Connect with us

KADABA

ಹುಡುಗಿ ವಿಚಾರದಲ್ಲಿ ಬೆದರಿಸಿ ಮಂಗಳೂರು ಯುವಕನಿಗೆ ಕಡಬದ ಯುವಕರಿಂದ ಹಣಕ್ಕೆ ಡಿಮ್ಯಾಂಡ್: ಓರ್ವ ಅರೆಸ್ಟ್-ಇದೇನಾ ಹನಿಟ್ರ್ಯಾಪ್..?

Published

on

ಕಡಬ: ಮಂಗಳೂರು ಭಾಗದ ಯುವಕನೋರ್ವ ಕಡಬದ ಯುವಕರ ತಂಡದಿಂದ ಹನಿಟ್ರ್ಯಾಪ್‌ಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನೆಲೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಡಬದಲ್ಲಿ ನಡೆದಿದೆ.


ಸಾಮಾಜಿಕ ಜಾಲತಾಣದಲ್ಲಿ ಯುವತಿಯೋರ್ವಳ ಹೆಸರಿನಲ್ಲಿ ಫೇಕ್ ಅಕೌಂಟ್ ತೆರೆದ ಕಡಬ ಯುವಕರ ತಂಡ ಮಂಗಳೂರಿನ ಯುವಕನನ್ನು ಯಾವುದೋ ನೆವನಕ್ಕೆ ಕಡಬಕ್ಕೆ ಕರೆಸಿದ್ದು ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಕೇಳಿದಷ್ಟು ಹಣ ನೀಡದಿದ್ದರೆ ಹುಡುಗಿಯ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಅಷ್ಟೇ ಅಲ್ಲದೆ ಈತನ ಮೇಲೆ ಹಲ್ಲೆ ಕೂಡಾ ನಡೆದಿದೆ. ಹಲ್ಲೆಗೊಳಗಾದ ಈತ ಸ್ನೇಹಿತರ ಸಹಾಯದಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ವಿಷಯ ತಿಳಿದು ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರ ತಂಡ ಸಂತ್ರಸ್ತನ ಮೂಲಕವೇ ಹಣವನ್ನು ನೀಡುವುದಾಗಿ ಆರೋಪಿಗಳಿಗೆ ಆಮಿಷವೊಡ್ಡಿ ಕರೆಸಿದ್ದಾರೆ.

ಆದರೆ ಪೊಲೀಸರ ಬಗ್ಗೆ ವಿಷಯ ತಿಳಿದ ಇಬ್ಬರು ಎಸ್ಕೇಪ್ ಆಗಿದ್ದು ಒಬ್ಬ ಮಾತ್ರ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಉರುಳಿ ಬಿದ್ದ ಆಟೋ..!! ಚಾಲಕ ಗಂಭೀರ

Published

on

ಕಡಬ: ನಾಯಿ ಒಂದು ಸಡನ್ ಆಗಿ ರಸ್ತೆಗೆ ಅಡ್ಡ ಬಂದ ಕಾರಣ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಟೋ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಅಟೋ ಉರುಳಿ ಬಿದ್ದ ಕಾರಣ ಅಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಅಪಘಾತ ನಡೆದಿದ್ದು, ಅಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಬ್ರಹ್ಮಣ್ಯ ನಾಯ್ಕ ಅವರು ಅಟೋ ಚಲಾಯಿಸಿಕೊಂಡು ಆಲಂಗಾರು ಕಡೆ ಬರುತ್ತಿದ್ದಾಗ ಇಕ್ಕಟ್ಟಾದ ರಸ್ತೆಯಲ್ಲಿ ನಾಯಿ ಒಂದು ಧಿಡೀರ್ ಆಗಿ ರಸ್ತೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ನಾಯಿಯನ್ನು ರಕ್ಷಿಸಲು ತಕ್ಷಣ ಅಟೋದ ಬ್ರೇಕ್‌ ಹಿಡಿದಾಗ ಅಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಅಟೋದಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಅನಾಹುತ ನಡೆದಿಲ್ಲ. ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರು ಕಾಲು ಮುರಿತಕ್ಕೆ ಒಳಗಾಗಿದ್ದಲ್ಲದೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಪುತ್ತೂರು ಆಸ್ಪತ್ರೆಗೆ ರವಾನಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

LATEST NEWS

Trending