Connect with us

DAKSHINA KANNADA

Mangaluru: ಮಾನಸಿಕ ಆರೋಗ್ಯ ಕಾಳಜಿ ಕಾಯ್ದೆ 2017ರ ಕಾರ್ಯಾಗಾರ

Published

on

ಮಾನಸಿಕ ಆರೋಗ್ಯ ಕಾಳಜಿ ಕಾಯ್ದೆ 2017 ರನ್ವಯ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿ ಮತ್ತು ನ್ಯಾಯಿಕ ದಂಡಾಧಿಕಾರಿ ಹಾಗೂ ಪೊಲೀಸ್‌ ಇಲಾಖೆಯ ಸಹಕಾರದಲ್ಲಿ’ ಕಾಯ್ದೆ ಅನುಷ್ಠಾನದಲ್ಲಿ ನ್ಯಾಯಿಕ ದಂಡಾಧಿಕಾರಿ ಮತ್ತು ಪೊಲೀಸ್‌ ಪಾತ್ರ’ ದ ಕುರಿತು ಕಾರ್ಯಾಗಾರವೊಂದು ಸೆ.16ರಂದು ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು: ಮಾನಸಿಕ ಆರೋಗ್ಯ ಕಾಳಜಿ ಕಾಯ್ದೆ 2017 ರನ್ವಯ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿ ಮತ್ತು ನ್ಯಾಯಿಕ ದಂಡಾಧಿಕಾರಿ ಹಾಗೂ ಪೊಲೀಸ್‌ ಇಲಾಖೆಯ ಸಹಕಾರದಲ್ಲಿ’ ಕಾಯ್ದೆ ಅನುಷ್ಠಾನದಲ್ಲಿ ನ್ಯಾಯಿಕ ದಂಡಾಧಿಕಾರಿ ಮತ್ತು ಪೊಲೀಸ್‌ ಪಾತ್ರ’ ದ ಕುರಿತು ಕಾರ್ಯಾಗಾರವೊಂದು ಸೆ.16ರಂದು ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರವೀಂದ್ರ ಎಂ. ಜೋಷಿ ಅವರು ಮುಖ್ಯ ಅತಿಥಿಗಳ ಜತೆಗೂಡಿ ಉದ್ಘಾಟಿಸಿದರು.

ರವೀಂದ್ರ ಎಂ. ಜೋಷಿ ಅವರು ಮಾತನಾಡಿ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯದ ಬಗ್ಗೆಯೂ ಹೆಚ್ಚು ಗಮನ ಹರಿಸುವ ಅಗತ್ಯವಿದೆ.

ಸರಕಾರ ಕಾನೂನುಗಳನ್ನು ತಂದಿದ್ದು ಅವುಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡ ಬೇಕು.

ಈ ಬಗ್ಗೆ ಮಾಹಿತಿ ನೀಡುವುದು ಕಾರ್ಯಾಗಾರದ ಉದ್ಧೇಶ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾ ಅಧಿಕಾರಿ ಡಾ. ಆನಂದ್ ಕೆ. ಅಧ್ಯಕ್ಷತೆ ವಹಿಸಿದ್ದರು.

ನಿಯಾಜ್ ಅಹ್ಮದ್ ಎಸ್. ದಫೆದಾರ ಮತ್ತು ಶೋಭಾ ಬಿ.ಜಿ. ಅವರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಿದರು.

ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿಯ ಮೈಸೂರು ವಿಭಾಗದ ಅಧ್ಯಕ್ಷ ಮತ್ತು ಬೆಂಗಳೂರಿನ ಮಾಜಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನಿಯಾಜ್ ಅಹ್ಮದ್ ಎಸ್. ದಫೆದಾರ, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಪ್ರಭಾರ ಅಧಿಕಾರಿ ಡಾ. ಸುದರ್ಶನ್ ಸಿ,ಎಂ ಅವರು ಸ್ವಾಗತಿಸಿದರು.

DAKSHINA KANNADA

ಅಕ್ಕಿಯಲ್ಲಿ ಕೀಟಗಳಿದ್ದರೆ ಅದನ್ನು ದೂರ ಮಾಡಲು ಹೀಗೆ ಮಾಡಿ…!

Published

on

ಮಂಗಳೂರು: ಅಕ್ಕಿ ಹೆಚ್ಚಿನವರ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಹೀಗಾಗಿ ಅಕ್ಕಿಯಿಂದ ವಿವಿಧ ತಿಂಡಿ ತಿನಿಸುಗಳನ್ನು ತಯಾರಿಸಿ ಸೇವಿಸುತ್ತಾರೆ. ಆದರೆ ಈ ಅಕ್ಕಿಯನ್ನು ಹೆಚ್ಚು ದಿನಗಳವರೆಗೆ ಸಂಗ್ರಹಿಸಿಡುವುದು ಸ್ವಲ್ಪ ಕಷ್ಟವೇ. ಕೆಲವೊಮ್ಮೆ ಮಾಡುವ ಸಣ್ಣ ಪುಟ್ಟ ತಪ್ಪುಗಳಿಂದ ಅಕ್ಕಿಯಲ್ಲಿ ಹುಳಗಳು ಹಾಗೂ ಕೀಟಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಮನೆಯಲ್ಲೇ ಸುಲಭವಾದ ವಿಧಾನವನ್ನು ಬಳಸಿ ಹುಳಗಳು ಹಾಗೂ ಕೀಟಗಳಿಂದ ಅಕ್ಕಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡಬಹುದಾಗಿದೆ.

ಅಕ್ಕಿಯಲ್ಲಿ ವಿವಿಧ ಜೀವಸತ್ವಗಳು ಮತ್ತು ಖನಿಜಗಳು ಹೇರಳವಾಗಿದ್ದು, ವಿಟಮಿನ್ ಡಿ, ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ಥಯಾಮಿನ್ ಮತ್ತು ರಿಬೋಫ್ಲಾವಿನ್ ಗಳಿವೆ. ಕೆಲವರು ಮನೆಯಲ್ಲಿ ಅಕ್ಕಯನ್ನ ಶೇಖರಿಸಿ ಇಟ್ಟರೂ ಕೀಟಗಳು ಹಾಗೂ ಹುಳಗಳ ಬಾಧೆ ತಪ್ಪಿದ್ದಲ್ಲ. ಅಕ್ಕಿಗೆ ಕೀಟಬಾಧೆ ಬಾರದಂತೆ ರಾಸಾಯನಿಕ ಮಿಶ್ರಿತ ಪೌಡರ್ ಬಳಸಿದರೆ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.

  • ಅಕ್ಕಿಯನ್ನು ಸಂಗ್ರಹಿಸುವ ಪ್ರದೇಶವು ಶುಷ್ಕವಾಗಿಟ್ಟುಕೊಳ್ಳಿ. ಅಕ್ಕಿಯ ಚೀಲದಲ್ಲಿ ಮಸಾಲೆ ಪದಾರ್ಥಗಳನ್ನು ಇಟ್ಟರೆ ಕೀಟಗಳು ಬರುವುದಿಲ್ಲ. ಕರ್ಪೂರ, ಇಂಗು, ಲವಂಗ, ದಾಲ್ಚಿನ್ನಿ, ಬಿರಿಯಾನಿ ಎಲೆಗಳು ಮತ್ತು ನಕ್ಷತ್ರದ ಹೂವುಗಳನ್ನು ಕವರ್‌ನಲ್ಲಿ ಹಾಕಿ ಅಕ್ಕಿ ಚೀಲಗಳಲ್ಲಿ ಹಾಕಿಟ್ಟರೆ ದೀರ್ಘಕಾಲದವರೆಗೆ ಯಾವುದೇ ಕೀಟಗಳು ಬಾರದಂತೆ ಸಂರಕ್ಷಿಸಿಡಬಹುದು.
  • ಅಕ್ಕಿಯನ್ನು ಕೀಟಗಳಿಂದ ಮುಕ್ತವಾಗಿಡುವಲ್ಲಿ ಬೇವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಬಹಳಷ್ಟು ಪರಿಣಾಮಕಾರಿಯಾಗಿದೆ.
  • ಅಕ್ಕಿ ಚೀಲಗಳಲ್ಲಿ ಬೆಳ್ಳುಳ್ಳಿ ಮತ್ತು ಉಪ್ಪನ್ನು ಹಾಕಿಟ್ಟರೆ ಅಕ್ಕಿಗೆ ಕೀಟಗಳು ಬರದಂತೆ ನೋಡಿಕೊಳ್ಳಬಹುದು. ಸಿಪ್ಪೆ ಸುಲಿದ ಬೆಳ್ಳುಳ್ಳಿ ಹಾಗೂ ಉಪ್ಪನ್ನು ಕವರ್ ನಲ್ಲಿಟ್ಟು ಅಕ್ಕಿಯ ಶೇಖರಣೆಯಲ್ಲಿಟ್ಟರೆ ಕೀಟಗಳು ಬರುವುದಿಲ್ಲ.
  • ಅಕ್ಕಿ ಚೀಲದಲ್ಲಿ ತುಳಸಿ ಎಲೆಗಳನ್ನು ಇರಿಸಿದರೆ ಹುಳಗಳು ಬೇಗನೇ ಆಗುವುದಿಲ್ಲ.
  • ಒಂದು ವೇಳೆ ಅಕ್ಕಿಯಲ್ಲಿ ಹುಳಗಳು ಆಗಿದ್ದರೆ ಆ ಅಕ್ಕಿಯನ್ನು ಗಾಳಿಯಾಡದ ಕವರ್‌ನಿಂದ ಹಾಕಿಟ್ಟು 3-4 ದಿನಗಳವರೆಗೆ ಫ್ರಿಜ್‌ನಲ್ಲಿ ಇಟ್ಟರೆ ಕೀಟಗಳು ಹಾಗೂ ಹುಳಗಳು ಸಾಯುತ್ತವೆ.
Continue Reading

DAKSHINA KANNADA

ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!

Published

on

ಪುತ್ತೂರು : ಪುತ್ತೂರಿನ ಬೆಟ್ಟಂಪ್ಪಾಡಿಯಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾ*ವನ್ನಪ್ಪಿದ್ದು, ಈ ಬಗ್ಗೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಮೃ*ತ ಯುವಕನ ತಾಯಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 ಪಕ್ಕದ ಮನೆ ಕದ ತಟ್ಟಿದ ಮಗ; ಸಂಕೋಲೆ ಹಾಕಿ ಎಳೆತಂದ ತಾಯಿ :  

ಬೆಟ್ಟಂಪ್ಪಾಡಿಯ ನಿವಾಸಿ ಚೇತನ್ (33) ಮೃ*ತ ಪಟ್ಟಿರುವ ಯುವಕ. ನಿನ್ನೆ ರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್ ತಾಯಿ ಜತೆ ಜಗಳವಾಡಿದ್ದ.  ಬಳಿಕ ಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದ. ಈ ಬಗ್ಗೆ ಯೂಸುಫ್ ಅವರು ಚೇತನ್ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.

ಕೂಡಲೇ ಯೂಸುಫ್ ಮನೆಗೆ ಬಂದ ಚೇತನ್ ತಾಯಿ ನಾಯಿಯನ್ನು ಕಟ್ಟುವ ಸಂಕೊಲೆಯನ್ನು ಚೇತನ್ ಸೊಂಟಕ್ಕೆ ಕಟ್ಟಿ ಮನೆಗೆ ಎಳೆದೊಯ್ದಿದ್ದರು. ಇದಕ್ಕೆ ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಸಾಥ್‌ ನೀಡಿದ್ದರು. ಎಳೆದೊಯ್ಯುವ ಸಂದರ್ಭದಲ್ಲಿ ಚೇತನ್‌ನ ಕುತ್ತಿಗೆಗೆ ಸಂಕೋಲೆ ಸುತ್ತಿಕೊಂಡಿದೆ ಎನ್ನಲಾಗಿದೆ.  ಇದರಿಂದಾಗಿ ಚೇತನ್‌ ಸಾ*ವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆದರೆ ಚೇತನ್ ನೇಣು ಬಿಗಿದು ಸಾ*ವನ್ನಪ್ಪಿದ್ದಾನೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪ್ರಕರಣ; ವೀಡಿಯೋ, ಫೋಟೋ ಅಪ್ಲೋಡ್ ಮಾಡಿದ್ದಾತ ಅರೆಸ್ಟ್

ಮೃ*ತ ದೇಹ ನೋಡಿ ಅನುಮಾನಗೊಂಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕೊಂಡಿದ್ದರು. ಘಟನೆಗೆ ಸಂಬಂಧಿಸಿ ತಾಯಿ ಉಮಾವತಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿರುವ ಪೋಲೀಸರು ಮೃ*ತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ರವಾನಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ.

Continue Reading

DAKSHINA KANNADA

ಹೊಸ ಮನೆಗೆ ಸ್ಥಳಾಂತರಿಸುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಿ

Published

on

ಮಂಗಳೂರು: ಪ್ರತಿಯೊಬ್ಬರಿಗೂ ತಮ್ಮದೇ ಆದ ಸ್ವಂತ ಮನೆಯನ್ನು ಹೊಂದಿರಬೇಕು ಎನ್ನುವ ಕನಸು, ಆಸೆ ಇದ್ದೇ ಇರುತ್ತದೆ. ಮನೆ ಕಟ್ಟುವುದು ಆಗಲಿ ಅಥವಾ ಕೊಂಡುಕೊಳ್ಳುವುದಾಗಲಿ ಅದೇನು ಸುಲಭದ ಮಾತಲ್ಲ. ಬ್ಯಾಂಕ್‌ನಲ್ಲಿ, ಸ್ನೇಹಿತರಲ್ಲಿ, ಕುಟುಂಬದವರಲ್ಲಿ ಸಾಲ ಮಾಡಿ ಹೇಗೊ ಮನೆ ಖರೀದಿಸುತ್ತೇವೆ. ಆದರೆ ಕನಸಿನ ಮನೆ ವಾಸ್ತವಕ್ಕೆ ಬಂದಾಗ ಅದರಲ್ಲಿ ಆಗುವ ಖುಷಿಯೇ ಬೇರೆ.

ಮನೆ ಬದಲು ಮಾಡುವಾಗ ಈ ವಿಷಯ ನೆನಪಿಡಿ

ತಮ್ಮ ಹೊಸ ಮನೆಗೆ ಹೋಗುವ ಖುಷಿಯಲ್ಲಿ ಜನರು ಸಾಮಾನ್ಯವಾಗಿ ಕೆಲವು ವಿಷಯಗಳನ್ನು ಮರೆತು ಬಿಡುತ್ತಾರೆ. ಇದರಿಂದಾಗಿ ಅವರಿಗೆ ನಂತರದ ದಿನಗಳಲ್ಲಿ ಸಮಸ್ಯೆ ಆಗಬಹುದು. ನೀವು ಮನೆ ಬದಲು ಮಾಡುವಾಗ ಕೆಲವು ಪ್ರಮುಖ ವಿಷಯಗಳನ್ನು ತಿಳಿದುಕೊಳ್ಳಿ.

ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿ

ನೀವು ಹೊಸ ಮನೆಗೆ ಸ್ಥಳಾಂತರಗೊಳ್ಳುತ್ತಿದ್ದರೆ ಮೊದಲು ನೀವು ದಿನ ಬಳಕೆಯ ವಿಷಯಗಳತ್ತ ಗಮನ ಕೊಡಬೇಕು. ಆದುದರಿಂದ ನಿಮ್ಮ ಮನೆಯ ಪ್ರತಿಯೊಂದು ನಳ್ಳಿಯಲ್ಲಿ ನೀರು ಬರುತ್ತಿದ್ದೇಯೋ, ವಾಶ್ ರೂಂ ಅನ್ನು ಚೆನ್ನಾಗಿ ಪರಿಶೀಲಿಸಿ, ಮನೆಯ ಫ್ಯಾನ್, ಲೈಟ್ ಸರಿಯಾಗಿ ಇದೆಯೋ ಎಂದು ಗಮನಿಸಿ. ಇದರಿಂದ ಹೊಸ ಮನೆಗೆ ಬಂದ ತಕ್ಷಣ ಯಾವೂದೇ ಸಮಸ್ಯೆ ಎದುರಾಗುವುದಿಲ್ಲ.

ಶುಚಿಗೊಳಿಸುವಿಕೆಯನ್ನು ಮುಂಚಿತವಾಗಿ ಮಾಡಿ

ಹೊಸ ಮನೆಗೆ ಸ್ಥಳಾಂತರಗೊಳ್ಳುವ ಮೊದಲು ಒಮ್ಮೆ ಸ್ವಚ್ಛಗೊಳಿಸಬೇಕು. ಏಕೆಂದರೆ ವಸ್ತುಗಳನ್ನು ಸ್ಥಳಾಂತರಿಸಿದ ನಂತರ ನಿಮಗೆ ಸ್ವಚ್ಛಗೊಳಿಸಲು ಕಷ್ಟವಾಗಬಹುದು. ಮನೆಯನ್ನು ಬದಲಾಯಿಸಿದ ನಂತರವೂ ಕೊಳಕು ಕಾಣುತ್ತದೆ. ಹೀಗಾಗಿ ಹೊಸ ಮನೆಗೆ ಬಂದ ನಂತರ ಮೊದಲ ದಿನದಿಂದಲೇ ಮನೆಯನ್ನು ಶುಚಿಯಾಗಿಡಿ.

ಪ್ಯಾಕಿಂಗ್ ವಿಧಾನ

ಹೊಸ ಮನೆಗೆ ಬದಲಾಯಿಸುವ ಮೊದಲು ಹಳೆಯ ವಸ್ತುಗಳನ್ನು ಪ್ಯಾಕಿಂಗ್ ಮಾಡುವುದು ದೊಡ್ಡ ಸಮಸ್ಯೆಯಾಗಿದೆ. ಆದ್ಧರಿಂದ ಸರಕುಗಳನ್ನು ಪ್ಯಾಕ್ ಮಾಡುವಾಗ ಪೆಟ್ಟಿಗೆಯಲ್ಲಿ ಹೆಸರನ್ನು ಬರೆಯಿರಿ. ಇದರಿಂದಾಗಿ ಬಾಕ್ಸ್ ತೆರೆಯುವಾಗ ಯಾವೂದೇ ಗೊಂದಲ ಉಂಟಾಗುವುದಿಲ್ಲ.

ಪೀಠೋಪಕರಣಗಳ ಬಗ್ಗೆಯೂ ಕಾಳಜಿ ವಹಿಸಿ​

ಸ್ಥಳಾಂತರಗೊಳ್ಳುವ ಮೊದಲು, ಮನೆಯ ಪೀಠೋಪಕರಣಗಳು ನಿಮ್ಮ ಅಗತ್ಯಗಳಿಗೆ ಸರಿಹೊಂದುತ್ತವೆಯೇ ಅಥವಾ ಇಲ್ಲವೇ ಎಂಬುದನ್ನು ಸಹ ನೀವು ಪರಿಶೀಲಿಸಬೇಕು. ನಿಮಗೆ ಸರಿಹೊಂದುವ ಸ್ಥಳದಲ್ಲಿ ಹಾಗೂ ಕೆಲವೊಂದು ವಸ್ತುಗಳನ್ನು ವಾಸ್ತು ಪ್ರಕಾರವೇ ಇಡಬೇಕಾಗುತ್ತದೆ. ಆದ್ದರಿಂದ ಅದರ ಬಗ್ಗೆ ಕಾಳಜಿ ವಹಿಸಿ.

Continue Reading

LATEST NEWS

Trending