DAKSHINA KANNADA
Mangaluru: ಮಾರಣಾಂತಿಕವಾಗುತ್ತಿರುವ ವೆಲೆನ್ಸಿಯಾದ ರಸ್ತೆ ಗುಂಡಿ..!
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಂಕನಾಡಿ ಜಂಕ್ಷನ್‌ನಿಂದ ನಂದಿಗುಡ್ಡೆ ಸಂಪರ್ಕಿಸುವ ವೆಲೆನ್ಸಿಯಾ ರಸ್ತೆ ದಿನನಿತ್ಯ ವಾಹನ ಸವಾರರಿಗೆ, ಪಾದಚಾರಿಗಳಿಗೆ ಮಾರಣಾಂತಿಕವಾಗುತ್ತಿದೆ. ಇದೀಗ ಮತ್ತೆ ಇಲ್ಲಿ ಕಾಂಕ್ರಿಟ್ ರಸ್ತೆಯನ್ನು ಅಗೆದು ನೀರಿನ ಪೈಪ್ ದುರಸ್ತಿ ಪಡಿಸುವ ಕಾಮಗಾರಿ ನಡೆಸಲಾಗುತ್ತಿದ್ದು, ಇಲ್ಲಿ ಅಗೆದ ಗುಂಡಿಯನ್ನು ಸರಿಯಾಗಿ ಮುಚ್ಚದ ಕಾರಣ ಭಾನುವಾರ ರಾತ್ರಿ ಇಲ್ಲಿನ ಹೊಂಡಕ್ಕೆ ದ್ವಿಚಕ್ರ ವಾಹನ ಸವಾರರು ಬಿದ್ದು ಗಂಭೀರ ಗಾಯಗೊಂಡು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಸೋಮವಾರ ಬೆಳಿಗ್ಗೆ ಪಾಲಿಕೆಯ ಅಧಿಕಾರಿಗಳ ಸಹಿತ ಘಟನೆ ನಡೆದ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆಯ ಪಡೀಲ್ ಮದರ್ ಟ್ಯಾಂಕ್‌ನಿಂದ ಹೋಗುವ ನೀರು ಸರಬರಾಜು ಕೊಳವೆಯಲ್ಲಿ ಇರುವ ಲೀಕೇಜ್ ಸರಿಪಡಿಸಲು ಕಾಂಕ್ರಿಟ್ ರಸ್ತೆಯನ್ನು ಕಟ್ ಮಾಡಿ ದುರಸ್ತಿ ಪಡಿಸುವ ಕೆಲಸ ಮಾಡಲಾಗುತ್ತಿತ್ತು. ಆದರೆ ರಾತ್ರಿ ಮಳೆ ಬಂದ ಕಾರಣ ಗುಂಡಿಯನ್ನು ಸರಿಯಾಗಿ ಮುಚ್ಚದ ಕಾರಣ, ಇಲ್ಲಿ ಬ್ಯಾರಿಕೇಡ್ ಅಳವಡಿಸಿ ಸೂಚನೆ ಹಾಕಿದ್ದರು. ಆದರೆ ರಿಕ್ಷಾ ಚಾಲಕರೊಬ್ಬರು ಬ್ಯಾರಿಕೇಡ್‌ಗೆ ಹಾನಿ ಮಾಡಿದ್ದಾರೆ, ಬಳಿಕ ದ್ವಿಚಕ್ರ ವಾಹನ ಸವಾರರೊಬ್ಬರಿಗೆ ಇಲ್ಲಿನ ಗುಂಡಿ ಅರಿವಿಲ್ಲದೇ ಅದಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದರು.
ಅಲ್ಲದೆ ಆಸ್ಪತ್ರೆಯಲ್ಲಿರುವ ಸಂತ್ರಸ್ತನ ಯುವಕನ ಆರೋಗ್ಯ ವಿಚಾರಿಸಲಿದ್ದೇನೆ ಎಂದರು. ಕಾಮಗಾರಿ ವಹಿಸಿರುವ ಗುತ್ತಿಗೆದಾರರಿಂದಲೇ ಯುವಕನ ಖರ್ಚಿಗೆ ಹಣ ನೀಡುವಂತೆ ಸೂಚನೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಕಾಮಗಾರಿ ನಡೆಯುವ ಜಾಗದಲ್ಲಿ ಯಾವುದೇ ದುರಂತಗಳು ಆಗದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು. ಮೇಯರ್ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಪೋರೇಟರ್ ಗಳಾದ ಜೆಸಿಂತಾ ಆಲ್ಫೇಡ್, ಸಂದೀಪ್ ಗರೋಡಿ, ಪಾಲಿಕೆಯ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು. ಬಳಿಕ ಈ ಗುಂಡಿಯನ್ನು ಕಾರ್ಮಿಕರಿಂದ ಮುಚ್ಚಿಸಲಾಯಿತು.
DAKSHINA KANNADA
Surathkal: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ- ವಿದ್ಯಾರ್ಥಿನಿಯರು ಗಂಭೀರ..!
ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಗಾಯಗೊಂಡವರು ಎಂದು ತಿಳಿದು ಬಂದಿದೆ. ಇನ್ನೋರ್ವಳ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್