Connect with us

    DAKSHINA KANNADA

    ಮಂಗಳೂರು ದಕ್ಷಿಣ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ: ಪ್ರವಾಸೋದ್ಯಮ, ಐಟಿ ಕ್ಷೇತ್ರ, ಮೂಲಭೂತ ಸೌಲಭ್ಯಕ್ಕೆ ಆದ್ಯತೆ- ಡಿ.ವೇದವ್ಯಾಸ್ ಕಾಮತ್

    Published

    on

    ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದರು.

    ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಇಂದು ಪ್ರಕೆ ಬಿಡುಗಡೆ ಮಾಡಿದರು.

    ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿದ್ದು, ಹಲವು ಅಭಿವೃದ್ಧಿ ಕಾಮಗಾರಿಗಳು ಜಾರಿಗೆ ಬಂದಿದೆ.

    • ಯೋಜನೆಗಳು:

    ಕ್ಷೇತ್ರದ ಮತದಾರ ಬಾಂಧವರು ಮತ್ತೊಂದು ಬಾರಿ ಬಿಜೆಪಿಗೆ ಅವಕಾಶ ನೀಡುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಬೇಕು.

    ಮುಂದಿನ ಐದು ವರ್ಷಗಳ ಅಭಿವೃದ್ಧಿಯ ಸ್ಪಷ್ಟ ಯೋಜನೆಯೊಂದಿಗೆ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದ್ದು, ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ, ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತು, ನಗರದ ನೈರ್ಮಲ್ಯ, ಸಂಚಾರ ವ್ಯವಸ್ಥೆಯ ಸಮಗ್ರ ಸುಧಾರಣೆ ಸೇರಿದಂತೆ ಹತ್ತು ಹಲವು ಯೋಜನೆಗಳ ಮೂಲಕ ನಗರವನ್ನು ಇನ್ನಷ್ಟು ಸ್ವಚ್ಛ, ಸುಂದರ ನಗರವನ್ನಾಗಿಸುವ ಚಿಂತನೆ ಇದೆ.

    ಕರಾವಳಿ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ರಿವರ್ ಫ್ರಂಟ್ ಯೋಜನೆ ಜಾರಿಗೆ ಕ್ರಮ ವಹಿಸಲಾಗುವುದು.

    ಈ ಮೂಲಕ ಉಳ್ಳಾಲ ಸೇತುವೆ ಮೂಲಕ ಸುಲ್ತಾನ್ ಬತ್ತೇರಿ ವರೆಗಿನ ನದಿ ಪಾತ್ರಗಳ ಸಮಗ್ರ ಅಭಿವೃದ್ಧಿಯಾಗಲಿದೆ.

    ಸುಲ್ತಾನ್ ಬತ್ತೇರಿ- ತಣ್ಣೀರುಬಾವಿ ಪ್ರದೇಶಗಳನ್ನು ಹ್ಯಾಂಗಿಂಗ್ ಬ್ರಿಡ್ಜ್ ಮೂಲಕ ಜೋಡಿಸಿ ಪ್ರವಾಸಿ ಆಕರ್ಷಣೆಗೆ ಯೋಜನೆ ಜಾರಿಗೆ ಬರಲಿದೆ.

    ಕುದ್ರುಗಳ ಸುಂದರೀಕರಣ ಮೂಲಕ ಪ್ರವಾಸೀ ಆಕರ್ಷಣೆ ಮಾಡುವ ಚಿಂತನೆ ಇದ್ದು, ಮಂಗಳೂರು ನಗರ ವ್ಯಾಪ್ತಿಯಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಯೋಜನೆಯ ಬಗ್ಗೆಯೂ ಪ್ರಯತ್ನ ನಡೆಯಲಿದೆ.

    ಇದಲ್ಲದೆ ಹಿನ್ನೀರಿನ ಸಮಗ್ರ ಬಳಕೆ ಮೂಲಕ ಪ್ರವಾಸಿಗರ ಆಕರ್ಷಣೆಗೆ, ಬೋಟ್ ಟೂರಿಸಂ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು

    ವಿದೇಶಿ ಹಾಗೂ ದೇಶೀ ಪ್ರವಾಸಿಗರ ಆಕರ್ಷಣೆಗೆ ಹೆಲಿಪೋರ್ಟ್ ನಿರ್ಮಾಣ ಮೂಲಕ ಹೈಟೆಕ್ ಮಾದರಿಯ ಪ್ರವಾಸಿ ಯೋಜನೆ ಇದೆ. ಧಾರ್ಮಿಕ ಪ್ರವಾಸೋದ್ಯಮಗಳ ಅಭಿವೃದ್ಧಿಗೆ `ಸರ್ಕೂಟ್ ಪರಿಕಲ್ಪನೆ’ ಯೋಜನೆಯೂ ಇದೆ.

    ಮಂಗಳೂರು ನಗರದ ನೈರ್ಮಲ್ಯಕ್ಕೆ ವಿಶೇಷ ಆದ್ಯತೆ ನಿಡಲಾಗುವುದು.

    ಘನತ್ಯಾಜ್ಯ ನಿರ್ವಹಣೆಗೆ ಅತ್ಯಾಧುನಿಕ ವ್ಯವಸ್ಥೆ ಅಳವಡಿಕೆ, ಪಚ್ಚನಾಡಿಯಲ್ಲಿ ಹಲವಾರು ವರ್ಷಗಳಿಂದ ಡಂಪ್ ಆಗಿರುವ ತ್ಯಾಜ್ಯ ವಿಲೇವಾರಿ ಕಾರ್ಯ ಆರಂಭಗೊಂಡಿದ್ದು, ತ್ವರಿತ ಅನುಷ್ಠಾನಕ್ಕೆ ಕ್ರಮ, ಬೃಹತ್ ಸಮುಚ್ಚಯಗಳಲ್ಲಿ ಸ್ವಂತ ತ್ಯಾಜ್ಯ ನಿರ್ವಹಣೆ ಘಟಕ ಅಳವಡಿಕೆಗೆ ಪ್ರೋತ್ಸಾಹ ನೀಡುವ ಯೋಜನೆ ಇದೆ.

    ನಗರದ ಟ್ರಾಫಿಕ್ ವ್ಯವಸ್ಥೆ ಸುಧಾರಣೆ ಮಾಡಲು ಕ್ರಮ ವಹಿಸಲಾಗುತ್ತದೆ.

    ಹಂಪನಕಟ್ಟೆಯಲ್ಲಿ ಮಲ್ಟಿಲೆವೆಲ್ ಕಾರ್ ಪಾರ್ಕಿಂಗ್ ಸಮುಚ್ಚಯ ಕಾಮಗಾರಿ ಆರಂಭಗೊಂಡಿದ್ದು, ಇದೇ ಮಾದರಿಯಲ್ಲಿ ಇನ್ನೂ ಕೆಲವು ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಸುಧಾರಣೆಗೆ ಆದ್ಯತೆ, ಕಮಾಂಡ್ ಕಂಟ್ರೋಲ್ ಮೂಲಕ ಟ್ರಾಫಿಕ್ ನಿರ್ವಹಣೆ, ಅತ್ಯಾಧುನಿಕ ಮಾದರಿಯ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟಲಿಜೆನ್ಸ್) ಕ್ಯಾಮರಾ ಅಳವಡಿಸಿ ಟ್ರಾಫಿಕ್ ವ್ಯವಸ್ಥೆ ಸುಧಾರಣೆ.

    ಮಂಗಳೂರು ನಗರಕ್ಕೆ 24*7 ನೀರು ಪೂರೈಸುವ ಜಲಸಿರಿ ಯೋಜನೆ ಅನುಷ್ಠಾನಗೊಂಡಿದ್ದು, ಹಂತ ಹಂತವಾಗಿ ವಲಯವಾರು ನಗರದ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆ ಆಗಲಿದೆ, ತುಂಬೆ ವೆಂಟೆಡ್ ಡ್ಯಾಂ ನಲ್ಲಿ ಪೂರ್ಣ ಸಾಮರ್ಥ್ಯ ದ 7 ಮೀ ಎತ್ತರದವರೆಗೆ ನೀರನ್ನು ಶೇಖರಿಸುವ ಬಗ್ಗೆ ಕ್ರಮ ಹಾಗೂ ಕುಡಿಯುವ ನೀರಿನ ಮೂಲವನ್ನು ಹೆಚ್ಚಿಸಲು ಹೊಸದಾಗಿ ನಿರ್ಮಿಸಿರುವ ಅಡ್ಯಾರ್ ಡ್ಯಾಮ್ (ಹರೇಕಳ) ನಿಂದ ಹೆಚ್ಚುವರಿ ನೀರಿನ ಬಳಕೆಗೆ ಕ್ರಮ.

    ಒಳಚರಂಡಿ ಜಾಲದ ಸಮಗ್ರ ಸುಧಾರಣೆ ಒತ್ತು ನೀಡಲಾಗುವುದು. ಮಂಗಳೂರಿನ ಒಳಚರಂಡಿ ಜಾಲ 50 ವರ್ಷಕ್ಕಿಂತಲೂ ಹಳೆಯದಾಗಿದ್ದು, ಅದನ್ನು ಹಂತ ಹಂತವಾಗಿ ಬದಲಾಯಿಸಿ ಒಳಚರಂಡಿ ಜಾಲ ಸಮಗ್ರ ಸುಧಾರಣೆ ಮಾಡಲಾಗುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.

    ಒಳಚರಂಡಿ ನೀರಿನ ಶುದ್ದೀಕರಣ ಘಟಕವನ್ನು ಮೇಲ್ದರ್ಜೆಗೇರಿಸಿ ರಾಜಕಾಲುವೆಗಳಿಗೆ ಹರಿಯುತ್ತಿರುವ ಒಳಚರಂಡಿ ತ್ಯಾಜ್ಯಗಳ ನೀರು ತಡೆಗಟ್ಟಲು ಕ್ರಮ.

    ಆಹಾರ ಸುರಕ್ಷತೆ/ ಸಂಸ್ಕರಣೆ ಬಗ್ಗೆ ವಿಶೇಷ ಆದ್ಯತೆ ನೀಡಲಾಗುವುದು.

    ನಗರದಲ್ಲಿ ಆಹಾರಗಳ ಪರೀಕ್ಷೆಗೆ ಲ್ಯಾಬ್ ಸ್ಥಾಪಿಸುವ ಮೂಲಕ ಆಹಾರ ಸುರಕ್ಷತೆಗೆ ವಿಶೇಷ ಆದ್ಯತೆ, ಸ್ಥಳೀಯ ಮಹಿಳೆಯರಿಗೆ ಉದ್ಯೋಗವಕಾಶ ಕಲ್ಪಿಸಲು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಆದ್ಯತೆ, ಸಂಸ್ಕರಿತ ಮೀನು, ತರಕಾರಿ, ಹಣ್ಣು ರಫ್ತು ಮಾಡುವ ಯೋಜನೆಯನ್ನು ರೂಪಿಸಿ ಉದ್ದಿಮೆದಾರರಿಗೆ ಪ್ರೋತ್ಸಾಹ, ಸೀಮಿತ ಪ್ರದೇಶಗಳಲ್ಲಿ ಫುಡ್ ಪಾರ್ಕ್ ಗಳ ನಿರ್ಮಾಣ. ಮಹಿಳೆಯರ ಸುರಕ್ಷತೆಗೆ ಒತ್ತು.

    ಮಂಗಳೂರು ನಗರದ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗುವುದು. ಮಂಗಳೂರು ನಗರಕ್ಕೆ ಹೊಸ ಈಜುಕೊಳ ನಿರ್ಮಾಣ ಅನುಷ್ಠಾನ ಹಂತದಲ್ಲಿದ್ದು ಬೇಡಿಕೆಗನುಗುಣವಾಗಿ ಇನ್ನಷ್ಟು ಈಜುಕೊಳ ನಿರ್ಮಾಣಕ್ಕೆ ಕ್ರಮ, ಮಂಗಳಾ ಸ್ಟೇಡಿಯಂ ಹಂತ ಹಂತವಾಗಿ ಅಭಿವೃದ್ಧಿಗೊಂಡಿದ್ದು, ಇನ್ನಷ್ಟು ಉನ್ನತೀಕರಣಕ್ಕೆ ಕ್ರಮ, ಗ್ರೀನ್ ಕಾನ್ಸೆಪ್ಟ್ ಅಡಿಯಲ್ಲಿ ವಾರ್ಡ್ ಗೆ ಒಂದು ಉದ್ಯಾನವನ ಅಭಿವೃದ್ಧಿ, ನಗರದ ಹಲವು ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಮುಂದಿನ ಹಂತದಲ್ಲಿ ಎಲ್ಲ ಕೆರೆಗಳ ಪುನಃಶ್ಚೇತನಕ್ಕೆ ನಿರ್ಧಾರ.

    ನೆರೆ ಬಾತ ಪ್ರದೇಶಗಳಿಗೆ ತಡೆಗೋಡೆ ನಿರ್ಮಾಣ, ಕೃತಕ ನೆರೆ ತಡೆಗೆ ಪರಿಹಾರ, ಮೀನುಗಾರಿಕಾ ಬೋಟಿನ ಸುಗಮ ಸಂಚಾರಕ್ಕೆ ಡ್ರೆಜ್ಜಿಂಗ್, ಮೀನುಗಾರಿಕಾ ಬಂದರಿನ ಅಭಿವೃದ್ಧಿ ಹಾಗೂ ಮೀನು ಮಾರುಕಟ್ಟೆ ಅಭಿವೃದ್ಧಿಗೆ ಆದ್ಯತೆ.

    ಸೂರಿಲ್ಲದ ಬಡವರಿಗೆ ಸೂರು ಕಲ್ಪಿಸಲು ಹೆಚ್ಚಿನ ಗಮನ ಹರಿಸಲಾಗುವುದು. ಟಿಡಿಆರ್ ಮೂಲಕ ಭೂ ಸ್ವಾಧೀನಪಡಿಸಿ ಆರ್ಥಿಕ ದುರ್ಬಲರಿಗೆ ಸೂರು ಕಲ್ಪಿಸುವ ಯೋಜನೆ ಇದೆ, ಹಕ್ಕುಪತ್ರ ವಿತರಣೆಗೆ ಕ್ರಮ ವಹಿಸಲಾಗುವುದು, ಶಕ್ತಿನಗರ ವಸತಿ ಸಮುಚ್ಚಯ ಯೋಜನೆಗೆ ಇದ್ದ ಕಾನೂನು ಅಡೆತಡೆಗಳು ನಿವಾರಣೆಗೊಂಡಿದ್ದು ಶೀಘ್ರದಲ್ಲಿ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿ ಅನೇಕರಿಗೆ ಸೂರಿನ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು.

    ಮಂಗಳೂರು ನಗರ ದೇಶದಲ್ಲೇ ಶೈಕ್ಷಣಿಕ ಹಬ್ ಆಗಿ ಗುರುತಿಸಿಕೊಂಡಿದ್ದು, ಇಲ್ಲಿನ ಶಿಕ್ಷಣ ವ್ಯವಸ್ಥೆಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ, ಮಂಗಳೂರಿನಲ್ಲಿ ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪನೆಗೆ ಯತ್ನ, ನಗರ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳ ಪರಿಸರದ ಸುಧಾರಣೆಗೆ `ಸ್ಕೂಲ್ ಝೋನ್’ ಪರಿಕಲ್ಪನೆ ಜಾರಿ. ಈಗಾಗಲೇ ಮೂರು ಸಂಸ್ಥೆಗಳ ಆವರಣದಲ್ಲಿ ಯೋಜನೆ ಪ್ರಾಯೋಗಿಕ ಜಾರಿ.

    ಇದನ್ನು ಆಯ್ದ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಗೆ ವಿಸ್ತರಣೆ. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಈಗಾಲೇ 13 ಶಾಲೆಗಳಿಗೆ ಸ್ಮಾರ್ಟ್ ಲುಕ್ ನೀಡಲಾಗಿದ್ದು, ಇನ್ನಷ್ಟು ಶಾಲೆಗಳ ಅಭಿವೃದ್ಧಿಗೆ ಕ್ರಮ.

    ನಗರದ ಶಾಲಾ ಕಾಲೇಜುಗಳಿಗೆ ಬರುವ ಹೊರ ಜಿಲ್ಲಾ, ಹೊರ ರಾಜ್ಯ ವಿದ್ಯಾರ್ಥಿ/ ವಿದ್ಯಾರ್ಥಿನಿಯರ ಸುರಕ್ಷತೆಗೆ ಆದ್ಯತೆ.

    ಮಂಗಳೂರು ನಗರ ಆರೋಗ್ಯ ಕ್ಷೇತ್ರದಲ್ಲೂ ಸಾಕಷ್ಟು ಪ್ರಸಿದ್ಧಿ ಪಡೆದಿದ್ದು, ಇನ್ನಷ್ಟು ಸುಧಾರಣೆಗೆ ಕ್ರಮ.

    ನಗರದ ಸರಕಾರಿ ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಗಳು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಗೊಂಡಿದ್ದು, ಇನ್ನಷ್ಟು ಮೂಲಭೂತ ಸೌಲಭ್ಯ ಅಳವಡಿಕೆಗೆ ಆದ್ಯತೆ, ನಗರದ ವ್ಯಾಪ್ತಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ, ಇನ್ನಷ್ಟು ಕೇಂದ್ರಗಳಿಗೆ ನಮ್ಮ ಕ್ಲಿನಿಕ್ ವಿಸ್ತರಣೆ, ಬಡವರಿಗೆ ಸುಲಭದಲ್ಲಿ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ, ಮಂಗಳೂರು ಮೆಡಿಕಲ್ ಟೂರಿಸಂಗೆ ಪ್ರಸಿದ್ಧಿ ಪಡೆದಿದ್ದು, ದೇಶ, ವಿದೇಶದಿಂದ ವೈದ್ಯಕೀಯ ಸೌಲಭ್ಯ ಪಡೆಯಲು ಬರುವವರಿಗೆ ಸವಲತ್ತುಗಳನ್ನು ಕಲ್ಪಿಸಲು ಆದ್ಯತೆ.

    ಮಂಗಳೂರು ಪರಿಸರದಲ್ಲಿ ಟೆಕ್ಸ್ ಟೈಲ್ ಪಾರ್ಕ್ ಮಾದರಿಯಲ್ಲಿ ಸಣ್ಣ ಉದ್ದಿಮೆ ಘಟಕಗಳ ಸ್ಥಾಪನೆಗೆ ಆದ್ಯತೆ, ಈ ಮೂಲಕ ಬಡ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಆದ್ಯತೆ.

    ಬೀಡಿ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಆದ್ಯತೆ. ಸಣ್ಣ ಕೈಗಾರಿಕೆಗಳಿಗೆ ಉತ್ತಮ ಮೂಲಭೂತ ಸೌಕರ್ಯ ಅಳವಡಿಕೆ.

    ಮಂಗಳೂರಿನಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸಲು ಮತ್ತು ಪ್ರತಿಭಾ ಪಲಾಯನವನ್ನು ತಡೆಗಟ್ಟಲು ಸ್ಟಾರ್ಟ್ ಅಪ್ ಕೇಂದ್ರಗಳ ಉತ್ತೇಜನ ಹಾಗೂ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕ್ರಮ.

    ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಗಳಲ್ಲಿ ಒಂದಾಗಿಸಲು ಈಗಾಗಲೇ ಸರಕಾರ ಮಟ್ಟದಲ್ಲಿ ಪ್ರಯತ್ನ ನಡೆದಿದ್ದು, ಅದಕ್ಕೆ ಇನ್ನಷ್ಟು ಒತ್ತಡ ತರುವ ಪ್ರಯತ್ನ.

    ಕಳೆದ ಐದು ವರ್ಷಗಳಲ್ಲಿ ನಗರದಲ್ಲಿ ಬಹುತೇಕ ಶಾಂತಿ ಸುವ್ಯವಸ್ಥೆ ನೆಲೆಸಿದ್ದು, ಕೋಮು ಸೌಹಾರ್ದತೆಗೆ ವಿಶೇಷ ಆದ್ಯತೆ.

    ಗ್ರೀನ್ ಸಿಟಿ ಪರಿಕಲ್ಪನೆಗೆ ಒತ್ತು, ನಗರದಲ್ಲಿ ಹೂ ತೋಟ, ತಾರಸಿತೋಟ ಸಾವಯವ ಬೆಳೆಗೆ ಪ್ರೋತ್ಸಾಹ ನೀಡಲು ಕ್ರಮ. ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಸುಧಾರಣೆಗೆ ಕ್ರಮ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending