕ್ಟರ್‌ ಆಗಿ ಜಾನ್ಸನ್ ಡಿ ಸೋಜ ಅವರು ಸೆ.9ರಂದು ಅಧಿಕಾರ ಸ್ವೀಕರಿಸಿದರು.

    ಚಿಕ್ಕಮಗಳೂರು ಹೋಮ್‌ಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟೀಸ್..!

    ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಅಲ್ಲಿಂದ ವರ್ಗಾವಣೆಗೊಂಡು ಪುತ್ತೂರು ನಗರ ಪೊಲೀಸ್ ಠಾಣಾ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಕಾರವಾರ, ಭಟ್ಕಳ, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಸೆವೆ ಸಲ್ಲಿಸಿದ್ದರು.

    Continue Reading

    BELTHANGADY

    ಓವರ್‌ಟೆಕ್‌ ಭರದಲ್ಲಿ ಎರಡು ಕಾರು, ಲಾರಿ ಮಧ್ಯೆ ಅಪಘಾ*ತ; ಓರ್ವ ಸ್ಥಳದಲ್ಲೇ ಮೃ*ತ್ಯು

    Published

    on

    ಸಕಲೇಶಪುರ: ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್‌ ವ್ಯಾಪ್ತಿಯ ಕೆಂಪುಹೊಳೆ ಬಳಿ ಸಂಭವಿಸಿದೆ.

    ಹಾಸನ ತಾಲೂಕಿನ ಕಟ್ಟಾಯ ಸಮೀಪದ ನಾಯಕರಹಳ್ಳಿ ಚಂದ್ರೇಗೌಡ(50 ವ) ಮೃತಪಟ್ಟವರು. ಕಾರಿನಲ್ಲಿದ್ದ ಶೈಲಾ ಹಾಗೂ ಕಿರಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಓವರ್‌ಟೇಕ್‌ ಭರದಲ್ಲಿ ಕಾರುಗಳ ಮಧ್ಯೆ ಭೀ*ಕರ ಅಫಘಾ*ತ; 6 ಮಂದಿ ದುರ್ಮರ*ಣ

    ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರುಗಳು ಒಂದನ್ನೊಂದು ಓವರ್‌ಟೆಕ್‌ ಮಾಡುವ ಭರದಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿಗೆ ಕೆಂಪುಹೊಳೆ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಪ್ರಪಾತಕ್ಕೆ ಬೀಳುವುದು ಕೂದಲೆಳೆಯಲ್ಲಿ ತಪ್ಪಿಹೋಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣಾ ಪೊಲೀಶರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಪಘಾತದಿಂದ ಗಾಯಗೊಂಡವರನ್ನು ಸಕಲೇಶಪುರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕತ್ಸೆಗಾಗಿ ಹಾಸನಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

    Continue Reading

    DAKSHINA KANNADA

    WATCH : ಕದ್ರಿ ಪಾರ್ಕ್ ನ ರಸ್ತೆಯಲ್ಲಿ ‘ಅಪರೇಷನ್ ಹೆಬ್ಬಾವು’; ಭಾರಿ ಗಾತ್ರದ ಹಾವನ್ನು ಕಂಡು ಬೆಚ್ಚಿ ಬಿದ್ದ ಜನ

    Published

    on

    ಮಂಗಳೂರು: ಹಬ್ಬದ ಜೊತೆಯಲ್ಲಿ ವೀಕೆಂಡ್‌ ಮೂಡ್‌ನಲ್ಲಿಇಂದು ಮುಂಜಾನೆ ಕದ್ರಿ ಪಾರ್ಕ್‌ಗೆ ಬಂದ ಜನರು ಆ ಒಂದು ಅತಿಥಿಯನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ಮರದ ಮೇಲೆ ಹೆಬ್ಬಾವೊಂದು ಮಲಗಿದ್ದು ಜನರ ಈ ಆತಂಕಕ್ಕೆ ಕಾರಣವಾಗಿತ್ತು.

    ತಕ್ಷಣ ಈ ವಿಚಾರವನ್ನು ಕದ್ರಿ ಪಾರ್ಕ್‌ ನಿರ್ವಾಹಕನ ಗಮನಕ್ಕೆ ತಂದಿದ್ದಾರೆ. ಬಳಿಕ ಅಗ್ನಿಶಾಮಕ ದಳದ ವಾಹನದ ಮೂಲಕ ಹೆಬ್ಬಾವಿನ ರಕ್ಷಣೆಗೆ ಮುಂದಾಗಿದ್ದಾರೆ. ಆದ್ರೆ, ಮರದ ಮೇಲೆ ಕೊಂಬೆಯಲ್ಲಿ ಸುತ್ತಿ ಮಲಗಿದ್ದ ಹೆಬ್ಬಾವನ್ನು ರಕ್ಷಣೆ ಮಾಡುವುದು ಅಷ್ಟು ಸುಲಭವಾಗಿರಲಿಲ್ಲ. ಹೀಗಾಗಿ ಪಿಲಿಕುಳದಿಂದ ನುರಿತ ಉರಗತಜ್ಞ ಭುವನ್ ಅವರನ್ನು ಸ್ಥಳಕ್ಕೆ ಕರೆಯಿಸಲಾಗಿದೆ.

    ಇದನ್ನೂ ಓದಿ : ಆಸ್ಪತ್ರೆಯ ಶುಲ್ಕ ಪಾವತಿಸಲಾಗದೆ ಮಗುವನ್ನೇ ಮಾರಾಟ ಮಾಡಿದ ತಂದೆ!

    ಪಿಲಿಕುಳದ ಉರಗ ತಜ್ಞ ಭುವನ್  ಹಾಗೂ ಅಗ್ನಿಶಾಮಕ ದಳದ ಜಂಟಿ ಕಾರ್ಯಾಚರಣೆಯ ಬಳಿಕ ಹೆಬ್ಬಾವನ್ನು ಸುರಕ್ಷಿತವಾಗಿ ಮರದಿಂದ ಕೆಳಗೆ ಇಳಿಸಿ ರಕ್ಷಣೆ ಮಾಡಲಾಗಿದೆ. ಹೆಬ್ಬಾವು ಸುಮಾರು 7 ರಿಂದ 8 ಅಡಿಗಳಷ್ಟು ಉದ್ದವಿದ್ದು, ಯಾವುದೋ ಆಹಾರ ಸೇವಿಸಿ ಮರ ಏರಿರುವ ಸಾಧ್ಯತೆ ಇದೆ.

    ವಿಡಿಯೋ ನೋಡಿ:

     

    Continue Reading

    LATEST NEWS

    Trending