DAKSHINA KANNADA
ಮಂಗಳೂರು : ಕೋಮು ಸೌಹಾರ್ದಕ್ಕೆ ಧಕ್ಕೆ – 21 ಪ್ರಕರಣಗಳು ದಾಖಲು.!
ಮಂಗಳೂರು ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ 21 ಪ್ರಕರಣಗಳು ದಾಖಲಾಗಿದ್ದು ಸೌಹರ್ದತೆ ಕೆಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.
ಮಂಗಳೂರು : ಮಂಗಳೂರು ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ 21 ಪ್ರಕರಣಗಳು ದಾಖಲಾಗಿದ್ದು ಸೌಹರ್ದತೆ ಕೆಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.
ಮತ್ತು ಸಾಮಾಜದ ಸ್ವಾಸ್ಥ್ಯ ಕದಡುವ ಈ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ಆ್ಯಪ್, ಫೇಸ್‌ಬುಕ್, ಇನ್ಸ್ಟಾಗ್ರಾಮ್, ಟ್ವೀಟರ್‌ಗಳಲ್ಲಿ ಧರ್ಮಗಳ ವಿಚಾರದಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಅಂಶಗಳ ಸಂದೇಶವನ್ನು ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು ಶಿಕ್ಷಾರ್ಹವಾಗಿದೆ.
ಇಂತಹುಗಳ ಮೇಲೆ ಇಲಾಖೆ ನಿಗಾ ಇರಿಸಿದೆ. ಅಲ್ಲದೆ ಕಳೆದೊಂದು ತಿಂಗಳ ಅವಧಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ಬಗ್ಗೆ ನಗರದ ಎಲ್ಲಾ ಪೊಲೀಸ್ ಠಾಣೆಗಳ ಸೋಶಿಯಲ್ ಮೀಡಿಯಾ ಸೆಲ್‌ನಲ್ಲಿ ನಿಗಾ ವಹಿಸಲಾಗುತ್ತದೆ.
ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.
DAKSHINA KANNADA
Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!
ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.
ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.
ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.
ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.
ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
DAKSHINA KANNADA
ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ