Connect with us

    DAKSHINA KANNADA

    ಮಂಗಳೂರು: ಚುನಾವಣೆಗೆ ಪ್ರವಾಸಿ ವಾಹನಗಳನ್ನು ಬಲವಂತದಿಂದ ವಶಕ್ಕೆ : ಪೊಲೀಸ್‌ ಅಧಿಕಾರಿಗಳ ಮೇಲೆ ಪಬ್ಲಿಕ್ ಗರಂ..!

    Published

    on

    ರಾಜ್ಯ ವಿಧಾನ ಸಭಾ ಚುನಾವಣೆಗೆ ಇನ್ನು ಕೇವಲ 9 ದಿನಗಳು ಬಾಕಿ ಇದ್ದು, ಚುನಾವಣಾ ಆಯೋಗದಿಂದ ಭರದ ಸಿದ್ಧತೆಗಳು ನಡೆಯುತ್ತಿವೆ. ಇದರ ಭಾಗವಾಗಿ ಚುನಾವಣೆ ಸಂದರ್ಭ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಓಡಾಡಲು ಅಗತ್ಯವಾಗಿ ಬೇಕಾಗಿರುವ ವಾಹನಗಳ ವ್ಯವಸ್ಥೆ ಮಾಡಲು ಜಿಲ್ಲಾಡಳಿತವು ಪೊಲೀಸರ ಸಹಕಾರದಿಂದ ಪ್ರವಾಸಿ ಕಾರುಗಳನ್ನು ಬಲವಂತವಾಗಿ ಪಡೆಯಲು ಪ್ರಯತ್ನ ನಡೆಸುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ.

    ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಇನ್ನು ಕೇವಲ 9 ದಿನಗಳು ಬಾಕಿ ಇದ್ದು, ಚುನಾವಣಾ ಆಯೋಗದಿಂದ ಭರದ ಸಿದ್ಧತೆಗಳು ನಡೆಯುತ್ತಿವೆ. ಇದರ ಭಾಗವಾಗಿ ಚುನಾವಣೆ ಸಂದರ್ಭ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಓಡಾಡಲು ಅಗತ್ಯವಾಗಿ ಬೇಕಾಗಿರುವ ವಾಹನಗಳ ವ್ಯವಸ್ಥೆ ಮಾಡಲು ಜಿಲ್ಲಾಡಳಿತವು ಪೊಲೀಸರ ಸಹಕಾರದಿಂದ ಪ್ರವಾಸಿ ಕಾರುಗಳನ್ನು ಬಲವಂತವಾಗಿ ಪಡೆಯಲು ಪ್ರಯತ್ನ ನಡೆಸುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ.

    ಚಾಲಕರು ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗಲೇ ವಾಹನಗಳನ್ನು ಅಡ್ಡಗಟ್ಟಿ ಅರ್ಧದಾರಿಯಲ್ಲಿ ಇಳಿಸಿ ಪೊಲೀಸರು ಎಸಗುತ್ತಿರುವ ದೌರ್ಜನ್ಯ ಮಿತಿಮೀರಿದ್ದು, ರಕ್ಷಕರೆನ್ನಿಸಿಕೊಂಡವರು ಮಾಡುವ ನೀಚ ಕೆಲಸ ಇದೇನಾ ಎಂದು ಪ್ರಶ್ನಿಸುವಂತಾಗಿದೆ.

    ಪೊಲೀಸರ ಈ ಕ್ರಮದ ವಿರುದ್ಧ ಟೂರಿಸ್ಟ್‌ ಕಾರು ಚಾಲಕ, ಮಾಲಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

    ವಿಶೇಷವೆಂದರೆ ಕೆಲವು ಮಂದಿ ಸರಕಾರಿ ಅಧಿಕಾರಿಗಳಿಗೆ ಚುನಾವಣೆ ಸಂದರ್ಭ ಓಡಾಡಲು ಐಶಾರಾಮಿ ಇನೋವಾ ಕಾರೇ ಬೇಕಂತೆ ! ವಾಹನಗಳನ್ನು ಪಡೆಯಲು ಟೂರಿಸ್ಟ್‌ ಟ್ಯಾಕ್ಸಿ ಚಾಲಕ/ ಮಾಲಕರ ಸಂಘವನ್ನು ಸಂಪರ್ಕಿಸುವ ಅಥವಾ ಟ್ಯಾಕ್ಸಿ ನಿಲ್ದಾಣಗಳಿಗೆ ಭೇಟಿ ನೀಡಿ ವಿಚಾರಿಸುವ ಬದಲು ರಸ್ತೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿರುವ ಟ್ಯಾಕ್ಸಿಗಳನ್ನು ತಡೆದು ನಿಲ್ಲಿಸಿ ಅದರಲ್ಲಿ ಪೊಲೀಸರನ್ನು ಕುಳ್ಳಿರಿಸಿ ಒತ್ತಾಯ ಪೂರ್ವಕವಾಗಿ ಆರ್‌ಟಿಒ ಕಚೇರಿಗೆ ಕಳುಹಿಸುತ್ತಿರುವ ವಿದ್ಯಮಾನ ಇಂದು ನಡೆದಿದ್ದು, ಅದಾನಿ ಗ್ರೂಪ್‌ನ ದಕ್ಷಿಣ ಭಾರತದ ಸಿಇಒ ಕಿಶೋರ್ ಆಳ್ವಾ ಅವರು ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಲ್ಲದೆ ಅವರು ಜಿಲ್ಲಾಧಿಕಾರಿ ರವಿಕುಮಾರ್ ಅವರನ್ನು ಸಂಪರ್ಕಿಸಿ ಪೊಲೀಸರ ಕ್ರಮದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸಾರ್ವಜನಿಕರು ಮುಂಚಿತವಾಗಿ ಬುಕ್‌ ಮಾಡಿ ಜನರನ್ನು ಅವರ ಕಾರ್ಯಕ್ರಮಗಳಿಗೆ ಕರೆದೊಯ್ಯುತ್ತಿರುವ ಸಂದರ್ಭದಲ್ಲಿ ಪೊಲೀಸರು ತಡೆದು ನಿಲ್ಲಿಸುತ್ತಿರುವ ಬಗ್ಗೆ ಟ್ಯಾಕ್ಸಿ ಚಾಲಕ/ ಮಾಲಕರಿಂದ ಆಕ್ರೋಶ ವ್ಯಕ್ತವಾಗಿದೆ. ಈ ಕ್ರಮ ಸರಿಯಲ್ಲ ಎಂದವರು ತಿಳಿಸಿದ್ದಾರೆ.

    ಇಂತಹ ಕಿರುಕುಳವನ್ನು ನಿಲ್ಲಿಸಬೇಕೆಂದು ಜಿಲ್ಲಾಡಳಿತವನ್ನು ಅಗ್ರಹಿಸಿದ್ದಾರೆ.

    ಇನ್ನು ಪೊಲೀಸರ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಅಸೋಸಿಯೇಶನ್‌ ಸಂಘದ ನಾಯಕ ಜಗತ್‌ ರೈ ಅವರು, ನಮ್ಮ ಕಷ್ಟವನ್ನು ಕೇಳುವವರಿಲ್ಲದಂತಾಗಿದೆ.

    ಜಿಲ್ಲಾಡಳಿತ ಇದೇ ರೀತಿ ಈ ಹಿಂದೆ ನಮ್ಮ ವಾಹನಗಳನ್ನು ಸರಕಾರಿ ಅಧಿಕಾರಿಗಳ ಓಡಾಟಕ್ಕೆ ಬಳಸಿಕೊಂಡಿದೆ. ಆದರೆ ಅದರ ಬಾಡಿಗೆ ಇನ್ನೂ ನಮಗೆ ಪಾವತಿ ಆಗಿಲ್ಲ.

    ನಾವು ಯಾರನ್ನು ಕೇಳುವುದು..? ಇಲ್ಲಿನ ಅಧಿಕಾರಿಗಳನ್ನು ಕೇಳಿದರೆ ಈ ವಿಚಾರ ನಮಗೆ ಗೊತ್ತಿಲ್ಲ..ನೀವು ದೆಹಲಿ ಅಧಿಕಾರಿಗಳನ್ನು ಸಂಪರ್ಕಿಸಿ ಎಂದು ಹೇಳುತ್ತಿದ್ದಾರೆ.

    ಸಾಲ ಮಾಡಿ ವಾಹನ ಖರೀದಿಸಿ ನಾವು ಬ್ಯಾಂಕ್ ಸಾಲ ಕಟ್ಟಲು ಪರದಾಡುತ್ತಿರುವಾಗ ಚುನಾವಣಾ ಕಮಿಷನ್‌ ಹೆಸರಿನಲ್ಲಿ ಪೊಲೀಸರ ಇಂತಹ ದೌರ್ಜನ್ಯ, ದಬ್ಬಾಳಿಕೆ ಸರಿಯೇ..? ಇದೆಲ್ಲಾ ಜಿಲ್ಲಾಧಿಕಾರಿಗಳಿಗೆ ಗೊತ್ತಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

    BIG BOSS

    ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ

    Published

    on

    ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್‌ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.

    ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

    ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಂಚು ರೂಪಿಸುತ್ತಿದ್ದಾಗಲೇ ಅರೆಸ್ಟ್‌

    Published

    on

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.

    ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್‌ನನ್ನು ಬಂಧಿಸಲು ಮುಂದಾಗಿದೆ.

    ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್‌ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

    ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .

    Continue Reading

    BIG BOSS

    ಕೊಣಾಜೆ: 3 ವರ್ಷದ ಬಾಲೆಗೆ ಕಿ*ರುಕುಳ ನೀಡಿದ 70ರ ಅಜ್ಜ ಅರೆಸ್ಟ್

    Published

    on

    ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ,‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.

    ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Continue Reading

    LATEST NEWS

    Trending