Saturday, February 4, 2023

ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ ತನಿಖೆ ಚುರುಕು-ನಾಳೆ ಗೃಹಸಚಿವ, DGP ಸೂದ್ ಮಂಗಳೂರಿಗೆ

ಮಂಗಳೂರು: ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.


ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಭೇಟಿ ಸಂದರ್ಭದಲ್ಲಿ ಸಚಿವರು, ಬಾಂಬ್ ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಅವರನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.


ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಮಂಗಳೂರು ಆಟೋ ರಿಕ್ಷಾ ಬಾಂಬ್ ಸ್ಫೋಟ ಘಟನೆಯನ್ನು ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಭಯೋತ್ಪಾದನೆ ಚಟುವಟಿಕೆಗಳನ್ನು ಆಮೂಲಾಗ್ರವಾಗಿ ತನಿಖೆ ಮಾಡಿ, ದ್ರೋಹಿಗಳನ್ನು ಮಟ್ಟ ಹಾಕಲು ಪೋಲಿಸರು ಶ್ರಮಿಸುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳವೂ ಇದಕ್ಕೆ ಸಹಕರಿಸುತ್ತಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಮುಸ್ಲಿಂ ಯುವಕನನ್ನು ವರಿಸಿದ ನೆದರ್ಲೆಂಡ್ ಕ್ರೈಸ್ತ ಕನ್ಯೆ..!

ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು, ಯಾರಿಗೆ, ಯಾವಾಗ, ಯಾರಮೇಲಾದರೂ ಎಲ್ಲಿ ಬೇಕಾದರೂ ಪ್ರೀತಿ ಹುಟ್ಟಬಹುದು. ಮಂಗಳೂರು: ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ,...

ಮುಲ್ಕಿ : ಇಬ್ಬರ ಸಾವಿಗೆ ಕಾರಣರಾದ ತುಳು ಕಾಮಿಡಿಯನ್ ಅರ್ಪಿತ್ ಅರೆಸ್ಟ್..!

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರುಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ...

ದಕ್ಷಿಣ ಅಮೇರಿಕದಲ್ಲಿ ಭಾರಿ ಬೆಂಕಿ ದುರಂತ : ಕಾಡ್ಗಿಚ್ಚಿಗೆ 13 ಬಲಿ – ಸಾವಿರಾರು ಎಕರೆ ಅರಣ್ಯ ಬೆಂಕಿಗೆ ಆಹುತಿ..!

ಚಿಲಿ : ದಕ್ಷಿಣ ಅಮೇರಿಕದ ಚಿಲಿ ರಾಜಧಾನಿಯ ಸ್ಯಾಂಟಿಯಾಗೋ ಸಮೀಪ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು, ಕಾಡ್ಗಿಚ್ಚಿನ ಕಾರಣದಿಂದ ಸಾವಿರಾರು ಎಕರೆ ಅರಣ್ಯ ಹೊತ್ತಿ ಉರಿದು, 13ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 35,000 ಎಕರೆ ಪ್ರದೇಶ...