Tuesday, January 31, 2023

ಮಂಗಳೂರು : ಯೋಧ ಮುರಳೀಧರರಿಗೆ ಭಾವಪೂರ್ಣ ಕಣ್ಣೀರ ವಿದಾಯ..!

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಮೃತಪಟ್ಟ ಯೋಧ ಮುರಳೀಧರ್ ರೈಯ ಅಂತ್ಯಸಂಸ್ಕಾರ ನಗರದ ಶಕ್ತಿನಗರದಲ್ಲಿ ಸಕಲ ಸರಕಾರಿ ಗೌರವದೊಂದಿಗೆ ನೆರವೇರಿತು. 

ಮಂಗಳೂರು:ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಮೃತಪಟ್ಟ ಯೋಧ ಮುರಳೀಧರ್ ರೈಯ ಅಂತ್ಯಸಂಸ್ಕಾರ ನಗರದ ಶಕ್ತಿನಗರದಲ್ಲಿ ಸಕಲ ಸರಕಾರಿ ಗೌರವದೊಂದಿಗೆ ನೆರವೇರಿತು. 

ನಗರದ ಖಾಸಗಿ ಆಸ್ಪತ್ರೆಯಲ್ಲಿದ್ದ ಪಾರ್ಥಿವ ಶರೀರವನ್ನು ಶಕ್ತಿನಗರದ ಮುಗ್ರೋಡಿ ಸಂಜಯನಗರದ ಅವರ ಮನೆಯಿಂದ ಮೆರವಣಿಗೆ ಮೂಲಕ ಆಂಜನೇಯ ಸಭಾಭವನ ಮೈದಾನಕ್ಕೆ ತಂದು ಸಾರ್ವಜನಿಕ ವೀಕ್ಷಣೆಗಾಗಿ ಅವಕಾಶ ಕಲ್ಪಿಸಲಾಯಿತು.

ಗೌರವ ಸೂಚಕವಾಗಿ ಕುಶಾಲ ತೋಪು ಹಾರಿಸಲಾಯಿತು. ಈ ಸಂದರ್ಭ ಸಾಹಸ್ರಾರು ಮಂದಿ ದೇಶಪ್ರೇಮಿಗಳು, ಮುರಳೀಧರ ರೈ ಅವರ ಅಭಿಮಾನಿಗಳು, ಊರವರು, ಗಣ್ಯರು, ದಕ್ಷಿಣ ಕನ್ನಡ ಜಿಲ್ಲಾಡಳಿತದ ಹಿರಿಯ ನಾಯಕರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಈ ಸಂದರ್ಭ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್, ಶಾಸಕ ವೇದವ್ಯಾಸ ಕಾಮತ್, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಪಾಲಿಕೆಯ ಸದಸ್ಯರಾದ ಶಕೀಲಾ ಕಾವಾ, ಸುಧೀರ್ ಶೆಟ್ಟಿ, ವನಿತಾ ಪ್ರಸಾದ್ ಉಪಸ್ಥಿತರಿದ್ದರು.

ಬಳಿಕ ಸರಕಾರಿ ಗೌರವ ಸಲ್ಲಿಸಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಅಮರ್ ರಹೇ ಅಮರ್ ರಹೇ ಮುರಳೀಧರ ಅಮರ್‌ ರಹೇ ಎನ್ನುವ ಘೊಷಣೆಗಳ ಮಧ್ಯೆ ಮುರಳೀಧರ ಅವರು ಪಂಚ ಭೂತಗಳಲ್ಲಿ ವಿಲೀನರಾದರು.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಮೃತ್ಯು..!

ಆಟೋ ರಿಕ್ಷಾವೊಂದು ಸೇತುವೆ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಒಂದು ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಾಲಾಡಿಯಲ್ಲಿ ನಡೆದಿದೆ.ಬೆಳ್ತಂಗಡಿ : ಆಟೋ ರಿಕ್ಷಾವೊಂದು ಸೇತುವೆ...

ಮಂಗಳೂರು ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ :ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.ಕೇರಳ ಗಡಿಭಾಗದ...

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...