Connect with us

    DAKSHINA KANNADA

    ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಮಂಗಳೂರು ತಹಶೀಲ್ದಾರ್ ಸಹಾಯಕ ಶಿವಾನಂದ..!

    Published

    on

    ಮಂಗಳೂರು: ತಹಶೀಲ್ದಾರ್‌ ಅವರ ಸಹಾಯಕ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಂಗಳೂರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ.


    ಮಂಗಳೂರು ಮಿನಿ ವಿಧಾನಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಹಶೀಲ್ದಾರ್‌ ಸಹಾಯಕ ಅಧಿಕಾರಿ ಶಿವಾನಂದ ಎಂಬಾತ ಎನ್‌ಒಸಿ ಮಾಡಿಸಿಕೊಡಲು ಸಾರ್ವಜನಿಕರೊಬ್ಬರಿಂದ ಲಂಚ ಕೇಳಿದ್ದ.


    ಅದರಂತೆ ಅವರು ಇಂದು ಮಧ್ಯಾಹ್ನ 4700 ರೂ. ತೆಗೆದುಕೊಂಡು ಬಂದಿದ್ದರು. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಆತ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.


    ಲೋಕಾಯುಕ್ತ ಎಸ್ಪಿ ಲಕ್ಷ್ಮಿ ಗಣೇಶ್ ಹಾಗೂ ಡಿವೈಎಸ್‌ಪಿ ಚೆಲುವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.


    ಎಸಿಬಿ ರದ್ದುಗೊಂಡು ಲೋಕಾಯುಕ್ತಕ್ಕೆ ಮರಳಿ ಅಧಿಕಾರ ದೊರಕಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಕರಣ ಇದಾಗಿದೆ.

    BELTHANGADY

    ಗುರುವಾಯನಕೆರೆ – ಹೊಂಡ ತಪ್ಪಿಸಲು ಹೋಗಿ ಕಾರುಗಳು ಜ*ಖಂ

    Published

    on

    ಗುರುವಾಯನಕೆರೆ: ಇಂದು (ಅ.12) ಮುಂಜಾನೆ ಎರಡು ಕಾರುಗಳ ನಡೆವೆ ಭೀಕರ ಅ*ಪಘಾತವು ಗುರುವಾಯನಕೆರೆ ಶಕ್ತಿನಗರದಲ್ಲಿ ಸಂಭವಿಸಿದೆ.


    ಗುರುವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡೆವೆ ಅ*ಪಘಾತ ಸಂಭವಿಸಿದೆ.


    ಐ 20 ಕಾರು ಚಾಲಕ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ ಎಂಬುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

     

     

    ಇದನ್ನೂ ಓದಿ:  ಉಪ್ಪಿನಂಗಡಿ| ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್:‌ ಚಾಲಕ ಮೃ*ತ್ಯು

     

    ಎರಡೂ ಕಾರು ಉಲ್ಟಾ ಬಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿಲ್ಲ ಎಂಬುವುದು ತಿಳಿದು ಬಂದಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Continue Reading

    DAKSHINA KANNADA

    ಮಂಗಳೂರು – ಕಟೀಲಮ್ಮನ ಮಡಿಲಲ್ಲಿ ಹಲವಾರು ಬಣ್ಣದ ವೇಷಗಳ ವೈಭವ

    Published

    on

    ಮಂಗಳೂರು: ನಂದಿನಿ ನದಿಯ ಮಧ್ಯದಲ್ಲಿ ರಾರಾಜಿಸುತ್ತಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಅದ್ದೂರಿಯಾಗಿ ನಡೆಯುವ ಶರನ್ನವರಾತ್ರಿ ಉತ್ಸವದ ವೈಭವ ಒಂದು ಕಡೆಯಾದರೆ ಹುಲಿ, ಸಿಂಹ ಸೇರಿದಂತೆ ಸಾವಿರಾರು ಬಣ್ಣದ ವೇಷಗಳು ಸೇವೆ ಸಲ್ಲಿಸುವ ಸೊಬಗು ಇನ್ನೊಂದು ಕಡೆ.


    ಹಲವಾರು ತಂಡಗಳು ಹುಲಿ ವೇಷ ಹಾಕಿ ತಿರುಗಾಟ ನಡೆಸಿ ಅಂತಿಮವಾಗಿ ಕಟೀಲಿಗೆ ಬಂದು ದೇವಾಲಯದ ಆವರಣದಲ್ಲಿ ನರ್ತಿಸಿ ವೇಷ ಕಳಚಿ ನಂದಿನಿ ನೀರಿನಲ್ಲಿ ಮಿಂದು ಹೋಗುವುದು ರೂಢಿ. ವೇಷ ಹಾಕುವಾಗಲೇ ಕಟೀಲಿನಲ್ಲಿ ವೇಷ ಬಿಚ್ಚುತ್ತೇವೆ ಎಂದು ಹರಕೆ ಹೊತ್ತವರು ಒಂದೆಡೆಯಾದರೆ, ಕಟೀಲು ಕ್ಷೇತ್ರದಲ್ಲೇ ಸೇವೆ ಸಲ್ಲಿಸಿ ಮರಳಿ ಅಲ್ಲೇ ವೇಷ ಬಿಚ್ಚುತ್ತೇವೆ ಎನ್ನುವವರು ಇನ್ನೊಂದೆಡೆ ಇದ್ದಾರೆ. ಇದು ತಲತಲಾಂತರಗಳಿಂದ ಪಾಲಿಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.


    ಶರನ್ನವರಾತ್ರಿ ಸಮಯದಲ್ಲಿ ಕಟೀಲು ದೇವಾಲಯದ ಆವರಣದಲ್ಲಿ ನಿತ್ಯವೂ ಹತ್ತಾರು ತಂಡಗಳ ಹುಲಿ ವೇಷ ನರ್ತನ ಇರುತ್ತದೆ. ಒಟ್ಟಾರೆಯಾಗಿ 2000 ಕ್ಕೂ ಅಧಿಕ ವೇಷಗಳು , 70 ರಿಂದ 80 ತಂಡಗಳು ಕಟೀಲು ಸನ್ನಿಧಿಗೆ ಬಂದು ಸೇವೆ ಸಲ್ಲಿಸುತ್ತವೆ ಎಂದು ಹೇಳಬಹುದು.

    Continue Reading

    DAKSHINA KANNADA

    ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    Published

    on

    ಬೆಂಗಳೂರು: ಈ ಬಾರಿಯ ದಸರಾ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.

    ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಯಲ್ಲಿ ನೀರು ರಭಸದಿಂದ ಹರಿದು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

    Continue Reading

    LATEST NEWS

    Trending