ಮಂಗಳೂರು: ರಜೆ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಯೋಧ ಕುಲಶೇಖರ ಉಮಿಕಾನ ನಿವಾಸಿ ಹರೀಶ್ ಕುಮಾರ್ (43) ಎಂಬವರು ಹೃದಯಾಘಾತಕ್ಕೆ ಒಳಗಾಗಿ ವಿಧಿವಶರಾಗಿದ್ದಾರೆ.
ಹರೀಶ್ ಕುಮಾರ್ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್‌ಎಫ್) ಅವರು ಕಳೆದ 21 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.
ರಜೆ ಹಾಕಿ ಊರಿಗೆ ಬಂದಿದ್ದ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು.
ಅವರಿಗೆ ಪತ್ನಿ, 6 ವರ್ಷದ ಪುತ್ರ ಹಾಗೂ ಒಂದುವರೆ ವರ್ಷದ ಪುತ್ರಿ ಇದ್ದಾರೆ.